ಡಿಕೆಶಿ ಬೆನ್ನಿಗೇ.. ಲಕ್ಷ್ಮೀ ಹೆಬ್ಬಾಳ್ಕರ್ಗೂ ಬುಲಾವ್ ನೀಡಿದ ಇ.ಡಿ!
ಬೆಳಗಾವಿ: ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಈಗಾಗಲೇ ಇಡಿ ಅಧಿಕಾರಿಗಳ ವಶದಲ್ಲಿದ್ದಾರೆ. ಈ ಮಧ್ಯೆ, ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ಗೂ ಇ.ಡಿ ಅಧಿಕಾರಿಗಳು ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಬೆಳವಣಿಗೆಯನ್ನು ಖಚಿತಪಡಿಸಿರುವ ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ನೋಟಿಸ್ ನೀಡಿರುವುದು ನಿಜ. ನಾಳೆ ದೆಹಲಿಗೆ ತೆರಳಿ, ವಿಚಾರಣೆಗೆ ಹಾಜರಾಗುತ್ತೇನೆ ಎಂದು ಟಿವಿ9ಗೆ ಸ್ಪಷ್ಟಪಡಿಸಿದ್ದಾರೆ. ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ […]
ಬೆಳಗಾವಿ: ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಈಗಾಗಲೇ ಇಡಿ ಅಧಿಕಾರಿಗಳ ವಶದಲ್ಲಿದ್ದಾರೆ. ಈ ಮಧ್ಯೆ, ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ಗೂ ಇ.ಡಿ ಅಧಿಕಾರಿಗಳು ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಈ ಬೆಳವಣಿಗೆಯನ್ನು ಖಚಿತಪಡಿಸಿರುವ ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ನೋಟಿಸ್ ನೀಡಿರುವುದು ನಿಜ. ನಾಳೆ ದೆಹಲಿಗೆ ತೆರಳಿ, ವಿಚಾರಣೆಗೆ ಹಾಜರಾಗುತ್ತೇನೆ ಎಂದು ಟಿವಿ9ಗೆ ಸ್ಪಷ್ಟಪಡಿಸಿದ್ದಾರೆ.
ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸೆ.14ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ಕಾರಣಾಂತರಗಳಿಂದ ಅಂದು ವಿಚಾರಣೆಗೆ ಬರಲು ಆಗುವುದಿಲ್ಲ, ಮತ್ತೊಂದು ಡೇಟ್ ನೀಡುವಂತೆ ಅಧಿಕಾರಿಗಳನ್ನು ಕೇಳಿದ್ದೆ. ಹೀಗಾಗಿ ಸೆ.19ರಂದು ವಿಚಾರಣೆಗೆ ಹಾಜರಾಗುವಂತೆ ನನಗೆ ಮತ್ತೊಂದು ನೋಟಿಸ್ ನೀಡಿದ್ದಾರೆ. ನಾಳೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.
ಡಿಕೆ ಶಿವಕುಮಾರ್ ಕೇಸ್ನಲ್ಲಿ ಸಾಕ್ಷಿಯಾಗಿ ವಿಚಾರಣೆಗೆ ಇ.ಡಿ ಅಧಿಕಾರಿಗಳು ಕರೆದಿದ್ದಾರೆ. ನಾನು ಸೇರಿದಂತೆ ಒಟ್ಟು 184 ಜನರನ್ನು ಕರೆದು ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುವ ಮಾಹಿತಿ ಇದೆಯೆಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
Published On - 5:12 pm, Tue, 17 September 19