AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಹಾಕದೇ ಬಸ್​ಗೆ ಕಾಯುತ್ತಿದ್ದವರಿಗೆ ಕೊರೊನಾ ಪಾಠ ಮಾಡಿದ ಸಚಿವ ಸುರೇಶ್ ಕುಮಾರ್

ಕೊವಿಡ್ ಸೋಂಕಿಗೆ ಸಂಬಂಧಿಸಿ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳ ಜತೆಗೆ ಸಭೆ ಮುಗಿಸಿಕೊಂಡು ಜಿಲ್ಲಾಡಳಿತ ಭವನದಿಂದ ಸಂತೇಮರಳ್ಳಿಗೆ ಹೊರಟಿದ್ದರು. ಈ ವೇಳೆ ರಸ್ತೆ ಬದಿ ಇದ್ದವರಲ್ಲಿ ಬಹುತೇಕ ಮಂದಿ ಮಾಸ್ಕ್ ಹಾಕಿಕೊಳ್ಳದೆ ಸಾಮಾಜಿಕ ಅಂತರ ಕಾಪಾಡಿ ಕೊಳ್ಳದೆ ಮಾತುಕತೆಯಲ್ಲಿ ತೊಡಗಿದ್ದರು.

ಮಾಸ್ಕ್ ಹಾಕದೇ ಬಸ್​ಗೆ ಕಾಯುತ್ತಿದ್ದವರಿಗೆ ಕೊರೊನಾ ಪಾಠ ಮಾಡಿದ ಸಚಿವ ಸುರೇಶ್ ಕುಮಾರ್
ಮಾಸ್ಕ್ ಹಾಕದವರನ್ನು ತರಾಟೆಗೆ ತೆಗೆದುಕೊಂಡ ಶಿಕ್ಷಣ ಸಚಿವ ಸುರೇಶ್ ಕುಮಾರ್
Follow us
guruganesh bhat
|

Updated on:Apr 21, 2021 | 7:13 PM

ಚಾಮರಾಜನಗರ: ಮಾಸ್ಕ್​ ಧರಿಸದ ಸಾರ್ವಜನಿಕರನ್ನು ಸಚಿವ ಎಸ್.ಸುರೇಶ್ ಕುಮಾರ್​ ತರಾಟೆಗೆ ತೆಗೆದುಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಸಂತೆಮರಹಳ್ಳಿ ವೃತ್ತದಲ್ಲಿ ಬಸ್​ಗಾಗಿ ಮಾಸ್ಕ್​​ ಧರಿಸದೇ ಕಾಯುತ್ತ ಕುಳಿತಿದ್ದ ಜನರನ್ನು ಸಚಿವ ಸುರೇಶ್ ಕುಮಾರ್ ಕಾರಿನಿಂದ ಇಳಿದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೊವಿಡ್ ಸೋಂಕಿಗೆ ಸಂಬಂಧಿಸಿ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳ ಜತೆಗೆ ಸಭೆ ಮುಗಿಸಿಕೊಂಡು ಜಿಲ್ಲಾಡಳಿತ ಭವನದಿಂದ ಸಂತೇಮರಳ್ಳಿಗೆ ಹೊರಟಿದ್ದರು. ಈ ವೇಳೆ ರಸ್ತೆ ಬದಿ ಇದ್ದವರಲ್ಲಿ ಬಹುತೇಕ ಮಂದಿ ಮಾಸ್ಕ್ ಹಾಕಿಕೊಳ್ಳದೆ ಸಾಮಾಜಿಕ ಅಂತರ ಕಾಪಾಡಿ ಕೊಳ್ಳದೆ ಮಾತುಕತೆಯಲ್ಲಿ ತೊಡಗಿದ್ದರು.

ಕಾರಿನಲ್ಲಿ ಹೋಗುವಾಗ ಇದನ್ನು ಗಮನಿಸಿದ ಸಚಿವರು ಕಾರಿನಿಂದ ಇಳಿದು ತರಾಟೆಗೆ ತೆಗೆದುಕೊಂಡರು. ಕೊರೊನಾ ಸೋಂಕಿನ ಬಗ್ಗೆ ವಿವರಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಾಗ ಮಾಸ್ಕ್ ಹಾಕಿಕೊಂಡು ಓಡಾಡಬೇಕು, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಪಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸಾರ್ವಜನಿಕರಿಗೆ ತಿಳಿ ಹೇಳಿದರು.‌ ಸಚಿವರೇ ಖುದ್ದು ಸಾರ್ವಜನಿಕರಿಗೆ ತಿಳಿ ಹೇಳಿದ್ದರಿಂದ ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿತು.

ಸಚಿವರ ಆಪ್ತ ಸಹಾಯಕ ಕೊರೊನಾಗೆ ಬಲಿ

ಕಳೆದ ಎರಡು ದಿನಗಳ ಹಿಂದಷ್ಟೇ ಶಿಕ್ಷಣ ಸಚಿವ ಎಸ್.​ ಸುರೇಶ್ ಕುಮಾರ್ ಅವರ ಆಪ್ತ ಕಾರ್ಯದರ್ಶಿ ಹೆಜ್​.ಜೆ. ರಮೇಶ್ (53) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮಡಿವಾಳದ ಸಮೀಪದ ಸೆಂಟ್ ಜಾನ್ಸ್ ಚಿಕಿತ್ಸೆ ಪಡೆಯುತ್ತಿದ್ದರು. ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೆ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ರಮೇಶ್ ಸಾವಿಗೀಡಾಗಿದ್ದಾರೆ.

ಹೆಜ್​.ಜೆ. ರಮೇಶ್ ಅವರು 8 ವರ್ಷಗಳಿಂದ ಎಸ್​ ಸುರೇಶ್ ಕುಮಾರ್ ಅವರ ಜೊತೆ ಸೇವೆ ಸಲ್ಲಿಸಿದ್ದರು. ಈ ಬಗ್ಗೆ ಸ್ವತಃ ಸಚಿವ ಸುರೇಶ್ ಕುಮಾರ್ ಅವರೇ ತಮ್ಮ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ‘ನಮ್ಮ ಕ್ಷೇತ್ರದ ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ ನನ್ನ ಆಪ್ತ ಸಹಾಯಕ HJ ರಮೇಶ್ ಇನ್ನಿಲ್ಲ. ರಮೇಶ್ ಸುಮಾರು 8 ವರ್ಷ ನನ್ನೊಡನೆ ನಗು ನಗುತ್ತಾ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ’ ಎಂದು ಸಚಿವ ಸುರೇಶ್ ಕುಮಾರ್ ಶ್ರದ್ದಾಂಜಲಿ ಅರ್ಪಿಸಿದ್ದಾರೆ.

ಇದನ್ನೂ ಓದಿ: Karnataka SSLC Classes: ಮೇ 4ರವರೆಗೆ ಎಸ್​ಎಸ್​ಎಲ್​ಸಿ ತರಗತಿಗಳು ಬಂದ್; ಶಿಕ್ಷಣ ಇಲಾಖೆ ಆದೇಶ

ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಗದೆ ಸಚಿವ ಸುರೇಶ್ ಕುಮಾರ್ ಆಪ್ತ ಕಾರ್ಯದರ್ಶಿ ಕೊರೊನಾಗೆ ಬಲಿ

Published On - 6:29 pm, Wed, 21 April 21

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು