AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ದಾಳಿ ವೇಳೆ PWD ಅಕ್ರಮದ ದಾಖಲೆ ಪತ್ತೆ: ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!

ಇಡಿ ದಾಳಿ ವೇಳೆ PWD ಅಕ್ರಮದ ದಾಖಲೆ ಪತ್ತೆ: ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!

ಶಿವಪ್ರಸಾದ್​ ಬಿ.
| Edited By: |

Updated on: Sep 12, 2026 | 3:42 PM

Share

ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ಇಡಿ ದಾಳಿ ವೇಳೆ ಲೋಕೋಪಯೋಗಿ ಇಲಾಖೆಯ ಅಕ್ರಮದ ದಾಖಲೆಗಳು ಪತ್ತೆಯಾಗಿವೆ. BVEPL ಕಂಪನಿಯಿಂದ ಕಿಕ್ ಬ್ಯಾಕ್ ಪಡೆದ ಆರೋಪದ ಹಿನ್ನೆಲೆಯಲ್ಲಿ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತನಿಖೆಗೆ ಅವಕಾಶವಿಲ್ಲದ ಕಾರಣ ಇಡಿ, ಲೋಕಾಯುಕ್ತ ಎಡಿಜಿಪಿಗೆ ಪತ್ರ ಬರೆದು ಪ್ರಕರಣದ ತನಿಖೆಗೆ ಕೋರಲಿದೆ.

ಬೆಂಗಳೂರು, ಸೆಪ್ಟೆಂಬರ್​​ 12: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇ.ಡಿ ನಡೆಸಿದ ದಾಳಿ ವೇಳೆ ಲೋಕೋಪಯೋಗಿ ಇಲಾಖೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ಪತ್ತೆಯಾಗಿವೆ. BVEPL ಕಂಪನಿಯಿಂದ ಕಿಕ್ ಬ್ಯಾಕ್ ಪಡೆದಿರುವ ಆರೋಪದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಇಡಿ ಅಧಿಕಾರಿಗಳು ಈ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿ ಮಂತ್ರಿಗಳ ವಿರುದ್ಧ ನೇರವಾಗಿ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸಲು ಇ.ಡಿ ಸಂಸ್ಥೆಗೆ ಅಧಿಕಾರವಿಲ್ಲ. ಈ ಹಿನ್ನೆಲೆ ಪತ್ತೆಯಾಗಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳ ಆಧಾರದ ಮೇಲೆ, ಲೋಕಾಯುಕ್ತ ಎಡಿಜಿಪಿಗೆ ಪತ್ರ ಬರೆಯಲು ಇ.ಡಿ ಮುಂದಾಗಿದೆ. ಲೋಕಾಯುಕ್ತ ಸಂಸ್ಥೆಯು ಈ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಇ.ಡಿ ಕೋರಲಿದೆ. ಇಂದು ಲೋಕಾಯುಕ್ತ ಎಡಿಜಿಪಿಗೆ ಇ.ಡಿ ಅಧಿಕಾರಿಗಳು ಪತ್ರ ಬರೆಯುವ ಸಾಧ್ಯತೆ ಇದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us