AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಇಲಾಖೆ ಆದೇಶವಿಲ್ಲದೆ ಪ್ರಥಮ ಪಿಯು ದಾಖಲಾತಿ ಮಾಡುವಂತಿಲ್ಲ; ಆನ್​ಲೈನ್​ ತರಗತಿ ನಡೆಸುವಂತಿಲ್ಲ

ಈ ಕ್ರಮಗಳ ಬಗ್ಗೆ ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಕ್ರಮವಹಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.

ಶಿಕ್ಷಣ ಇಲಾಖೆ ಆದೇಶವಿಲ್ಲದೆ ಪ್ರಥಮ ಪಿಯು ದಾಖಲಾತಿ ಮಾಡುವಂತಿಲ್ಲ; ಆನ್​ಲೈನ್​ ತರಗತಿ ನಡೆಸುವಂತಿಲ್ಲ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 09, 2021 | 6:29 PM

Share

ಬೆಂಗಳೂರು: ಎಸ್​ಎಸ್​ಎಲ್​ಸಿ ಫಲಿತಾಂಶದ ಬಳಿಕವೇ ಪಿಯುಸಿಗೆ ದಾಖಲಾತಿ ಕಾರ್ಯ ನಡೆಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಪ್ರಥಮ ಪಿಯುಸಿ ದಾಖಲಾತಿಗೆ ಗೈಡ್‌ಲೈನ್ಸ್ ನೀಡುತ್ತೇವೆ. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಗೈಡ್‌ಲೈನ್ಸ್ ಹೊರಡಿಸುತ್ತೇವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.

ಮಾರ್ಗಸೂಚಿ 2021-22 ಬಿಡುಗಡೆ ಬಳಿಕ ದಾಖಲಾತಿ ಕಾರ್ಯ ಆರಂಭಿಸಬೇಕು. ಶಿಕ್ಷಣ ಇಲಾಖೆ ಆದೇಶವಿಲ್ಲದೆ ಪ್ರಥಮ ಪಿಯು ದಾಖಲಾತಿ ಮಾಡುವಂತಿಲ್ಲ. ಪ್ರಥಮ ಪಿಯುಸಿ ಆನ್​ಲೈನ್​ ತರಗತಿ ನಡೆಸುವಂತಿಲ್ಲ. ಇಲಾಖೆ ಆದೇಶ ಧಿಕ್ಕರಿಸುವ ಕಾಲೇಜುಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಆದೇಶ ಉಲ್ಲಂಘಿಸುವ ಕಾಲೇಜುಗಳ ಮಾನ್ಯತೆ ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ಕ್ರಮಗಳ ಬಗ್ಗೆ ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಕ್ರಮವಹಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.

ಎಸ್​ಎಸ್​ಎಸಲ್​ಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುವ ಸಂಬಂಧ ಇಂದು (ಜೂನ್ 9) ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಡಿಡಿಪಿಐಗಳ ಜೊತೆ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸಭೆ ನಡೆಸಿ ಚರ್ಚಿಸದರು. ಸುಧಾರಿತ ಗೈಡ್‌ಲೈನ್ಸ್‌ನೊಂದಿಗೆ ಪರೀಕ್ಷೆ ನಡೆಸೋಣ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ಎಂದು ಎಲ್ಲ ಡಿಡಿಪಿಐಗಳಿಗೆ ಎಸ್. ಸುರೇಶ್‌ಕುಮಾರ್ ಸೂಚನೆ ನೀಡಿದರು.

ಪರೀಕ್ಷೆ ಬರೆಯುವುದಕ್ಕೆ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಬೇಕು ಎಂದು ಪೋಷಕರಿಗೆ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸಲಹೆ ನೀಡಿದರು. ರಾಜ್ಯದಲ್ಲಿ SSLC ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲಿಯೇ SSLC ಪರೀಕ್ಷಾ ದಿನಾಂಕ ಘೋಷಣೆ ಮಾಡುತ್ತೇವೆ. ಮುಂದಿನ ವ್ಯಾಸಂಗಕ್ಕೆ ವಿದ್ಯಾರ್ಥಿಗಳ ಸಾಮರ್ಥ್ಯ ಅಗತ್ಯ. ಹಾಗಾಗಿ, ಸಾಮರ್ಥ್ಯ ಗುರುತಿಸಿಕೊಳ್ಳುವ ದೃಷ್ಟಿಯಿಂದ ಪರೀಕ್ಷೆ ಮಾಡುತ್ತೇವೆ. ಹೀಗಾಗಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಲು ಕ್ರಮಕೈಗೊಳ್ಳಿ ಎಂದು ಡಿಡಿಪಿಐಗಳಿಗೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಸೂಚನೆ ನೀಡಿದರು.

ಇದನ್ನೂ ಓದಿ: Karnataka SSLC 2021 Exam: ಎಸ್​ಎಸ್​ಎಸಲ್​ಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ; ಶೀಘ್ರವೇ ಪರೀಕ್ಷಾ ದಿನಾಂಕ ಘೋಷಣೆ: ಸುರೇಶ್ ಕುಮಾರ್

2nd PU Exams for Repeaters: ಪಿಯು ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ರಿಪೀಟರ್ಸ್ ವಿದ್ಯಾರ್ಥಿಗಳು

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ