ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಸಂಬಂಧ ಇಂದು (ಜೂನ್ 9) ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಡಿಡಿಪಿಐಗಳ ಜೊತೆ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸಭೆ ನಡೆಸಿ ಚರ್ಚಿಸದರು. ಸುಧಾರಿತ ಗೈಡ್‌ಲೈನ್ಸ್‌ನೊಂದಿಗೆ ಪರೀಕ್ಷೆ ನಡೆಸೋಣ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ಎಂದು ಎಲ್ಲ ಡಿಡಿಪಿಐಗಳಿಗೆ ಎಸ್. ಸುರೇಶ್‌ಕುಮಾರ್ ಸೂಚನೆ ನೀಡಿದರು.
ಪರೀಕ್ಷೆ ಬರೆಯುವುದಕ್ಕೆ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಬೇಕು ಎಂದು ಪೋಷಕರಿಗೆ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸಲಹೆ ನೀಡಿದರು. ರಾಜ್ಯದಲ್ಲಿ SSLC ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲಿಯೇ SSLC ಪರೀಕ್ಷಾ ದಿನಾಂಕ ಘೋಷಣೆ ಮಾಡುತ್ತೇವೆ. ಮುಂದಿನ ವ್ಯಾಸಂಗಕ್ಕೆ ವಿದ್ಯಾರ್ಥಿಗಳ ಸಾಮರ್ಥ್ಯ ಅಗತ್ಯ. ಹಾಗಾಗಿ, ಸಾಮರ್ಥ್ಯ ಗುರುತಿಸಿಕೊಳ್ಳುವ ದೃಷ್ಟಿಯಿಂದ ಪರೀಕ್ಷೆ ಮಾಡುತ್ತೇವೆ. ಹೀಗಾಗಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಲು ಕ್ರಮಕೈಗೊಳ್ಳಿ ಎಂದು ಡಿಡಿಪಿಐಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದರು.
ಅನ್ಲಾಕ್ ಬಗ್ಗೆ ಚರ್ಚೆ
ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹೀಗಾಗಿ, ರಾಜ್ಯದಲ್ಲಿ ಅನ್ಲಾಕ್ ಪ್ರಕ್ರಿಯೆ ಬಗ್ಗೆ ಚರ್ಚೆ ಪ್ರಾರಂಭವಾಗಿದೆ. ನಾಳೆ ಸಿಎಂ ಬಿಎಸ್ವೈ ನೇತೃತ್ವದಲ್ಲಿ ಅನ್ಲಾಕ್ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಅನ್ಲಾಕ್ ಪ್ರಕ್ರಿಯೆ ಹಂತ ಹಂತವಾಗಿ ಮಾಡುತ್ತೇವೆ. ಒಂದೇ ಬಾರಿ ಅನ್ಲಾಕ್ ಮಾಡಿದ್ರೆ ಸೋಂಕು ಹೆಚ್ಚಳವಾಗುತ್ತೆ. ಸೋಂಕು ಹೆಚ್ಚಳ ಆಗೋ ಚಟುವಟಿಕೆ ನಿಯಂತ್ರಣ ಮಾಡ್ತೇವೆ. ತಾಂತ್ರಿಕ ಸಲಹಾ ಸಮಿತಿ ವರದಿ ಮೇಲೆ ಅನ್ಲಾಕ್ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸುಧಾಕರ್ ತಿಳಿಸಿದ್ದಾರೆ.
ಅನ್ಲಾಕ್ಗೆ ಶೇಕಡಾ 5ರಷ್ಟು ಸೋಂಕು ಇಳಿಕೆ ಮಾನದಂಡ ಇದೆ. ಶೇ.5ಕ್ಕಿಂತ ಕಡಿಮೆ ಸೋಂಕಿನ ಪ್ರಮಾಣ ಇರುವ ಕಡೆ ಚಿಂತನೆ ಮಾಡಲಾಗಿದೆ. ಈ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ. ಜೊತೆಗೆ, ಖಾಸಗಿ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ದರ ನಿಗದಿ ಮಾಡುವ ಬಗ್ಗೆಯೂ ಚರ್ಚೆ ನಡೆಸಲಾಗುವುದು. ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರ.
ಇದನ್ನೂ ಓದಿ: 2nd PU Exams for Repeaters: ಪಿಯು ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ರಿಪೀಟರ್ಸ್ ವಿದ್ಯಾರ್ಥಿಗಳು
Published On - 5:36 pm, Wed, 9 June 21