ವಿಜಯಪುರದಲ್ಲಿರುವ ಜಿಲ್ಲಾ ಬಾಲಕಿಯರ ಬಾಲ ಮಂದಿರದ 8 ವಿದ್ಯಾರ್ಥಿನಿಯರಿಗೆ ಕೊವಿಡ್

ಬಾಲಕಿಯರ ಬಾಲ ಮಂದಿರದಲ್ಲಿ ಕೊರೊನಾ ಸೋಂಕು ಉಲ್ಬಣವಾದ ಹಿನ್ನೆಲೆಯಲ್ಲಿ ಬಾಲ ಮಂದಿರವನ್ನು ಮೈಕ್ರೋಜೋನ್ ಮಾಡಲಾಗಿದ್ದು, ಉಸ್ತುವಾರಿಗಾಗಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ವಿಜಯಪುರದಲ್ಲಿರುವ ಜಿಲ್ಲಾ ಬಾಲಕಿಯರ ಬಾಲ ಮಂದಿರದ 8 ವಿದ್ಯಾರ್ಥಿನಿಯರಿಗೆ ಕೊವಿಡ್
ಕೊರೊನಾ ಪರೀಕ್ಷೆ (ಪ್ರಾತಿನಿಧಿಕ ಚಿತ್ರ)
Follow us
ರಶ್ಮಿ ಕಲ್ಲಕಟ್ಟ
|

Updated on:Apr 27, 2021 | 7:59 PM

ವಿಜಯಪುರ: ವಿಜಯಪುರದಲ್ಲಿರುವ ಜಿಲ್ಲಾ ಬಾಲಕಿಯರ ಬಾಲ ಮಂದಿರದ 8 ವಿದ್ಯಾರ್ಥಿನಿಯರಿಗೆ ಕೊವಿಡ್ ದೃಢಪಟ್ಟಿದೆ. ಸೋಂಕಿತ 8 ವಿದ್ಯಾರ್ಥಿಗಳಿಗೆ ಕ್ವಾರಂಟೈನ್‌ ಮಾಡಲಾಗಿದೆ ಎಂದು ಬಾಲಮಂದಿರದ ಅಧೀಕ್ಷಕಿ ವಿ.ಜಿ ಮಾನೆ ಹೇಳಿದ್ದಾರೆ . ಈ ಬಾಲಮಂದಿರದಲ್ಲಿ ಒಟ್ಟು 42 ಜನ‌ ವಿದ್ಯಾರ್ಥಿನಿಯರಿದ್ದು, ಅದರಲ್ಲಿ 10 ಜನರನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಇಬ್ಬರಿಗೆ ಕೊವಿಡ್ ನೆಗೆಟಿವ್ ವರದಿ ಬಂದಿದ್ದು , 8 ವಿದ್ಯಾರ್ಥಿಗಳಿಗೆ ಕೊವಿಡ್ ದೃಢಪಟ್ಟಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ ಮಾನೆ.

ಬಾಲಕಿಯರ ಬಾಲ ಮಂದಿರದಲ್ಲಿ ಕೊರೊನಾ ಸೋಂಕು ಉಲ್ಬಣವಾದ ಹಿನ್ನೆಲೆಯಲ್ಲಿ ಬಾಲ ಮಂದಿರವನ್ನು ಮೈಕ್ರೋಜೋನ್ ಮಾಡಲಾಗಿದ್ದು, ಉಸ್ತುವಾರಿಗಾಗಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಹಾಸ್ಟೆಲ್ ಗಳಲ್ಲಿ ಸ್ವಚ್ಚತಾ ಕಾರ್ಯ ಹಾಗೂ ಕೊವಿಡ್ ನಿಯಮಗಳ ಪಾಲನೆಗಾಗಿ ತಂಡ ರಚನೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಸುನೀಲಕುಮಾರ್ ಹೇಳಿದ್ದಾರೆ.

ಕೊರೊನಾ ಸಂಕಷ್ಟದಲ್ಲಿ ಬಿಎಲ್​ಡಿಇ ಆಸ್ಪತ್ರೆಯಲ್ಲಿ ಹಾಸಿಗೆ ಸಂಖ್ಯೆ ಏರಿಕೆ

ರೊನಾ ಎರಡನೇ ಅಲೆಗೆ ತುತ್ತಾಗಿರುವ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸಲು ಹಾಸಿಗೆಗಳ ಸಂಖ್ಯೆ ಹೆಚ್ಚಿಸಿ ಹಾಗೂ ಚಿಕಿತ್ಸಾ ವೆಚ್ಚದಲ್ಲಿ ತೀವ್ರ ಕಡಿತಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿರ್ಣಯವನ್ನು ಬಿಎಲ್​ಡಿಇ ಸಂಸ್ಥೆ ಕೈಗೊಂಡಿದೆ.

ಕೊರೊನಾ ಹೆಚ್ಚುತ್ತಿದ್ದು ಆಸ್ಪತ್ರೆಗಳಲ್ಲಿ ಬೆಡ್‍ಗಳು ದೊರಕುತ್ತಿಲ್ಲ, ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗುತ್ತಿಲ್ಲ ಎಂಬ ವ್ಯಾಪಕ ಕೂಗು ವಿಜಯಪುರ ಜಿಲ್ಲೆಯಲ್ಲಿ ಕೇಳಿಬರುತ್ತಿತ್ತು. ಬಿಎಲ್ಡಿಇ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಂ.ಬಿ ಪಾಟೀಲ್ ಆಸ್ಪತ್ರೆಯ ಹಿರಿಯ ವೈದ್ಯರ ಜೊತೆಗೆ ತುರ್ತು ಸಭೆ ನಡೆಸಿದರು.

ಬಿಎಲ್ಡಿಇ ಆಸ್ಪತ್ರೆಯಲ್ಲಿ 250 ಬೆಡ್‍ಗಳಿಗೆ ಮೀಸಲಾಗಿದ್ದ ಕೊರೊನಾ ಹಾಸಿಗೆಗಳ ಸಂಖ್ಯೆಯನ್ನು 500ಕ್ಕೆ ವಿಸ್ತರಣೆ ಮಾಡಲಾಗಿದ್ದು, ಇದರಲ್ಲಿ ಜನರಲ್ ವಾರ್ಡನಲ್ಲಿ 200, ಐ.ಸಿ.ಯು ನಲ್ಲಿ 50, ಮತ್ತು ಸ್ಪೆಷಲ್ ರೂಂಗಳಲ್ಲಿ 50. ಒಟ್ಟು 300 ಆಕ್ಸಿಜನ್ ಬೆಡ್‍ಗಳು ಲಭ್ಯವಿದೆ. ಅಲ್ಲದೇ 200 ಐಸೊಲೇಶನ್ ಬೆಡ್‍ಗಳು ಸೋಂಕಿತರಿಗೆ ಒದಗಿಸಲಾಗುತ್ತಿದೆ ಎಂದು ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಅಲ್ಲದೇ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ನಿಗದಿಪಡಿಸಿದ ಚಿಕಿತ್ಸಾ ದರಕ್ಕಿಂತಲೂ ಬಿಎಲ್ಡಿಇ ಆಸ್ಪತ್ರೆಯಲ್ಲಿ ಶೇ 70 ಕಡಿಮೆ ಶುಲ್ಕವನ್ನು ಕಳೆದ 2 ತಿಂಗಳಿಂದಲೂ ಪಡೆಯಲಾಗುತ್ತಿದೆ. ಇದೀಗ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ, ಬಡವರಿಗೆ, ಜನಸಾಮಾನ್ಯರಿಗೆ ಅನಕೂಲವಾಗಲಿ ಎಂಬ ಕಾರಣದಿಂದ ರಿಯಾಯಿತಿ ಶುಲ್ಕವನ್ನು ಮುಂದುವರೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಎಂ.ಬಿ ಪಾಟೀಲ ಹೇಳಿದ್ದಾರೆ.

ರಾಜ್ಯ ಸರ್ಕಾರ ಜನರಲ್ ವಾರ್ಡ್‍ಗಳಲ್ಲಿ ಆಕ್ಸಿಜನ್ ರಹಿತ ಬೆಡ್‍ಗೆ ರೂಪಾಯಿ 10 ಸಾವಿರ ನಿಗದಿಪಡಿಸಿದ್ದಾರೆ ಬಿಎಲ್ಡಿಇಯಲ್ಲಿ 3 ಸಾವಿರ, ಆಕ್ಸಿಜನ್ ಸಹಿತ ಬೆಡ್‍ಗೆ ಸರ್ಕಾರ ನಿಗದಿಪಡಿಸಿದ ರೂ 12 ಸಾವಿರ ಬದಲಾಗಿ ಇಲ್ಲಿ ರೂ 5 ಸಾವಿರ ಹಾಗೂ ಐ.ಸಿ.ಯುನಲ್ಲಿ ವೆಂಟಿಲೆಟರ್ ಗೆ ರೂ 25 ಸಾವಿರ ನಿಗದಿತ ವೆಚ್ಚದ ಬದಲಾಗಿ ರೂ 8ಸಾವಿರ ಮಾತ್ರ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಿಡಿಲು ಬಡಿದು ಮಹಿಳೆ ಸಾವು; ವಿಜಯಪುರ ಜಿಲ್ಲೆಯಲ್ಲಿ ನಡೆದ ಘಟನೆ

ವಿಜಯಪುರ: ಕೊರೊನಾ ಸಂಕಷ್ಟದಲ್ಲಿ ಬಿಎಲ್​ಡಿಇ ಆಸ್ಪತ್ರೆಯಲ್ಲಿ ಹಾಸಿಗೆ ಸಂಖ್ಯೆ ಏರಿಕೆ, ಚಿಕಿತ್ಸಾ ಶುಲ್ಕ ಇಳಿಕೆ

Published On - 3:39 pm, Tue, 27 April 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ