ಈದ್ ಮೆರವಣಿಗೆ ವೇಳೆ ಹಿಂದೂಗಳು ದಾಳಿ ಮಾಡಿದ್ರೆ ಏನಾಗುತ್ತೆ ಊಹೆ ಇದೆಯಾ: ಪಂಪ್ ವೆಲ್ ಪ್ರಚೋದನಕಾರಿ ಹೇಳಿಕೆ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಹಲವೆಡೆ ಪ್ರತಿಭಟನೆ ಮಾಡಲಾಗುತ್ತಿದೆ. ಇತ್ತ ಮಂಗಳೂರಿನ ಮಲ್ಲಿಕಟ್ಟೆ ಸರ್ಕಲ್ ಬಳಿ ವಿಹೆಚ್​ಪಿ ಧರಣಿ ಮಾಡಿದೆ. ಈ ಬಗ್ಗೆ ಮಾತನಾಡಿರುವ ಶರಣ್ ಪಂಪ್ ವೆಲ್, ಈದ್ ಮೆರವಣಿಗೆ ವೇಳೆ ಎಲ್ಲಾ ಹಿಂದುಗಳು ದಾಳಿ ಮಾಡಿದರೆ ಏನಾಗಬಹುದು ಅಂತಾ ಊಹೆ ಇದೆಯಾ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಈದ್ ಮೆರವಣಿಗೆ ವೇಳೆ ಹಿಂದೂಗಳು ದಾಳಿ ಮಾಡಿದ್ರೆ ಏನಾಗುತ್ತೆ ಊಹೆ ಇದೆಯಾ: ಪಂಪ್ ವೆಲ್ ಪ್ರಚೋದನಕಾರಿ ಹೇಳಿಕೆ
ಈದ್​ ಮಿಲಾದ್​ ಮೆರವಣಿಗೆ ಅನುಮತಿ ಕೊಡ್ಬಾರದು: ಕೊಟ್ರೆ ಮತ್ತೆ ಗಲಭೆ ಮಾಡ್ತಾರೆ ಎಂದ ಶರಣ್ ಪಂಪ್ ವೆಲ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Sep 12, 2024 | 7:16 PM

ಮಂಗಳೂರು, ಸೆಪ್ಟೆಂಬರ್​​ 12: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣ ಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮಲ್ಲಿಕಟ್ಟೆ ಸರ್ಕಲ್ ಬಳಿ ವಿಹೆಚ್​ಪಿ ಧರಣಿ ಕೈಗೊಂಡಿದೆ. ಈ ವೇಳೆ ವಿಹೆಚ್​ಪಿ ಮುಖಂಡ ಶರಣ್ ಪಂಪ್ ವೆಲ್ (sharan pumpwell) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈದ್ ಮೆರವಣಿಗೆ ವೇಳೆ ಎಲ್ಲಾ ಹಿಂದೂಗಳು ದಾಳಿ ಮಾಡಿದರೆ ಏನಾಗಬಹುದು ಅಂತಾ ಊಹೆ ಇದೆಯಾ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ವಾರ ಈದ್ ಮೆರವಣಿಗೆ ಮೇಲೆ ಎಲ್ಲಾ ಹಿಂದುಗಳು ದಾಳಿ ಮಾಡಿದರೆ ಏನಾಗಬಹುದು ಅಂತಾ ಊಹೆ ಇದೆಯಾ. ಆದ್ದರಿಂದ ನಿನ್ನೆಯ ದಾಳಿಕೋರರಿಗೆ ಎಚ್ವರಿಕೆ ಸಂದೇಶ ಕೊಡುತ್ತಿದ್ದೇವೆ. ಸರ್ಕಾರ ಈದ್ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು. ಈದ್ ನೆಪದಲ್ಲಿ ಕೂಡ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾಗಮಂಗಲ ಗಲಭೆ ಪ್ರಕರಣ; ಯಾವುದೇ ಧರ್ಮದವರಾಗಿರಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು-ಸಿದ್ದರಾಮಯ್ಯ

ನಿನ್ನೆಯ ಮಂಡ್ಯ ಗಲಭೆ ಹಿಂದೆ ನಿಷೇಧಿತ ಪಿಎಫ್​ಐ ಕೈವಾಡ ಇದೆ‌. ನಮ್ಮ ಮೆರವಣಿಗೆಗೆ ರಾಜ್ಯ ಸರ್ಕಾರ ಭದ್ರತೆ ನೀಡಲು ಸಿದ್ದವಿಲ್ಲದಿದ್ದರೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಮುಂದಿನ ದಿನಗಳಲ್ಲಿ ಮಿಲಿಟರಿ ಕರೆಸುತ್ತೇವೆ ಎಂದಿದ್ದಾರೆ.

ಈದ್​ ಮಿಲಾದ್​ ಮೆರವಣಿಗೆ ಅನುಮತಿ ಕೊಡ್ಬಾರದು: ಕೊಟ್ರೆ ಮತ್ತೆ ಗಲಭೆ ಮಾಡ್ತಾರೆ

ಸೋಮವಾರ ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ಕೊಡಬಾರದು. ಅನುಮತಿ ಕೊಟ್ಟರೆ ಮತ್ತೆ ಇವರು ಗಲಭೆ ಮಾಡುತ್ತಾರೆ. ಇದಕ್ಕೆ ನೇರವಾಗಿ ರಾಜ್ಯ ಸರ್ಕಾರವೇ ಹೊಣೆ ಆಗುತ್ತದೆ ಎಂದು ಕಿಡಿಕಾರಿದ್ದಾರೆ. ಇದು ಭಯೋತ್ಪಾದಕ ಕೃತ್ಯ. ಗಣೇಶೋತ್ಸವ ನಡೆಸಬಾರದೆಂದು ಪೂರ್ವನಿಯೋಜಿತ ಕೃತ್ಯ. ಇದು ಕೋಮುಗಲಭೆ ಅಲ್ಲ, ಇದು ಗಣೇಶೋತ್ಸವ ಸಮಿತಿಯ ಮೇಲೆ ನಡೆದಿರುವ ದಾಳಿ. ಇಸ್ಲಾಮಿಕ್ ಭಯೋತ್ಪಾದಕರಿಂದ ಹಿಂದೂಗಳ ಮೇಲೆ ದಾಳಿ ಎಂದು ಶರಣ್ ಪಂಪ್ ವೆಲ್ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ: ಸಚಿವ ಜಮೀರ್ ಹೇಳಿದ್ದೇನು?

ಗೃಹ ಸಚಿವರು ಆಕಸ್ಮಿಕ ಘಟನೆ ಅಂತಾ ಹೇಳಿದ್ದಾರೆ. ನಿಮ್ಮ ಇಲಾಖೆಯ ಪೊಲೀಸರ ಮೇಲೆ ಹಲ್ಲೆ ಆಗಿ ಗಾಯಗೊಂಡಿದ್ದಾರೆ. ಇದು ನಿಮಗೆ ಸಣ್ಣ ಘಟನೆನಾ ಎಂದು ಪ್ರಶ್ನಿಸಿದ್ದಾರೆ. ಡಿ.ಜೆ.ಹಳ್ಳಿ, ಕೆಜೆ ಹಳ್ಳಿ, ಮಂಗಳೂರಿನ ಡಿ.ಸಿ.ಕಚೇರಿ, ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆಗಳ ನಂತರವೂ ಎಚ್ಚೆತ್ತುಕೊಂಡಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:21 pm, Thu, 12 September 24

ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು