AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಡ್ಡು ಕೊಟ್ಟರೆ ಎಸ್​ಎಸ್​ಎಲ್​ಸಿ ಪಾಸ್ ಮಾಡಲಾಗುತ್ತೆ ಎಂಬ ಸುಳ್ಳು ಸುದ್ದಿಯನ್ನು ನಂಬಬೇಡಿ; ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ

PUC and SSLC Exam 2021: ಎಲ್ಲರೂ ಅರ್ಹತೆ ಮೇಲೆ ಪಾಸ್ ಆಗ್ತಾ ಇದ್ದೀರಿ. ಯಾರೂ ವಂಚನೆಗೆ ಒಳಗಾಗಬಾರದು. ಯಾರು ಅಹಿತಕರ ಘಟನೆಗೆ ಒಳಗಾಗಬಾರದು. ಫಲಿತಾಂಶ ಉತ್ತಮ ಬರಲ್ಲ ಅಂತ ಯಾರೂ ದುಡಕಬಾರದು. ವಿದ್ಯಾರ್ಥಿಗಳು ಧೈರ್ಯದಿಂದ ಇರಬೇಕು ಎಂದು ಅವರು ಮನವಿ ಮಾಡಿದರು.

ದುಡ್ಡು ಕೊಟ್ಟರೆ ಎಸ್​ಎಸ್​ಎಲ್​ಸಿ ಪಾಸ್ ಮಾಡಲಾಗುತ್ತೆ ಎಂಬ ಸುಳ್ಳು ಸುದ್ದಿಯನ್ನು ನಂಬಬೇಡಿ; ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ
ಸಚಿವ ಸುರೇಶ್​ ಕುಮಾರ್​
guruganesh bhat
|

Updated on:Jul 20, 2021 | 5:02 PM

Share

ಬೆಂಗಳೂರು: ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಘೋಷಿಸಲು ಸುದ್ದಿಗೋಷ್ಠಿ ಕರೆದಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿನ್ನೆ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಯ ಕುರಿತೂ ಕೆಲ ವಿವರ ಹಂಚಿಕೊಂಡರು. ದುಡ್ಡು ಕೊಟ್ಟರೆ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಪಾಸ್ ಮಾಡಲಾಗುತ್ತದೆ ಎಂದ ಸುಳ್ಳು ಸುದ್ದಿ ಕೆಲವೆಡೆ ಕೇಳಿಬರುತ್ತಿದೆ. ದಯವಿಟ್ಟು ಯಾವುದೇ ವಿದ್ಯಾರ್ಥಿಗಳು ಈ ಸುಳ್ಳು ಸುದ್ದಿಯನ್ನು ನಂಬಬೇಡಿ. ಈ ವರ್ಷದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯನ್ನೂ ಅನುತ್ತೀರ್ಣಗೊಳಿಸುವುದಿಲ್ಲ. ದಯವಿಟ್ಟು ಯಾರೂ ಸಹ ದುಡ್ಡು ಕೊಟ್ಟರೆ ಪಾಸ್ ಮಾಡಲಾಗುತ್ತದೆ ಎಂಬ ಸುಳ್ಳು ಸುದ್ದಿಯನ್ನು ನಂಬಿ ಮೋಸಹೋಗಬಾರದು ಎಂದು ಶಿಕ್ಷಣ ಸಚಿವರು ವಿದ್ಯಾರ್ಥಿ ಸಮೂಹಕ್ಕೆ ಮನವಿ ಮಾಡಿದರು. (PUC Results 2021 and SSLC Results 2021)

ಎಲ್ಲರೂ ಅರ್ಹತೆ ಮೇಲೆ ಪಾಸ್ ಆಗ್ತಾ ಇದ್ದೀರಿ. ಯಾರೂ ವಂಚನೆಗೆ ಒಳಗಾಗಬಾರದು. ಯಾರು ಅಹಿತಕರ ಘಟನೆಗೆ ಒಳಗಾಗಬಾರದು. ಫಲಿತಾಂಶ ಉತ್ತಮ ಬರಲ್ಲ ಅಂತ ಯಾರೂ ದುಡುಕಬಾರದು. ವಿದ್ಯಾರ್ಥಿಗಳು ಧೈರ್ಯದಿಂದ ಇರಬೇಕು ಎಂದು ಅವರು ಮನವಿ ಮಾಡಿದರು.

ದ್ವಿತೀಯ ಪಿಯು ಫಲಿತಾಂಶ ಪಿಯುಸಿ ಫಲಿತಾಂಶಕ್ಕೆ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ಪ್ರಕಟಿಸಲಾಗಿದೆ. ಎಸ್​ಎಸ್​ಎಲ್​ಸಿ ದ್ವಿತೀಯ ಪಿಯುಸಿಯ ಕೃಪಾಂಕ ಪರಿಗಣಿಸಿ ಫಲಿತಾಂಶ ಘೋಷಿಸಲಾಗಿದೆ. ಯಾವೊಬ್ಬ ವಿದ್ಯಾರ್ಥಿಗೂ ಅನ್ಯಾಯವಾಗದಂತೆ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡದ 445 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದಿದ್ದಾರೆ. ದ್ವಿತೀಯ ಪಿಯು ಫಲಿತಾಂಶದಲ್ಲಿ ಬೆಂಗಳೂರು ದಕ್ಷಿಣ ಎರಡನೇ ಸ್ಥಾನ ಗಳಿಸಿದೆ. ಬೆಂಗಳೂರು ದಕ್ಷಿಣದ 302 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಲಭಿಸಿದೆ. 2ನೇ ಪಿಯು ಫಲಿತಾಂಶದಲ್ಲಿ ಬೆಂಗಳೂರು ಉತ್ತರ 3ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ಉತ್ತರದ 261 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಸಿಕ್ಕಿದೆ. ದ್ವಿತೀಯ ಪಿಯು ಫಲಿತಾಂಶದಲ್ಲಿ ಉಡುಪಿ ಜಿಲ್ಲೆಗೆ 4ನೇ ಸ್ಥಾನ ಲಭ್ಯವಾಗಿದೆ. ಉಡುಪಿ ಜಿಲ್ಲೆಯ 149 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಸಿಕ್ಕಿದೆ. ಸೆಕೆಂಡ್ ಪಿಯು ಫಲಿತಾಂಶದಲ್ಲಿ ಹಾಸನ ಜಿಲ್ಲೆ 5ನೇ ಸ್ಥಾನ ಗಳಿಸಿದೆ. ಹಾಸನ ಜಿಲ್ಲೆಯ 104 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ದೊರೆತಿದೆ.

ಇದನ್ನೂ ಓದಿ: 

Karnataka 2nd PUC Result 2021: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ; ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?

ದ್ವಿತೀಯ ಪಿಯುಸಿ ಫಲಿತಾಂಶ 2021: ಫಲಿತಾಂಶ ನೋಡುವುದು ಹೇಗೆ? ಅಂಕಗಳ ಬಗ್ಗೆ ತಕರಾರಿದ್ದರೆ ಏನು ಮಾಡಬೇಕು?

(Education Minister Suresh Kumar appeal No one should believe the false news that if money taken for pass in SSLC Exams)

Published On - 4:50 pm, Tue, 20 July 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ