ಮುಡಾ ಹಗರಣ ಕೇಸ್: ಸಿದ್ದರಾಮಯ್ಯ ವಿರುದ್ಧ ECIR ದಾಖಲು, ಸಿಎಂಗೆ ಶುರುವಾಯ್ತು ಇಡಿ ಸಂಕಷ್ಟ!

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್​ಐಆರ್​ ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಎಂ ರಾಜೀನಾಮೆಗೆ ಒತ್ತಡ ಹೆಚ್ಚಾಗಿದೆ. ಇದರ ಮಧ್ಯ ಇದೀಗ ಸಿದ್ದರಾಮಯ್ಯಗೆ ಜಾರಿ ನಿರ್ದೇಶನಾಲಯ (ಇಡಿ) ಸಂಕಷ್ಟ ಎದುರಾಗಿದೆ. ಲೋಕಾಯುಕ್ತ FIR ಆಧರಿಸಿ ಇಡಿ ECIR ದಾಖಲಿಸಿದೆ. ಹಾಗಾದ್ರೆ, ಏನಿದು ECIR? ಈ ECIR ಅಡಿಯಲ್ಲಿ ಇಡಿ ಏನೆಲ್ಲಾ ಮಾಡಬಹುದು? ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಮುಡಾ ಹಗರಣ ಕೇಸ್: ಸಿದ್ದರಾಮಯ್ಯ ವಿರುದ್ಧ ECIR ದಾಖಲು, ಸಿಎಂಗೆ ಶುರುವಾಯ್ತು ಇಡಿ ಸಂಕಷ್ಟ!
ಸಿಎಂ ಸಿದ್ದರಾಮಯ್ಯ
Follow us
ರಮೇಶ್ ಬಿ. ಜವಳಗೇರಾ
|

Updated on:Sep 30, 2024 | 8:06 PM

ಬೆಂಗಳೂರು, (ಸೆಪ್ಟೆಂಬರ್ 30): ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು…ಇದೇ ಮುಡಾ ಕೇಸ್‌ನಲ್ಲಿ ಸಿದ್ದರಾಮಯ್ಯ ವಿರುದ್ಧ ಇಡಿಯಲ್ಲೂ ಇಸಿಐಆರ್‌ (ಎನ್​​ಫೋರ್ಸ್ ಮೆಂಟ್ ಕೇಸ್ ಇನ್ಫರ್ಮೇಷನ್ ರಿಪೋರ್ಟ್ ) ದಾಖಲಾಗಿದೆ. ಇಂದು (ಸೆಪ್ಟೆಂಬರ್ 30) ಬೆಂಗಳೂರಿನ ಇಡಿ ಕಚೇರಿಯಲ್ಲಿ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಜಾರಿ ನಿರ್ದೇಶನಾಲಯ ಸಿಎಂ ವಿರುದ್ಧ ಇಸಿಐಆರ್‌ ದಾಖಲಿಸಿದೆ. ಈ ಹಿನ್ನೆಲೆಯ ಲ್ಲಿ ಸಿದ್ದರಾಮಯ್ಯಗೆ ಡಬಲ್​ ಸಂಕಷ್ಟ ಎದುರಾದಂತಾಗುತ್ತದೆ.

PMLA ಕಾಯ್ದೆಯಡಿ ECIR ದಾಖಲಾಗಿದ್ದು, ಪೊಲೀಸರ FIRಗೆ ಸರಿ ಸಮಾನವಾದದ್ದು ಈ ಇಡಿ ECIR. ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ವಿಶೇಷಾಧಿಕಾರವಿದೆ. ಸಮನ್ಸ್ ನೀಡಿ ವಿಚಾರಣೆಗೆ ಕರೆಯಬಲ್ಲ ಅಧಿಕಾರ ಇಡಿಗಿದೆ. ಅಲ್ಲದೇ ತನಿಖೆ ಹಂತದಲ್ಲಿ ಆಸ್ತಿಗಳನ್ನ ಸೀಜ್ ಮಾಡುವ ಅಧಿಕಾರವಿದೆ.

ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣ ಅವರು ಇಂದು ತಮ್ಮವರ ಮೂಲಕ ಇಡಿ ಕಚೇರಿಗೆ ದೂರು ತಲುಪಿಸಿದ್ದು, ಇದೀಗ ಇಡಿ ಅಧಿಕಾರಿಗಳು ದೂರು ದಾಖಲಿಸಿಕೊಂಡು ಸ್ವೀಕೃತಿ ಪತ್ರ ಸಹ ನೀಡಿದ್ದಾರೆ. ಇದರ ಬೆನ್ನಲ್ಲೇ ಇಡಿ  ಸಿಎಂ ವಿರುದ್ಧ ಇಸಿಐಆರ್‌ ದಾಖಲಿಸಿದೆ.

ಇದನ್ನೂ ಓದಿ: ಮುಡಾ ಹಗರಣದ ಅಸಲಿ ತನಿಖೆ ಶುರು: ಸದ್ಯಕ್ಕೆ ಸಿಎಂಗಿಲ್ಲ ಲೋಕಾಯುಕ್ತ ಟೆನ್ಷನ್!

ಮುಡಾ ಹಗರಣ ಸಂಬಂಧಿಸಿದಂತೆ ಇಡಿಗೆ ದೂರು ನೀಡದ್ದ ಸ್ನೇಹಮಹಿ ಕೃಷ್ಣ. ಇನ್ನು ಈ ಬಗ್ಗೆ ಖುದ್ದು ಟಿವಿ9ಗೆ ಪ್ರತಿಕ್ರಿಯಿಸಿರುವ ಸ್ನೇಹಮಹಿ ಕೃಷ್ಣ,ಇಂದು ಇಡಿಗೆ ದೂರು ನೀಡಿದ್ದೆ. ದೂರಿಗೆ ಸ್ವೀಕೃತಿಯನ್ನು ನೀಡಿದ್ದಾರೆ. ದೂರನ್ನು ಸ್ವೀಕರಿಸಿ PMLA 2001 ಅಡಿಯಲ್ಲಿ ಬರುತ್ತಾದಾ ಎಂದು ತನಿಖೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಒಂದೆಡೆ ಇಡಿ ಮತ್ತೊಂದು ಕಡೆ ಸಿಬಿಐ ತೂಗುಗತ್ತಿ

ಲೋಕಾಯುಕ್ತ ತನಿಖೆ ಜೊತೆಗೆ ಸಿಎಂ ಸಿದ್ದರಾಮಯ್ಯ ಜೊತೆಗೆ ಡಬಲ್ ಟೆನ್ಷನ್ ಶುರುವಾಗಿದೆ. ಒಂದ್ಕಡೆ ಸಿಬಿಐ ತನಿಖೆಗೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೊರೆ ಹೋಗಿದ್ದಾರೆ. ಲೋಕಾಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿ ನಡೆಯುವ ಸಂಸ್ಥೆಯಾಗಿದೆ. ಹೀಗಾಗಿ ಪಾರದರ್ಶಕ ತನಿಖೆಯಾಗ್ಬೇಕು ಅಂದ್ರೆ ಸಿಬಿಐಗೆ ಕೊಡಿ ಎಂದು ಮನವಿ ಮಾಡಿದ್ದಾರೆ. ಈ ಸಂಬಂಧ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ದಸರಾ ರಜೆ ಬಳಿಕ ಈ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಗಳಿವೆ. ಮತ್ತೊಂದಡೆ ಇದೀಗ ಇಡಿ ಅಧಿಕಾರಿಗಳಿಗೂ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:11 pm, Mon, 30 September 24

‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್