ಚಿಕ್ಕಬಳ್ಳಾಪುರ: ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೆ 8 ತಿಂಗಳ ಗರ್ಭಿಣಿ ಸಾವು
ಗೌರಿಬಿದನೂರು ತಾಲೂಕು ಆಸ್ಪತ್ರೆ, ಚಿಕ್ಕಬಳ್ಳಾಪುರದ ಖಾಸಗಿ ಜೀವನ್ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಹೋಗಿದ್ದರು. ಕೊರೊನಾ ವರದಿ ತಂದರೆ ಮಾತ್ರ ಚಿಕಿತ್ಸೆ ನೀಡುತ್ತೇವೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ ಕೊವಿಡ್ ವರದಿ ನೆಗಟಿವ್ ಬಂದಿತ್ತು.
ಚಿಕ್ಕಬಳ್ಳಾಪುರ: ಆಸ್ಪತ್ರೆಗಳಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣ 8 ತಿಂಗಳ ತುಂಬು ಗರ್ಭಿಣಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹುಲಿಕುಂಟೆ ಗ್ರಾಮದ ರಮ್ಯಾ ಮೃತ ದುರ್ಧೈವಿ. 22 ವರ್ಷದ ರಮ್ಯಾ ಸಾಮಾನ್ಯ ಕೆಮ್ಮು ಹಾಗೂ ಸಾಮಾನ್ಯ ಗರ್ಭಿಣಿ ಚೆಕ್ ಅಪ್ಗಾಗಿ ಪರದಾಡಿ ಕೊನೆಯುಸಿರೆಳೆದಿದ್ದಾರೆ.
ಗೌರಿಬಿದನೂರು ತಾಲೂಕು ಆಸ್ಪತ್ರೆ, ಚಿಕ್ಕಬಳ್ಳಾಪುರದ ಖಾಸಗಿ ಜೀವನ್ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಹೋಗಿದ್ದರು. ಕೊರೊನಾ ವರದಿ ತಂದರೆ ಮಾತ್ರ ಚಿಕಿತ್ಸೆ ನೀಡುತ್ತೇವೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ ಕೊವಿಡ್ ವರದಿ ನೆಗಟಿವ್ ಬಂದಿತ್ತು. ಗೌರಿಬಿದನೂರಿನಿಂದ ಮತ್ತೆ ವಾಣಿವಿಲಾಸ ಆಸ್ಪತ್ರೆಗೆ ನಿನ್ನೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾಗಿ ಕೆಲವೆ ನಿಮಿಷಗಳಲ್ಲಿ ರಮ್ಯಾ ಮೃತಪಟ್ಟಿದ್ದಾರೆ. ವೈದ್ಯರು ನಿರ್ಲಕ್ಷ್ಯದಿಂದ ಪತ್ನಿ ಸಾವನ್ನಪ್ಪಿದ್ದಾರೆ ಎಂದು ಪತಿ ವಿಜಯ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ಸಂಪೂರ್ಣ ಲಾಕ್ಡೌನ್ ನಾಳೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಸಂಪೂರ್ಣ ಲಾಕ್ಡೌನ್ ಆಗುತ್ತಿರುವ ಹಿನ್ನೆಲೆ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. 10 ಗಂಟೆಯ ವರೆಗೆ ಅವಕಾಶ ಇರುವುದರಿಂದ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಜನರ ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತಿದೆ. ಈ ನಡುವೆ ಟ್ರಾಫಿಕ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಮಂಡ್ಯದಲ್ಲಿ ಫಂಗಸ್ಗೆ ಮೊದಲ ಬಲಿ ಮಂಡ್ಯ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ಗೆ ಓರ್ವ ವೃದ್ಧ ಬಲಿಯಾಗಿರುವ ಬಗ್ಗೆ ವರದಿಯಾಗಿದೆ. 68 ವರ್ಷದ ವೃದ್ಧ ಮಂಡ್ಯದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ನಾಲ್ವರಿಗೆ ಬ್ಲ್ಯಾಕ್ ಫಂಗಸ್ ದೃಢಪಟ್ಟಿತ್ತು. ಇದರಲ್ಲಿ ಇದೀಗ ಒಬ್ಬರು ಸಾವನ್ನಪ್ಪಿದ್ದು, ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ
ಸೇವಾ ಸಿಂಧು ಪೋರ್ಟಲ್ನಲ್ಲಿ ತಾಂತ್ರಿಕ ದೋಷಗಳು: ಯಾರಿಗೆ ಹೇಳೋಣ ನಮ್ಮ ಪ್ರಾಬ್ಲಮು ಅಂತಿದ್ದಾರೆ ಚಾಲಕರು
ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಕನಿಷ್ಠ 594 ಭಾರತೀಯ ವೈದ್ಯರು ಮೃತಪಟ್ಟಿದ್ದಾರೆ: ಐಎಂಎ ವರದಿ
(eight months pregnant lady died Not getting timely treatment in Chikkaballapur hospitals)
Published On - 10:36 am, Wed, 2 June 21