ಬೆಂಗಳೂರು, (ಸೆಪ್ಟೆಂಬರ್ 30): ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು…ಇದೇ ಮುಡಾ ಕೇಸ್‌ನಲ್ಲಿ ಸಿದ್ದರಾಮಯ್ಯ ವಿರುದ್ಧ ಇಡಿಯಲ್ಲೂ ಇಸಿಐಆರ್ (ಎನ್ಫೋರ್ಸ್ ಮೆಂಟ್ ಕೇಸ್ ಇನ್ಫರ್ಮೇಷನ್ ರಿಪೋರ್ಟ್ ) ದಾಖಲಾಗಿದೆ. ಇಂದು (ಸೆಪ್ಟೆಂಬರ್ 30) ಬೆಂಗಳೂರಿನ ಇಡಿ ಕಚೇರಿಯಲ್ಲಿ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಜಾರಿ ನಿರ್ದೇಶನಾಲಯ ಸಿಎಂ ವಿರುದ್ಧ ಇಸಿಐಆರ್ ದಾಖಲಿಸಿದೆ. ಈ ಹಿನ್ನೆಲೆಯ ಲ್ಲಿ ಸಿದ್ದರಾಮಯ್ಯಗೆ ಡಬಲ್ ಸಂಕಷ್ಟ ಎದುರಾದಂತಾಗುತ್ತದೆ.
PMLA ಕಾಯ್ದೆಯಡಿ ECIR ದಾಖಲಾಗಿದ್ದು, ಪೊಲೀಸರ FIRಗೆ ಸರಿ ಸಮಾನವಾದದ್ದು ಈ ಇಡಿ ECIR. ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ವಿಶೇಷಾಧಿಕಾರವಿದೆ. ಸಮನ್ಸ್ ನೀಡಿ ವಿಚಾರಣೆಗೆ ಕರೆಯಬಲ್ಲ ಅಧಿಕಾರ ಇಡಿಗಿದೆ. ಅಲ್ಲದೇ ತನಿಖೆ ಹಂತದಲ್ಲಿ ಆಸ್ತಿಗಳನ್ನ ಸೀಜ್ ಮಾಡುವ ಅಧಿಕಾರವಿದೆ.
ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣ ಅವರು ಇಂದು ತಮ್ಮವರ ಮೂಲಕ ಇಡಿ ಕಚೇರಿಗೆ ದೂರು ತಲುಪಿಸಿದ್ದು, ಇದೀಗ ಇಡಿ ಅಧಿಕಾರಿಗಳು ದೂರು ದಾಖಲಿಸಿಕೊಂಡು ಸ್ವೀಕೃತಿ ಪತ್ರ ಸಹ ನೀಡಿದ್ದಾರೆ. ಇದರ ಬೆನ್ನಲ್ಲೇ ಇಡಿ ಸಿಎಂ ವಿರುದ್ಧ ಇಸಿಐಆರ್ ದಾಖಲಿಸಿದೆ.
ಇದನ್ನೂ ಓದಿ: ಮುಡಾ ಹಗರಣದ ಅಸಲಿ ತನಿಖೆ ಶುರು: ಸದ್ಯಕ್ಕೆ ಸಿಎಂಗಿಲ್ಲ ಲೋಕಾಯುಕ್ತ ಟೆನ್ಷನ್!
ಮುಡಾ ಹಗರಣ ಸಂಬಂಧಿಸಿದಂತೆ ಇಡಿಗೆ ದೂರು ನೀಡದ್ದ ಸ್ನೇಹಮಹಿ ಕೃಷ್ಣ. ಇನ್ನು ಈ ಬಗ್ಗೆ ಖುದ್ದು ಟಿವಿ9ಗೆ ಪ್ರತಿಕ್ರಿಯಿಸಿರುವ ಸ್ನೇಹಮಹಿ ಕೃಷ್ಣ,ಇಂದು ಇಡಿಗೆ ದೂರು ನೀಡಿದ್ದೆ. ದೂರಿಗೆ ಸ್ವೀಕೃತಿಯನ್ನು ನೀಡಿದ್ದಾರೆ. ದೂರನ್ನು ಸ್ವೀಕರಿಸಿ PMLA 2001 ಅಡಿಯಲ್ಲಿ ಬರುತ್ತಾದಾ ಎಂದು ತನಿಖೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಲೋಕಾಯುಕ್ತ ತನಿಖೆ ಜೊತೆಗೆ ಸಿಎಂ ಸಿದ್ದರಾಮಯ್ಯ ಜೊತೆಗೆ ಡಬಲ್ ಟೆನ್ಷನ್ ಶುರುವಾಗಿದೆ. ಒಂದ್ಕಡೆ ಸಿಬಿಐ ತನಿಖೆಗೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೊರೆ ಹೋಗಿದ್ದಾರೆ. ಲೋಕಾಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿ ನಡೆಯುವ ಸಂಸ್ಥೆಯಾಗಿದೆ. ಹೀಗಾಗಿ ಪಾರದರ್ಶಕ ತನಿಖೆಯಾಗ್ಬೇಕು ಅಂದ್ರೆ ಸಿಬಿಐಗೆ ಕೊಡಿ ಎಂದು ಮನವಿ ಮಾಡಿದ್ದಾರೆ. ಈ ಸಂಬಂಧ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ದಸರಾ ರಜೆ ಬಳಿಕ ಈ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಗಳಿವೆ. ಮತ್ತೊಂದಡೆ ಇದೀಗ ಇಡಿ ಅಧಿಕಾರಿಗಳಿಗೂ ದೂರು ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:11 pm, Mon, 30 September 24