AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್: ಹೆಚ್ಚುವರಿ ಅಬಕಾರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ದಾಳಿ

ರಾಜ್ಯದಲ್ಲಿ ಇಡಿ ದಾಳಿಗಳು ತೀವ್ರಗೊಂಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಭಾವ ಹಾಗೂ ಅಬಕಾರಿ ಅಧಿಕಾರಿ ವೈ. ಮಂಜುನಾಥ್ ಮನೆಗಳ ಮೇಲೆ ದಾಳಿ ನಡೆದಿದೆ. ಬೇನಾಮಿ ಆಸ್ತಿ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದಡಿ ಬೆಂಗಳೂರು, ಬೆಳಗಾವಿ ಸೇರಿ ಆರು ಸ್ಥಳಗಳಲ್ಲಿ ನಡೆದ ಈ ದಾಳಿಯಲ್ಲಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.. ಇದು ಭ್ರಷ್ಟಾಚಾರ ವಿರುದ್ಧದ ಸಮರದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ಸಚಿವ ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್: ಹೆಚ್ಚುವರಿ ಅಬಕಾರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ದಾಳಿ
ವೈ. ಮಂಜುನಾಥ್, ಸತೀಶ್ ಜಾರಕಿಹೊಳಿ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jun 24, 2026 | 10:23 AM

Share

ಬೆಳಗಾವಿ, ಜೂ.24: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಲೋಕಾಯುಕ್ತ ಹಾಗೂ ಇಡಿ ದಾಳಿಗಳು ನಡೆಯುತ್ತಿದ್ದು, ಭ್ರಷ್ಟ ಅಧಿಕಾರಿಗಳಿಗೆ ಶಾಕ್​​ ಮೇಲೆ ಶಾಕ್​​ ನೀಡಲಾಗುತ್ತಿದೆ. ಇದೀಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರ ಸಹೋದರಿಯ ಪತಿ (ಭಾವ) ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ್ (Y. Manjunath) ಅವರಿಗೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಮುಂಜಾನೆ ಭರ್ಜರಿ ಶಾಕ್ ನೀಡಿದ್ದಾರೆ. ಬೇನಾಮಿ ಆಸ್ತಿ ಹಾಗೂ ಅಕ್ರಮ ಹಣ ವರ್ಗಾವಣೆ (Money Laundering) ಆರೋಪದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬುಧವಾರ ಮುಂಜಾನೆ 5:30 ಕ್ಕೆ ಏಕಕಾಲದಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು ಸೇರಿದಂತೆ ರಾಜ್ಯದ ಒಟ್ಟು 6 ಪ್ರಮುಖ ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.

ಬಳ್ಳಾರಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ವೈ. ದೇವೇಂದ್ರಪ್ಪ ಅವರ ಪುತ್ರ ಆಗಿರುವ ವೈ. ಮಂಜುನಾಥ್ ವಿರುದ್ಧ ಲಂಚದ ಹಣದ ಅಕ್ರಮ ಹೂಡಿಕೆ ಹಾಗೂ ಬೇನಾಮಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಸಂಪಾದಿಸಿರುವ ಗಂಭೀರ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡಗಳು ಎರಡು ಅಧಿಕೃತ ಕಾರುಗಳಲ್ಲಿ ಮುಂಜಾನೆಯೇ ದಾಳಿ ನಡೆಸಿ, ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ:

ಮುಖ್ಯಾಂಶಗಳು:

  • ಸಚಿವ ಸತೀಶ್ ಜಾರಕಿಹೊಳಿ ಭಾವಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ್ ಮೇಲೆ ಇಡಿ ದಾಳಿ
  • ಬೆಂಗಳೂರು, ಬೆಳಗಾವಿ, ಮೈಸೂರು ಸೇರಿದಂತೆ ರಾಜ್ಯದ ಒಟ್ಟು 6 ಪ್ರಮುಖ ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ
  • ಬೇನಾಮಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಸಂಪಾದಿಸಿರುವ ಗಂಭೀರ ಆರೋಪ

ಇಡಿ ಅಧಿಕಾರಿಗಳ ಬೇಟೆ ಕೇವಲ ಒಬ್ಬರ ಮನೆಗೆ ಸೀಮಿತವಾಗಿರದೆ, ಮಂಜುನಾಥ್ ಅವರ ಆಪ್ತ ವಲಯ ಹಾಗೂ ಸ್ನೇಹಿತರ ಮನೆಗಳಿಗೂ ವಿಸ್ತರಿಸಿದೆ. ಮಂಜುನಾಥ್ ಅವರ ಒಡೆತನದ ಹೈಟೆಕ್ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆದಿದ್ದು, ಸದ್ಯ ಮಂಜುನಾಥ್ ಅವರೂ ಸಹ ಅದೇ ಅಪಾರ್ಟ್‌ಮೆಂಟ್‌ನಲ್ಲಿದ್ದಾರೆ ಎನ್ನಲಾಗಿದೆ. ಮಂಜುನಾಥ್ ಅವರ ಸ್ವಗ್ರಾಮವಾದ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿರುವ ಇವರ ಎರಡು ಮನೆಗಳ ಮೇಲೆ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಇನ್ನು ಮಂಜುನಾಥ್ ಅವರ ಆಪ್ತ ಸ್ನೇಹಿತೆಯ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸುತ್ತಿದ್ದಾರೆ. ಅಥಣಿ ತಾಲೂಕಿನ ಐನಾಪುರ ಗ್ರಾಮದಲ್ಲಿರುವ ಮಂಜುನಾಥ್ ಅವರ ಆಪ್ತ ಗೆಳೆಯನ ನಿವಾಸದಲ್ಲಿ ಇಡಿ ಗ್ರೂಪ್ ಪರಿಶೀಲನೆ ನಡೆಸುತ್ತಿದೆ. ಇದರೊಂದಿಗೆ ಗೋವಾ ಸೇರಿದಂತೆ ಬೇರೆ ಪ್ರಮುಖ ಸ್ಥಳಗಳಲ್ಲೂ ಜಂಟಿ ಶೋಧ ಮುಂದುವರಿದಿದೆ.

ಇದನ್ನೂ ಓದಿ; ಕ್ರಾಸ್ ವೋಟಿಂಗ್ ಮಾಹಿತಿ ನೀಡಿದ ಬಿಜೆಪಿ ನಾಯಕರಿಗೆ ಹೈಕಮಾಂಡ್​ನಿಂದ ಸಾಲು ಸಾಲು ಪ್ರಶ್ನೆಗಳು!

ಅಬಕಾರಿ ಇಲಾಖೆಯ ಉನ್ನತ ಹುದ್ದೆಯಲ್ಲಿದ್ದುಕೊಂಡು ಮಂಜುನಾಥ್ ಅವರು ಬೇನಾಮಿ ಹೆಸರಿನಲ್ಲಿ ನೂರಾರು ಎಕರೆ ಜಮೀನು, ಕೋಟ್ಯಂತರ ಮೌಲ್ಯದ ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಖರೀದಿಸಿದ್ದಾರೆ ಎಂಬ ಆಪಾದನೆಗಳಿವೆ. ಗೋವಾ ಮತ್ತು ಮಹಾರಾಷ್ಟ್ರದ ಗಡಿ ಭಾಗದಲ್ಲಿ ನಡೆದಿದೆ ಎನ್ನಲಾದ ಕೆಲವು ಅಕ್ರಮ ವ್ಯವಹಾರಗಳ ಲಿಂಕ್ ಇಟ್ಟುಕೊಂಡು ಇಡಿ ಈಗ ತನಿಖೆ ಚುರುಕುಗೊಳಿಸಿದೆ. ಸಚಿವರ ನಿಕಟ ಸಂಬಂಧಿಯ ಮೇಲೆಯೇ ಇಡಿ ದಾಳಿ ನಡೆಸಿರುವುದರಿಂದ ಆಡಳಿತ ರೂಢ ಕಾಂಗ್ರೆಸ್ ಪಾಳಯದಲ್ಲಿ  ಭಾರೀ ಚರ್ಚೆಗೆ ಕಾರಣವಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ