SSLC ಹಾಗೂ ದ್ವಿತೀಯ PU ಪರೀಕ್ಷೆ ನಡೆಸುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸುರೇಶ್ ಕುಮಾರ್.. ಹೇಳಿದ್ದೇನು?

|

Updated on: May 23, 2021 | 12:39 PM

SSLC PUC Exams ರಾಜ್ಯಕ್ಕೆ 3ನೇ ಅಲೆ ಆತಂಕ ಎದುರಾಗಿದೆ, ಆದರೂ ದ್ವಿತೀಯ ಪಿಯು, SSLC ಪರೀಕ್ಷೆ ನಡೆಸಬೇಕು. ಆಗಸ್ಟ್ ವೇಳೆಗೆ ಸೋಂಕಿನ ಪ್ರಮಾಣ ತಗ್ಗುವ ಸಾಧ್ಯತೆಯಿದೆ. ಕೊರೊನಾ ಕಡಿಮೆಯಾದ ಬಳಿಕ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗುತ್ತೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

SSLC ಹಾಗೂ ದ್ವಿತೀಯ PU ಪರೀಕ್ಷೆ ನಡೆಸುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸುರೇಶ್ ಕುಮಾರ್.. ಹೇಳಿದ್ದೇನು?
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
Follow us on

ಬೆಂಗಳೂರು: ರಾಜ್ಯದಲ್ಲಿ SSLC, ದ್ವಿತೀಯ PU ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿ ಪರೀಕ್ಷೆಗಳನ್ನು ನಡೆಸುವ ಸಂಬಂಧ ಇಂದು ಮಹತ್ವದ ಸಭೆ ನಡೆಯುತ್ತಿದೆ. ದೆಹಲಿಯಲ್ಲಿ ಇಂದು ನಡೆಯುವ ಕೇಂದ್ರ ಸಚಿವರ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಸಚಿವರಾದ ರಾಜನಾಥ್ ಸಿಂಗ್, ಪ್ರಕಾಶ್ ಜಾವಡೇಕರ್, ಸ್ಮೃತಿ ಇರಾನಿ, ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು ಸಭೆಯಲ್ಲಿ ಭಾಗಿಯಾಗಿ ತಮ್ಮ ನಿಲುವು ತಿಳಿಸಲಿದ್ದಾರೆ.

ಈ ಬಗ್ಗೆ ಮಾತನಾಡಿದ ಪ್ರಾಥಮಿಕ & ಪ್ರೌಢಶಿಕ್ಷಣ ಸಚಿವ S.ಸುರೇಶ್‌ ಕುಮಾರ್, ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಕಷ್ಟ. ಈಗ ಪರೀಕ್ಷೆ ನಡೆಸಿದರೆ ಕೊರೊನಾ ಮತ್ತಷ್ಟು ಹೆಚ್ಚಾಗುತ್ತೆ. ಉಪಚುನಾವಣೆ ವೇಳೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ಹಲವು ಶಿಕ್ಷಕರು ಕೊರೊನಾಗೆ ಮೃತಪಟ್ಟಿದ್ದಾರೆ. ಇನ್ನೂ ಹಲವು ಶಿಕ್ಷಕರು ಕೊರೊನಾದಿಂದ ಬಳಲುತ್ತಿದ್ದಾರೆ. ಇದರ ನಡುವೆ ರಾಜ್ಯಕ್ಕೆ 3ನೇ ಅಲೆ ಆತಂಕ ಎದುರಾಗಿದೆ, ಆದರೂ ದ್ವಿತೀಯ ಪಿಯು, SSLC ಪರೀಕ್ಷೆ ನಡೆಸಬೇಕು. ಆಗಸ್ಟ್ ವೇಳೆಗೆ ಸೋಂಕಿನ ಪ್ರಮಾಣ ತಗ್ಗುವ ಸಾಧ್ಯತೆಯಿದೆ. ಕೊರೊನಾ ಕಡಿಮೆಯಾದ ಬಳಿಕ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗುತ್ತೆ ಎಂದು ತಿಳಿಸಿದ್ದಾರೆ.

ಕೊರೊನಾ ಮಾರ್ಗಸೂಚಿ ಅನ್ವಯ ಕಳೆದ ವರ್ಷದಂತೆ ಈ ವರ್ಷವೂ ಪರೀಕ್ಷೆ ನಡೆಸೋಕೆ ಚಿಂತನೆ ನಡೆಸಲಾಗುತ್ತೆ. ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾಗದಿದ್ದರೂ, ಪರೀಕ್ಷೆಯನ್ನ ಸಂಪೂರ್ಣವಾಗಿ ರದ್ದು ಮಾಡುವ ನಿರ್ಧಾರ ಶಿಕ್ಷಣ ಇಲಾಖೆಯ ಮುಂದಿಲ್ಲ. ಈಗಾಗ್ಲೇ ICSE ಹಾಗೂ CBSE ಬೋರ್ಡ್ಗಳು 10ನೇ ತರಗತಿ ಪರೀಕ್ಷೆಯನ್ನ ರದ್ದು ಮಾಡಿದೆ. 11ನೇ ತರಗತಿಗಳ‌ ಶೈಕ್ಷಣಿಕ ವರ್ಷವೂ ಆನ್ ಲೈನ್ ಮೂಲಕ ಕೆಲವು ಕಾಲೇಜುಗಳಲ್ಲಿ ಪ್ರಾರಂಭವಾಗಿದೆ. ಆದ್ರೆ ರಾಜ್ಯ ಪಠ್ಯ ಕ್ರಮದ ಮಕ್ಕಳಿಗೆ ಇನ್ನು ಪರೀಕ್ಷೆಯ ಬಗ್ಗೆ ಗೊಂದಲವಿದೆ.

ಪರೀಕ್ಷೆ ನಡೆಯುತ್ತೊ ಇಲ್ವೊ ಅನ್ನೋ ಟೆನ್ಷನ್ ಇದೆ. ರಾಜ್ಯದಲ್ಲಿ ಸದ್ಯ SSLC ಪರೀಕ್ಷೆ ಬರೆಯಲು 8 ಲಕ್ಷದ 90 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ದ್ವಿತೀಯು ಪಿಯುಸಿಗೆ 6,86,663 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ರು.

ಇದನ್ನೂ ಓದಿ: Karnataka SSLC Exam 2021: ಸಿಬಿಎಸ್​ಇ ಪರೀಕ್ಷೆ ರದ್ದಿನಂತೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬಗ್ಗೆ ತಕ್ಷಣಕ್ಕೆ ಯಾವುದೇ ತೀರ್ಮಾನವಿಲ್ಲ: ಸಚಿವ ಸುರೇಶ್ ಕುಮಾರ್