ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ ಆತಂಕ ತಂದಿದೆ: ಅಲಾರಂ ಬೆಲ್​​ ಹೊಡೆದ ಶಿಕ್ಷಣ ಸಚಿವ ಬಿ ಸಿ ನಾಗೇಶ್

ಕೊವಿಡ್ 19 ಬೇರೆಯದ್ದೇ ರೂಪದಲ್ಲಿ ಕಾಲಿರಿಸಿದ್ದು ಇಡೀ ಜಗತ್ತನ್ನು ಮತ್ತೆ ಆತಂಕದ ಮಡುವಿಗೆ ದೂಡಿದೆ. ಈ ಮಧ್ಯೆ, ಕರ್ನಾಟಕ ರಾಜ್ಯದ ಕೆಲವು ಶಾಲೆ, ಕಾಲೇಜುಗಳಲ್ಲಿಯೂ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ಇದು ಸಹಜವಾಗಿಯೇ ಸರ್ಕಾರಕ್ಕೂ ಆತಂಕ ತಂದಿದೆ.

ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ ಆತಂಕ ತಂದಿದೆ: ಅಲಾರಂ ಬೆಲ್​​ ಹೊಡೆದ ಶಿಕ್ಷಣ ಸಚಿವ ಬಿ ಸಿ ನಾಗೇಶ್
ಶಿಕ್ಷಣ ಸಚಿವ ಬಿಸಿ ನಾಗೇಶ್
Follow us
| Updated By: ಸಾಧು ಶ್ರೀನಾಥ್​

Updated on:Dec 06, 2021 | 11:33 AM

ಬೆಂಗಳೂರು: ಕೊವಿಡ್ 19 ಬೇರೆಯದ್ದೇ ರೂಪದಲ್ಲಿ ಕಾಲಿರಿಸಿದ್ದು ಇಡೀ ಜಗತ್ತನ್ನು ಮತ್ತೆ ಆತಂಕದ ಮಡುವಿಗೆ ದೂಡಿದೆ. ಈ ಮಧ್ಯೆ, ಕರ್ನಾಟಕ ರಾಜ್ಯದ ಕೆಲವು ಶಾಲೆ, ಕಾಲೇಜುಗಳಲ್ಲಿಯೂ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ಇದು ಸಹಜವಾಗಿಯೇ ಸರ್ಕಾರಕ್ಕೂ ಆತಂಕ ತಂದಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಕೆಲವು ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ ಆತಂಕ ತಂದಿದೆ ಎಂದು ಅಲಾರಂ ಬೆಲ್​​ ಹೊಡೆದಿದ್ದಾರೆ. ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ನಾಗೇಶ್ ಸೋಂಕು ಹೆಚ್ಚಳ ಸ್ವಲ್ಪ ಆತಂಕ ತಂದಿದೆ. ಸೋಂಕು ಕಂಡುಬಂದಿರುವುದು ವಸತಿ ಶಾಲೆಗಳಲ್ಲಿ ಮತ್ತು ನವೋದಯ ಶಾಲೆಗಳಲ್ಲಿ ಎಂದಿದ್ದಾರೆ.

ಶಾಲಾ ಮಟ್ಟದಲ್ಲಿ 1 ರಿಂದ 10 ನೆ ತರಗತಿವರಗೆ ಸರ್ಕಾರಿ ಸರ್ಕಾರಿ ಶಾಲೆಗಳಲ್ಲಿ ಸೋಂಕಿಲ್ಲ. ವಸತಿ ಮತ್ತು ನವೋದಯ ಶಾಲೆಗಳಲ್ಲಿ ಸೋಂಕು ಹಿನ್ನೆಲೆ ಅಗತ್ಯ ಕ್ರಮ ತಗೆದುಕೊಳ್ಳುತೇವೆ. ಮಕ್ಕಳಿಗೆ ತೊಂದರೆ ಆಗಿಲ್ಲ, ಚಿಕಿತ್ಸೆ ಕೊಡಲಾಗಿದೆ. ಇಬ್ಬರು ಶಿಕ್ಷಕರಿಗೆ ಸೋಂಕು ಬಂದಿದೆ. ಯಾವುದೇ ಸಮಸ್ಯೆ, ಆತಂಕ ಇಲ್ಲ. ಇವತ್ತು ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ಜಾರಿಯಲ್ಲಿರುವ ಮಾರ್ಗಸೂಚಿಗಳನ್ನು ಕಠಿಣವಾಗಿ ಪಾಲಿಸುತ್ತೇವೆ. ನೀತಿ ಸಂಹಿತೆ ಮುಗಿದ ಬಳಿಕ ನಾನು ಸೋಂಕಿತ ವಸತಿ ಮತ್ತು ನವೋದಯ ಶಾಲೆಗಳಿಗೆ ಭೇಟಿ ಕೊಡ್ತೇನೆ. ಸದ್ಯಕ್ಕೆ ವಸತಿ ಶಾಲೆಗಳಲ್ಲಿ ಎಸ್.ಓ.ಪಿ ಪಾಲನೆ ಆಗ್ತಿದೆಯಾ, ಇಲ್ಲವಾ? ಎಂಬುದನ್ನು ಸ್ವತಃ ಜಿಲ್ಲಾಧಿಕಾರಿಗಳೇ ಚೆಕ್ ಮಾಡೋದಕ್ಕೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

ಕಾಲೇಜು ವಿದ್ಯಾರ್ಥಿನಿಗಳಿಂದ ಪ್ರತಿಭಟನೆ: ಮೌಂಟ್ ಕಾರ್ಮಲ್ ಕಾಲೇಜಿಗೆ ಇಂದು, ನಾಳೆ ರಜೆ ಘೊಷಣೆ

ಬೆಂಗಳೂರು: ಕಾಲೇಜಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳನ್ನು ಮುಚ್ಚಿಡುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಪ್ರತಿಷ್ಠಿತ ಮೌಂಟ್ ಕಾರ್ಮಲ್ ಕಾಲೇಜು ವಿದ್ಯಾರ್ಥಿನಿಗಳು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಕಾಲೇಜಿಗೆ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ, ಆನ್‌ಲೈನ್ ತರಗತಿಗಳನ್ನು ಬಹಿಷ್ಕರಿಸಿ ವಸಂತನಗರದಲ್ಲಿರುವ ಮೌಂಟ್ ಕಾರ್ಮಲ್ ಕಾಲೇಜಿನ ಪಿಯು ಮತ್ತು ಪದವಿ ತರಗತಿಯ ವಿದ್ಯಾರ್ಥಿನಿಗಳು ಇಂದು ಧರಣಿ ಮತ್ತು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ವಿದ್ಯಾರ್ಥಿನಿಗಳ ಪ್ರತಿಭಟನೆಗೆ ಎನ್‌ಎಸ್‌ಯುಐ ಸಾಥ್ ನೀಡಿದೆ. ಈ ಬೆಳವಣಿಗೆಗಳ ಸಮ್ಮುಖದಲ್ಲಿ ಕಾಲೇಜಿನ ಭೌತಿಕ ತರಗತಿಗಳಿಗೆ ಇಂದು ಮತ್ತು ನಾಳೆ ರಜೆ ಘೊಷಣೆ ಮಾಡಲಾಗಿದೆ.

Health Minister Dr K Sudhakar Reacts On Omicron Cases & Covid 3rd Wave

Published On - 11:19 am, Mon, 6 December 21