Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Babu ಚುನಾವಣೆ ತಯಾರಿಯಲ್ಲಿರುವ ಕೋಟಿ ಕುಬೇರ ಕೆಜಿಎಫ್ ಬಾಬುಗೆ ಇಡಿ ಶಾಕ್

ಇತ್ತೀಚೆಗಷ್ಟೇ ಕಾಂಗ್ರೆಸ್​ನಿಂದ ಅಮಾನತುಗೊಂಡಿರುವ ಕೆಜಿಎಫ್​ ಬಾಬುಗೆ ವಿಚಾರಣೆಗೆ ಬರುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ.

KGF Babu ಚುನಾವಣೆ ತಯಾರಿಯಲ್ಲಿರುವ ಕೋಟಿ ಕುಬೇರ ಕೆಜಿಎಫ್ ಬಾಬುಗೆ ಇಡಿ ಶಾಕ್
ಕೆಜಿಎಫ್‌ ಬಾಬು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 18, 2023 | 5:50 PM

ನವದೆಹಲಿ/ಬೆಂಗಳೂರು: ಅಕ್ರಮವಾಗಿ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟಿ ಕುಬೇರ ಕೆಜಿಎಫ್ ಬಾಬುಗೆ (KGF Babu) ಇಡಿ ಸಮನ್ಸ್ ನೀಡಿದೆ. ವಿಚಾರಣೆಗಾಗಿ ನಾಳೆ 11ಗಂಟೆಗೆ ನವದೆಹಲಿಯ ಇಡಿ(ED) ಕಚೇರಿಗೆ ಬರುವಂತೆ ಕೆಜಿಎಫ್ ಬಾಬು ಸಮನ್ಸ್ ನೀಡಲಾಗಿದೆ. ಕಳೆದ ಮೇ ತಿಂಗಳಲ್ಲಿ ಬೆಂಗಳೂರಿನ ವಸಂತ ನಗರದಲ್ಲಿರುವ ಕೆಜಿಎಫ್​ ಬಾಬು ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. 6 ಕಾರುಗಳಲ್ಲಿ 3 ತಂಡವಾಗಿ ಬಂದಿದ್ದ ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳು ಉದ್ಯಮಿ ಹಾಗೂ ರಾಜಕಾರಣಿ ಕೆಜಿಎಫ್‌ ಬಾಬು ನಿವಾಸ ಹಾಗೂ ಕಚೇರಿಗಳಲ್ಲಿ ದಾಳಿ ಮಾಡಿ ಶೋಧ ನಡೆಸಿದ್ದರು.

ಇದನ್ನೂ ಓದಿ: KGF Babu: ಕೋಟಿ ಕುಬೇರ ಕೆಜಿಎಫ್‌ ಬಾಬುನನ್ನು ಪಕ್ಷದಿಂದ ಅಮಾನತು ಮಾಡಿದ ಕಾಂಗ್ರೆಸ್

ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಶಂಕೆ

ಯೂಸೂಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬುಗೆ ಇಡಿ ಶಾಕ್ ನೀಡಿತ್ತು. ಬಾಬು ಒಡೆತನದ ಬಂಗಲೆ, ಕಚೇರಿ ಸೇರಿ 7 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದರು. ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಗೆ ಕೆಲ ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬಾಬು ಒಡೆತನದ ವಸಂತನಗರದಲ್ಲಿರುವ ರುಕ್ಸಾನಾ ಪ್ಯಾಲೇಸ್ ನಿವಾಸ, ಉಮ್ರಾ ಡೆವಲರ್ಸ್, ಉಮ್ರಾ ರಿಯಲ್ ಎಸ್ಟೇಟ್ ಕಂಪನಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಾಲಾಡಿದ್ದರು.

ಬಾಬು ಅವರ ಹಲವು ಕಡೆಗಳ ನೂರಾರು ಕೋಟಿ ರೂ. ಮೌಲ್ಯದ ಜಮೀನು, ನಿವೇಶನ, ಅಪಾರ್ಟ್‌ಮೆಂಟ್, ಕಟ್ಟಡಗಳನ್ನು ಹೊಂದಿರುವುದಕ್ಕೆ ಸಂಬಂಧಿಸಿದ ದಾಖಲೆಗಳು ಇಡಿ ಕೈ ಸೇರಿದೆ. ಮೊದಲ ಪತ್ನಿ ರುಕ್ಸಾನ, ಎರಡನೆ ಪತ್ನಿ ಶಾಜಿಯಾ, ಮಗಳು ಉಮ್ರಾ ಫರೀಫ್, ಮಗ ಅಫ್ನಾನ್ ಸೇರಿ ಕುಟುಂಬಸ್ಥರ ಹೆಸರಿನಲ್ಲಿ ಒಟ್ಟು 23 ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ. ಬಾಬು ತಮ್ಮ ಹೆಸರಿನಲ್ಲಿ 12 ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿದ್ದಾರೆ. ಕುಟುಂಬಸ್ಥರ ಖಾತೆಯಲ್ಲಿ 70 ಕೋಟಿಗೂ ಅಧಿಕ ಹಣ ಇರುವುದು ಇಡಿ ತನಿಖೆಯಲ್ಲಿ ತಿಳಿದು ಬಂದಿದೆ.

ಚುನಾವಣೆ ತಯಾರಿಯಲ್ಲಿ ಕೋಟಿ ಒಡೆಯ

ಹೌದು…ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಜಿಎಫ್​ ಬಾಬು ತಯಾರಿ ನಡೆಸಿದ್ದಾರೆ. ಈ ಮೊದಲು ಕೋಲಾರಿಂದ ಸ್ಪರ್ಧೆ ಮಾಡಬೇಕು ಎಂದು ಕೊಂಡಿದ್ದ ಬಾಬು ಬಳಿಕ ಅಲ್ಲಿಂದ ಬೆಂಗಳೂರಿನ ಚಿಕ್ಕಪೇಟೆಯಿಂದ ಅಖಾಡಕ್ಕಿಳಿಯಲು ಪ್ಲಾನ್ ಮಾಡಿದ್ದಾರೆ. ಇದರ ಮಧ್ಯೆ  ಪಕ್ಷ ವಿರೋಧಿ ಆರೋಪದ ಮೇಲೆ ಕಾಂಗ್ರೆಸ್​ನಿಂದ ಅಮಾನತುಗೊಂಡು ಏಕಾಂಗಿಯಾಗಿದ್ದಾರೆ. ಮೂಲಗಳ ಪ್ರಕಾರ ಪಕ್ಷೇತರ ಬದಲು ಜೆಡಿಎಸ್​ನಿಂದ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

Published On - 5:11 pm, Wed, 18 January 23