AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಶಾಸಕ ನಾಗೇಂದ್ರ ಇಡಿ ವಶಕ್ಕೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಶಾಸಕ ನಾಗೇಂದ್ರ ಇಡಿ ವಶಕ್ಕೆ
ಶಾಸಕ ಬಿ ನಾಗೇಂದ್ರ
ರಮೇಶ್ ಬಿ. ಜವಳಗೇರಾ
| Edited By: ವಿವೇಕ ಬಿರಾದಾರ|

Updated on:Jul 12, 2024 | 9:14 AM

Share

ಬೆಂಗಳೂರು, ಜುಲೈ 12: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ (Valmiki Scheduled Tribes Development Corporation) 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ವಶಕ್ಕೆ ಪಡೆದುಕೊಂಡರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಕೇಸ್​ನಲ್ಲಿ ಈಗಾಗಲೇ ಸಿಬಿಐ ಸಹ ತನಿಖೆ ನಡೆಸಿದೆ. ಇದರ ಬೆನ್ನಲ್ಲೇ ಏಕಾಏಕಿ ಇಡಿ ಅಧಿಕಾರಿಗಳು ಬುಧವಾರ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ನಿವಾಸಗಳ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಬುಧವಾರ ಬೆಳ್ಳಂಬೆಳಗ್ಗೆ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕರಾದ ನಾಗೇಂದ್ರ ನಿವಾಸದ ಮೇಲೆ ಈಟಿ ಅಧಿಕಾರಿಗಳು ದಾಳಿ ಮಾಡಿದ್ದು, ಬಳಿಕ ಇಡಿ ಅಧಿಕಾರಿಗಳು  ಬೆಂಗಳೂರಿನಲ್ಲಿ ನಾಗೇಂದ್ರ ಆಪ್ತ ಸಹಾಯ ಹರೀಶ್ ಎಂಬುವರನ್ನು  ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು. ಈ ವೇಳೆ ಹರೀಶ್ ನೀಡಿದ ಕೆಲ ಮಾಹಿತಿ ಆಧಾರದ ಮೇಲೆ ಶಾಸಕ ನಾಗೇಂದ್ರನ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾಗೇಂದ್ರ ಪಿಎ ಹರೀಶ್​ ಬಂಧನ, ಯಾರು ಈತ? ಇಲ್ಲಿದೆ ವಿವರ

ಶಾಸಕ ನಾಗೇಂದ್ರ ವಿರುದ್ಧ ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿದ ಆರೋಪ ಕೇಳಿ ಬಂದಿದೆ. ಹೈದರಾಬಾದ್‌ನ ಸತ್ಯನಾರಾಯಣ ವರ್ಮಾನಿಂದ ಬಂದಿದ್ದ ಹಣ ನಾಗೇಂದ್ರ ಪಿಎ ಹರೀಶ್‌ಗೆ ತಲುಪಿತ್ತು ಎನ್ನಲಾಗಿದೆ. ಅಲ್ಲದೆ ಏಪ್ರಿಲ್ ತಿಂಗಳಿನ ಎರಡನೇ ವಾರ ಪದ್ಮನಾಭನಿಂದ ಹರೀಶ್‌ 25 ಲಕ್ಷ ಹಣ ಪಡೆದಿದ್ದನು. ಈ ಬಗ್ಗೆ ಪಿಎ ಹರೀಶ್‌ಗೆ ಹಣ ನೀಡಿದ್ದಾಗಿ ಖುದ್ದು ಪದ್ಮನಾಭ್ ಹೇಳಿಕೆ ನೀಡಿದ್ದರು.

ನಾಗೇಂದ್ರ ಪರ ಹವಾಲಾ ಹಣ ಮತ್ತು ಚಿನ್ನದ ಬಿಸ್ಕೆಟ್‌ ಪಡೆದ ಆರೋಪ ಇದ್ದು, ಮಾಜಿ ಸಚಿವ ನಾಗೇಂದ್ರ ಪರ 50ರಿಂದ 60 ಕೋಟಿ ವ್ಯವಹಾರ ನಡೆದಿದೆ ಎನ್ಣುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಹರೀಶ್‌ನನ್ನು ಇಡಿ ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೊದಲು ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿರುವುದು ಬೆಳಕಿಗೆ ಬಂದ ನಂತರ ವಿಪಕ್ಷಗಳು ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ್ದವು. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ನಾಗೇಂದ್ರ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರು ಮತ್ತು ಕ್ರೀಡಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:58 am, Fri, 12 July 24

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ