AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಹಗರಣ: ಕಾಂಗ್ರೆಸ್​ ಶಾಸಕ ನಾಗೇಂದ್ರನನ್ನು ಅಧಿಕೃತವಾಗಿ ಬಂಧಿಸಿದ ಇಡಿ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಇಡಿ ಅಧಿಕಾರಿಗಳು ಕಾಂಗ್ರೆಸ್​ ಶಾಸಕ ನಾಗೇಂದ್ರನನ್ನು ಬಂಧಿಸಿದ್ದಾರೆ. ಕಳೆದ ಮೂರು ದಿನಗಳಿಂದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು, ನಾಗೇಂದ್ರಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ , ಅವುಗಳ ಬಗ್ಗೆ ವಿಚಾರಣೆ ನಡೆಸಿತು. ವಿಚಾರಣೆ ಬಳಿಕ ಇದೀಗ ಇಡಿ, ನಾಗೇಂದ್ರನನ್ನು ಅಧಿಕೃತವಾಗಿ ಬಂಧಿಸಿದೆ.

ವಾಲ್ಮೀಕಿ ಹಗರಣ: ಕಾಂಗ್ರೆಸ್​ ಶಾಸಕ ನಾಗೇಂದ್ರನನ್ನು ಅಧಿಕೃತವಾಗಿ ಬಂಧಿಸಿದ ಇಡಿ
ಶಾಸಕ ನಾಗೇಂದ್ರ
Jagadisha B
| Updated By: ರಮೇಶ್ ಬಿ. ಜವಳಗೇರಾ|

Updated on:Jul 12, 2024 | 8:28 PM

Share

ಬೆಂಗಳೂರು, (ಜುಲೈ 12): ಕರ್ನಾಟಕ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರನನ್ನು ಇಡಿ ಅಧಿಕಾರಿಗಳು ಅಧಿಕೃತವಾಗಿ ಬಂಧಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಅವರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡಿದ್ದರು. ದಾಳಿ ವೇಳೆ ಸಿಕ್ಕ ಕೆಲ ಮಹತ್ವದ ದಾಖಲೆಗಳ ಬಗ್ಗೆ ಮಾಹಿತಿ ಪಡೆಯಲು ಇಡಿ, ಇಂದು (ಜುಲೈ 11) ಬೆಳಗ್ಗೆ ನಾಗೇಂದ್ರನನ್ನು ವಶಕ್ಕೆ ಪಡೆದುಕೊಂಡಿದ್ದು, ಸಂಜೆವರೆಗೂ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಇದೀಗ ಅಂತಿಮವಾಗಿ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ನಾಗೇಂದ್ರ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಬೇಕಿದೆ. ಹೀಗಾಗಿ ಇಡಿ ಅಧಿಕಾರಿಗಳು ಈಗಾಗಲೇ ನಾಗೇಂದ್ರನನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ನೇರವಾಗಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

ಇದನ್ನೂ ಓದಿ: ಇಡಿ ಬಿಟ್ಟರು ತಪ್ಪದ ಎಸ್​ಐಟಿ ಕಾಟ: ಪತ್ತೆ ವಿಚಾರಣೆಗೆ ಹಾಜರಾಗುವಂತೆ ದದ್ದಲ್​ಗೆ ನೋಟಿಸ್

ಕೋರ್ಟ್​​ ಸಮಯದ ಅವಧಿ ಮುಗಿದಿದ್ದರಿಂದ ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆದುಕೊಂಡು ಹೋಗಲಿದ್ದಾರೆ. ಈ ವೇಳೆ ಇನ್ನಷ್ಟು ವಿಚಾರಣೆ ಮಾಡಬೇಕಿರುವುದರಿಂದ ಆರೋಪಿಯನ್ನು ಕಸ್ಟಡಿಗೆ ನೀಡುವಂತೆ ಇಡಿ ಅಧಿಕಾರಿಗಳು ಮನವಿ ಮಾಡುವ ಸಾಧ್ಯತೆಗಳಿವೆ.

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ (Valmiki Scheduled Tribes Development Corporation) 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಮೊನ್ನೆ ನಾಗೇಂದ್ರ ನಿವಾಸದ ಮೇಲೆ ಇಡಿ ದಾಳಿ ಮಾಡಿತ್ತು. ಸುಮಾರು 38 ಗಂಟೆಗಳ ಕಾಲ ಬೆಂಗಳೂರು ಮತ್ತು ಬಳ್ಳಾರಿ ನಿವಾಸದಲ್ಲಿ ದಾಖಲೆ ಪರಿಶೀನಲೆ ನಡೆಸಿತ್ತು. ಬಳಿಕ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು(ಶುಕ್ರವಾರ) ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದರು. ನಂತರ ಶಾಂತಿನಗರದಲ್ಲಿರುವ ಕಚೇರಿಗೆ ಕರೆದುಕೊಂಡು ಹೋಗಿ ತೀವ್ರ ವಿಚಾರಣೆಗೊಳಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:07 pm, Fri, 12 July 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ