AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಗದೆ ಸಚಿವ ಸುರೇಶ್ ಕುಮಾರ್ ಆಪ್ತ ಕಾರ್ಯದರ್ಶಿ ಕೊರೊನಾಗೆ ಬಲಿ

ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೆ ಸಾವಿಗೀಡಾದ ರಮೇಶ್ 8 ವರ್ಷಗಳಿಂದ ಸಚಿವ​ ಸುರೇಶ್ ಕುಮಾರ್ ಅವರ ಜೊತೆ ಸೇವೆ ಸಲ್ಲಿಸಿದ್ದರು. ಈ ಬಗ್ಗೆ ಸ್ವತಃ ಸಚಿವ ಸುರೇಶ್ ಕುಮಾರ್ ಅವರೇ ತಮ್ಮ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಗದೆ ಸಚಿವ ಸುರೇಶ್ ಕುಮಾರ್ ಆಪ್ತ ಕಾರ್ಯದರ್ಶಿ ಕೊರೊನಾಗೆ ಬಲಿ
ಸಚಿವ ಸುರೇಶ್ ಕುಮಾರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 19, 2021 | 3:40 PM

Share

ಬೆಂಗಳೂರು: ಶಿಕ್ಷಣ ಸಚಿವ ಎಸ್​ ಸುರೇಶ್ ಕುಮಾರ್ ಅವರ ಆಪ್ತ ಕಾರ್ಯದರ್ಶಿ ಹೆಜ್​.ಜೆ. ರಮೇಶ್ (53) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮಡಿವಾಳದ ಸಮೀಪದ ಸೆಂಟ್ ಜಾನ್ಸ್ ಚಿಕಿತ್ಸೆ ಪಡೆಯುತ್ತಿದ್ದರು. ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೆ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ರಮೇಶ್ ಸಾವಿಗೀಡಾಗಿದ್ದಾರೆ.

ಹೆಜ್​.ಜೆ. ರಮೇಶ್ ಅವರು 8 ವರ್ಷಗಳಿಂದ ಎಸ್​ ಸುರೇಶ್ ಕುಮಾರ್ ಅವರ ಜೊತೆ ಸೇವೆ ಸಲ್ಲಿಸಿದ್ದರು. ಈ ಬಗ್ಗೆ ಸ್ವತಃ ಸಚಿವ ಸುರೇಶ್ ಕುಮಾರ್ ಅವರೇ ತಮ್ಮ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ‘ನಮ್ಮ ಕ್ಷೇತ್ರದ ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ ನನ್ನ ಆಪ್ತ ಸಹಾಯಕ HJ ರಮೇಶ್ ಇನ್ನಿಲ್ಲ. ರಮೇಶ್ ಸುಮಾರು 8 ವರ್ಷ ನನ್ನೊಡನೆ ನಗು ನಗುತ್ತಾ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ’ ಎಂದು ಸಚಿವ ಸುರೇಶ್ ಕುಮಾರ್ ಶ್ರದ್ದಾಂಜಲಿ ಅರ್ಪಿಸಿದ್ದಾರೆ.

https://www.facebook.com/100000520624203/posts/4454056501288327/

(Education minister suresh kumar personal assistant ramesh died due to coronavirus)

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು