ಸ್ಟೇಟ್ ಬೋರ್ಡ್ 12ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯ ಬಗ್ಗೆ ಶೀಘ್ರವೇ ತೀರ್ಮಾನ: ಸುರೇಶ್ ಕುಮಾರ್

ರಾಜ್ಯ ಪಠ್ಯಕ್ರಮ ಅನುಸರಿಸಿ‌ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿ, ಮೌಲ್ಯಮಾಪನದ ಅವಶ್ಯಕತೆ‌ ಕುರಿತು ಈಗಾಗಲೇ ಸಂಗ್ರಹಿಸಿರುವ ಅಭಿಪ್ರಾಯಗಳ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಸ್ಟೇಟ್ ಬೋರ್ಡ್ 12ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯ ಬಗ್ಗೆ ಶೀಘ್ರವೇ ತೀರ್ಮಾನ: ಸುರೇಶ್ ಕುಮಾರ್
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
Follow us
TV9 Web
| Updated By: ganapathi bhat

Updated on:Jun 01, 2021 | 9:52 PM

ಬೆಂಗಳೂರು: ಸಿಬಿಎಸ್ಇ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಕುರಿತಂತೆ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು‌ ಮಾಡಿರುವ ಹಿನ್ನೆಲೆ, ರಾಜ್ಯ ಪಠ್ಯಕ್ರಮ ಅನುಸರಿಸಿ‌ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ‌ ಕುರಿತಂತೆ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ವಿಸ್ತೃತ ಚರ್ಚೆ‌ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

ಸಿಬಿಎಸ್​​ಇ 12ನೇ ತರಗತಿ ಪರೀಕ್ಷೆ ರದ್ದು ಮಾಡಿದ ವಿಚಾರವಾಗಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ರಾಜ್ಯ ಪಠ್ಯಕ್ರಮದ ಕುರಿತು ಶೀಘ್ರದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ. ರಾಜ್ಯದ ಪರಿಸ್ಥಿತಿ ಅವಲೋಕಿಸಿ ಶೀಘ್ರ ತೀರ್ಮಾನಿಸುತ್ತೇವ. ರಾಜ್ಯ ಪಠ್ಯಕ್ರಮ ಅನುಸರಿಸಿ‌ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿ, ಮೌಲ್ಯಮಾಪನದ ಅವಶ್ಯಕತೆ‌ ಕುರಿತು ಈಗಾಗಲೇ ಸಂಗ್ರಹಿಸಿರುವ ಅಭಿಪ್ರಾಯಗಳ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಸಿಬಿಎಸ್‌ಇ ಮತ್ತು ಸಿಐಎಸ್‌ಸಿಇ 12ನೇ ತರಗತಿ ಪರೀಕ್ಷೆ ಇಲ್ಲ ಸಿಬಿಎಸ್‌ಇ ಮತ್ತು ಸಿಐಎಸ್‌ಸಿಇ ವಿದ್ಯಾರ್ಥಿಗಳಿಗೆ ಈ ವರ್ಷ 12 ನೇ ತರಗತಿ ಪರೀಕ್ಷೆಗಳು ನಡೆಯುವುದಿಲ್ಲ. ನರೇಂದ್ರ ಮೋದಿ ಸರ್ಕಾರದ ಉನ್ನತ ಮಟ್ಟದ ಸಚಿವರ ನಡುವಿನ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ವಹಿಸಿದ್ದರು.ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಿದ್ದರು.

ಸಭೆಯಲ್ಲಿ, 12 ನೇ ತರಗತಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸರ್ಕಾರವು ಪರಿಗಣಿಸುತ್ತಿರುವ ಎಲ್ಲಾ ಆಯ್ಕೆಗಳ ಬಗ್ಗೆ ಮೋದಿಗೆ ತಿಳಿಸಲಾಗುವುದು. ಪ್ರಸ್ತುತ, ದೈಹಿಕ ಪರೀಕ್ಷೆಗಳನ್ನು ರದ್ದುಗೊಳಿಸುವುದು ಸೇರಿದಂತೆ ಎರಡು ಆಯ್ಕೆಗಳನ್ನು ಸರ್ಕಾರ ಪರಿಗಣಿಸುತ್ತಿದೆ. ಕೋವಿಡ್ -19 ನಂತರದ ತೊಡಕುಗಳಿಂದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಪ್ರಸ್ತುತ ಆಸ್ಪತ್ರೆಗೆ ದಾಖಲಾಗಿದ್ದು, ಸಭೆಯಲ್ಲಿ ಭಾಗವಹಿಸಿಲ್ಲ.

ಇದನ್ನೂ ಓದಿ: ICSE Exam 2021: ಐಸಿಎಸ್​ಇ ಬೋರ್ಡ್​ನ 12ನೇ ತರಗತಿ ಪರೀಕ್ಷೆಗಳು ಕೂಡ ರದ್ದು

CBSE 12th Board Exam 2021: 12 ನೇ ತರಗತಿಯ ಸಿಬಿಎಸ್‌ಇ, ಸಿಐಎಸ್‌ಸಿಇ ಪರೀಕ್ಷೆ ರದ್ದು: ಪ್ರಧಾನಿ ಮೋದಿ

Published On - 9:46 pm, Tue, 1 June 21