ED Raid: ಬೆಂಗಳೂರು, ದಾವಣಗೆರೆಯಲ್ಲಿ ಇ.ಡಿ ದಾಳಿ; ಕೋಟ್ಯಂತರ ಮೌಲ್ಯದ ಆಸ್ತಿ, ನಗದು ಪತ್ತೆ

ಬ್ಯಾಂಕ್​​ಗೆ ವಂಚನೆ ಪ್ರಕರಣ ಸಂಬಂಧ 2 ಜಿಲ್ಲೆಗಳಲ್ಲಿ ಏಳು ಕಡೆ ದಾಳಿ ನಡೆಸಲಾಗಿದೆ. ದಾಳಿ ವೇಳೆ 100 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ, 14 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.

ED Raid: ಬೆಂಗಳೂರು, ದಾವಣಗೆರೆಯಲ್ಲಿ ಇ.ಡಿ ದಾಳಿ; ಕೋಟ್ಯಂತರ ಮೌಲ್ಯದ ಆಸ್ತಿ, ನಗದು ಪತ್ತೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Jun 07, 2023 | 6:34 PM

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ದಾವಣಗೆರೆಯಲ್ಲಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬುಧವಾರ ದಾಳಿ (ED Raid) ನಡೆಸಿದ್ದು, ಕೋಟ್ಯಂತರ ಮೌಲ್ಯದ ಆಸ್ತಿ ಮತ್ತು ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿದೆ. ಭಾರತ್​ ಇನ್ಫ್ರಾ ಎಕ್ಸ್​ಪೋರ್ಟ್​​ ಆ್ಯಂಡ್ ಇಂಪೋರ್ಟ್​​ ಲಿಮಿಟೆಡ್​ನಿಂದ ವಂಚನೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಈ ದಾಳಿ ನಡೆದಿದೆ.

ಬ್ಯಾಂಕ್​​ಗೆ ವಂಚನೆ ಪ್ರಕರಣ ಸಂಬಂಧ 2 ಜಿಲ್ಲೆಗಳಲ್ಲಿ ಏಳು ಕಡೆ ದಾಳಿ ನಡೆಸಲಾಗಿದೆ. ದಾಳಿ ವೇಳೆ 100 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ, 14 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಹಲವು ದಾಖಲೆಗಳು ಹಾಗೂ ಡಿಜಿಟಲ್ ಡಿವೈಸ್​​ಗಳನ್ನೂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬ್ಯಾಂಕ್‌ ಖಾತೆ ಮಾಹಿತಿ ಸಂಗ್ರಹಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಖಾತೆಯನ್ನು ಜಪ್ತಿ ಮಾಡಿದ್ದಾರೆ.

ಈ ವಿಚಾರವಾಗಿ ಟ್ವೀಟ್​ ಮೂಲಕ ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದೆ.

ಓಡಾ ಕ್ಲಾಸ್ ಆ್ಯಪ್ ಮೂಲಕ ಆನ್‌ಲೈನ್ ಶಿಕ್ಷಣವನ್ನು ಒದಗಿಸುವ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯವು ಬೆಂಗಳೂರಿನ ಎರಡು ಕಡೆಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿತ್ತು.

ಇದನ್ನೂ ಓದಿ: ED Raid: ಬೆಂಗಳೂರು, ಮುಂಬೈ, ಚೆನ್ನೈನಲ್ಲಿರವ ವಿಹಾನ್ ಡೈರೆಕ್ಟ್ ಸೆಲ್ಲಿಂಗ್ ಇಂಡಿಯಾ ಕಚೇರಿ ಮೇಲೆ ಇಡಿ ದಾಳಿ: 90 ಕೋಟಿ ರೂ. ನಗದು ಜಪ್ತಿ

ಇದೀಗ ಮತ್ತೊಂದು ಕಂಪನಿ ಭಾರತ್​ ಇನ್ಫ್ರಾ ಎಕ್ಸ್​ಪೋರ್ಟ್​​ ಆ್ಯಂಡ್ ಇಂಪೋರ್ಟ್​​ ಲಿಮಿಟೆಡ್ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ನಗರದಲ್ಲಿ ಶೋಧ ನಡೆಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Wed, 7 June 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ