AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ: ಹೊಸ ಬಾಂಬ್ ಸಿಡಿಸಿದ ಜೋಶಿ

ಗೃಹ ಸಚಿವ ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳಲ್ಲಿ ಇಡಿ ಅಧಿಕಾರಿಗಳು ಶೋಧ ಮುಂದುವರೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಮಾಡಿರೋ ಆರೋಪದ ಹಿನ್ನೆಲೆಯಲ್ಲಿ ಎರಡನೇ ದಿನವೂ ಪರಿಶೀಲನೆ ನಡೆದಿದೆ. ಬೆಳಗ್ಗೆ 6 ಗಂಟೆಯಿಂದಲೇ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇದರ ನಡುವೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ.

ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ: ಹೊಸ ಬಾಂಬ್ ಸಿಡಿಸಿದ ಜೋಶಿ
Pralhad Joshi And Parameshwar
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ರಮೇಶ್ ಬಿ. ಜವಳಗೇರಾ|

Updated on:May 22, 2025 | 4:25 PM

Share

ಗದಗ, (ಮೇ 22): ಗೃಹ ಸಚಿವ ಡಾ.ಜಿ.  ಪರಮೇಶ್ವರ್ (Dr G parameshwar) ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ  (ED raids)ಮಾಡಿದ್ದು, ಪರಿಶೀನಲೆ ನಡೆಸಿದ್ದಾರೆ. ತುಮಕೂರಿನ (Tumakuru) ಕುಣಿಗಲ್ ರಸ್ತೆಯಲ್ಲಿರುವ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜು ಮತ್ತು ಹೆಗ್ಗೆರೆ ಬಳಿ ಇರುವ ಸಿದ್ಧಾರ್ಥ ಮೆಡಿಕಲ್ ಕಾಲೇಜು ಹಾಗೂ ಹೆಗ್ಗೆರೆ ಬಳಿ ಇರುವ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಲ್ಲಿ 40 ಇಡಿ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಮತ್ತೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಕೆಲ ಸಚಿವರು ಪರಮೇಶ್ವರ್​ ಅವರ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಮತ್ತೊಂದೆಡೆ ಪರಮೇಶ್ವರ್ ವಿರುದ್ಧ ಕಾಂಗ್ರೆಸ್​ನ ಒಂದು ಗುಂಪು ದೂರು ನೀಡಿದೆ. ಹೀಗಾಗಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (pralhad joshi) ಹೊಸ ಬಾಂಬ್ ಸಿಡಿಸಿದ್ದಾರೆ.

ಗದಗದಲ್ಲಿ ಇಂದು(ಮೇ 22) ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಇಡಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇಡಿ ದಾಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ‌. ಪರಮೇಶ್ವರ್ ವಿರುದ್ಧ ಕಾಂಗ್ರೆಸ್​ನ ಒಂದು ಗುಂಪು ದೂರು ನೀಡಿದೆ. ಹೀಗಾಗಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 2013ರಲ್ಲಿ ಡಾ.ಜಿ.ಪರಮೇಶ್ವರ್​ರನ್ನು ಸೋಲಿಸಿದ್ದು ಯಾರು? ‌‌ಡಾ.ಜಿ.ಪರಮೇಶ್ವರ್​ರನ್ನು ಇದೇ ಸಿದ್ದರಾಮಯ್ಯ ಸೋಲಿಸಿದ್ದರು. ಚಿನ್ನ ಕಳ್ಳತನ ಸೇರಿ ಎಲ್ಲಾ ಪ್ರಕರಣಗಳ ಬಗ್ಗೆ ತನಿಖೆ ಮಾಡುವಂತೆ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದು ಯಾರು? ನಮಗೆ ಪರಮೇಶ್ವರ್​ ಮೇಲೆ ಗೌರವ ಇದೆ, ಸಭ್ಯ ರಾಜಕಾರಣಿ. ಏನಾಗಿದೆ ಅನ್ನೋದನ್ನು ಇಡಿ ಅಧಿಕಾರಿಗಳು ಹುಡುಕುತ್ತಿದ್ದಾರೆ ಎಂದರು.

ಇದನ್ನೂ ಓದಿ: ರನ್ಯಾ ರಾವ್ ಖಾತೆಗೆ 40 ಲಕ್ಷ ರೂ. ವರ್ಗಾವಣೆ ಆರೋಪ: ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಮುಂದುವರಿದ ಇಡಿ ಶೋಧ

ಕಾಂಗ್ರೆಸ್​ನ ಒಂದು ಗುಂಪು ಮಾಹಿತಿ ಕಳಿಸಿದ್ದಾರೆಂಬ ಆರೋಪವಿದೆ. ಯಾರು ಕಳುಹಿಸಿದ್ದಾರೆಂದು ಸಿಎಂ ಸಿದ್ದರಾಮಯ್ಯಗೂ ಗೊತ್ತಿದೆ. ಮಾಹಿತಿ ಸಿಕ್ಕಾಗ ಇಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ. ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದರು.

ಇದನ್ನೂ ಓದಿ
Image
ರನ್ಯಾ ರಾವ್​ಗೆ 25 ಲಕ್ಷ ರೂ. ನೀಡಿದ್ದಾರಂತೆ ಪರಮೇಶ್ವರ್: ಡಿಕೆ ಶಿವಕುಮಾರ್
Image
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
Image
ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ: ಪರಮೇಶ್ವರ್ ಮೊದಲ ಪ್ರತಿಕ್ರಿಯೆ
Image
ರನ್ಯಾ ಖಾತೆಗೆ 40 ಲಕ್ಷ ವರ್ಗಾವಣೆ? ಸಿದ್ಧಾರ್ಥ ಸಂಸ್ಥೆಲಿ ಮುಂದುವರಿದ ಶೋಧ

ಮಾಹಿತಿ ಸಿಕ್ಕಾಗ ಇಡಿ ತನ್ನ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಗೃಹಮಂತ್ರಿ ಇದ್ದಾರೆ. ಕಾಂಗ್ರೆಸ್ ನಾಯಕರು ಆಂತಾಗ್ಲಿ ಆಗಿಲ್ಲ. ಯಾವುದೇ ಕಾರಣಕ್ಕೂ ಪರಮೇಶ್ವರ ಅವರಿಗೆ ತೊಂದರೆ ಕೊಡಬೇಕಂತಲ್ಲ. ಯಾವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇಲ್ಲ. ಕಾನೂನು ಪ್ರಕಾರ ತಪ್ಪು ಮಾಡಿದ್ರೆ. ನಾನಾಗಲೀ, ಪರಮೇಶ್ವರ್, ಸಿದ್ದರಾಮಯ್ಯ ಅಂಥವಾ ನಮ್ಮ ಪಕ್ಷದ ಯಾರೇ ತಪ್ಪು ಮಾಡಿದ್ರೆ ಕಾನೂನು ರೀತಿ ಕ್ರಮ ಆಗುತ್ತೆ. ಕಾಂಗ್ರೆಸ್ ನ ಒಂದು ಗುಂಪಿನವರೇ ಎಲ್ಲ ಮಾಹಿತಿ ಕಳಿಸಿದ್ದು ಅಂತ ಆರೋಪ ಇದೆ. ಅದು ಯಾರು ಎಂದು ಸಿಎಂ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ. ಇಂಟಲಿಜೆನ್ಸ್ ಸಿಎಂ ಕಡೆ ಇದೆ ಅವರನ್ನೇ ಕೇಳಿ ಹೇಳುತ್ತಾರೆ. ಮತ್ತ ಈಗ ಡ್ರಾಮಾ ಮಾಡುತ್ತೀರಾ ಸಿದ್ದರಾಮಯ್ಯನವವರೇ ಎಂದು ಕಿಡಿಕಾರಿದರು.

ರಾಜ್ಯ ರಾಜಕಾರಣದಲ್ಲಿ ಸಂಚಲನ

ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್‌ ಖಾತೆಗೆ 40 ಲಕ್ಷ ರೂಪಾಯಿ ವರ್ಗಾವಣೆ ಮಾಡಿರುವ ಆರೋಪದ ಮೇಲೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪ ಜೋರಾಗಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ನಾಯಕರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವುದು ಹೊಸತೇನಲ್ಲ. ಇಡಿಯಿಂದ ದೇಶಾದ್ಯಂತ 193 ಕೇಸ್ ದಾಖಲಾಗಿವೆ. ಇದರಲ್ಲಿ ಶಿಕ್ಷೆ ಆಗಿರುವುದು ಕೇವಲ ಎರಡೇ ಕೇಸ್ ಗಳಲ್ಲಿ ಮಾತ್ರ. ಅಂದ್ರೆ ರಾಜಕೀಯ ದುರುದ್ದೇಶ ಇದರ ಹಿಂದಿದೆ ಎಂದು ಆರೋಪಿಸಿದ್ದಾರೆ. ಇದರ ಮಧ್ಯೆ ಇದೀಗ ಪ್ರಹ್ಲಾದ್ ಜೋಶಿ ಮಾತನಾಡಿ, ಕಾಂಗ್ರೆಸ್ ಗುಂಪೇ ಇಡಿಗೆ ದೂರು ನೀಡಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಇಡಿ ದಾಳಿ ಬಗ್ಗೆ ಪರಮೇಶ್ವರ್ ಹೇಳಿದ್ದೇನು?

ಇನ್ನು ಇಡಿ ದಾಳಿಯ ಬಗ್ಗೆ ಸಚಿವ ಪರಮೇಶ್ವರ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಎಲ್ಲರಿಗೂ ಕಾನೂನು ಒಂದೇ ಕಾನೂನನ್ನು ನಾನು ಗೌರವಿಸ್ತೇನೆ. ಇಡಿ ಅಧಿಕಾರಿಗಳಿಗೆ ನಮ್ಮ ಸಂಸ್ಥೆ ಎಲ್ಲಾ ಸಹಕಾರ ನೀಡಲಿದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:19 pm, Thu, 22 May 25