AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ 8 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಹಸಿರು ನಿಶಾನೆ, ಹಾಸನಕ್ಕೂ ಒಂದು ವಿವಿ: ಉಳಿದವು ಎಲ್ಲೆಲ್ಲಿ?

ಮಂಡ್ಯ ವಿವಿ ಒಂದನ್ನು ಹೊರತುಪಡಿಸಿ ಮಿಕ್ಕ 7 ವಿ.ವಿ.ಗಳ ಆರಂಭವನ್ನು ಈ ವರ್ಷದ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ ಈಗಾಗಲೇ ತಲಾ 2 ಕೋಟಿ ರೂ.ಗಳಂತೆ ಒಟ್ಟು 14 ಕೋಟಿ ರೂಪಾಯಿ ಒದಗಿಸಲಾಗಿದೆ - ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ

ರಾಜ್ಯದಲ್ಲಿ 8 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಹಸಿರು ನಿಶಾನೆ, ಹಾಸನಕ್ಕೂ ಒಂದು ವಿವಿ: ಉಳಿದವು ಎಲ್ಲೆಲ್ಲಿ?
ರಾಜ್ಯದಲ್ಲಿ 8 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಹಸಿರು ನಿಶಾನೆ, ಹಾಸನದಲ್ಲೂ ವಿವಿ ಸ್ಥಾಪನೆ: ಉಳಿದವು ಎಲ್ಲೆಲ್ಲಿ?
TV9 Web
| Updated By: ಸಾಧು ಶ್ರೀನಾಥ್​|

Updated on: Aug 25, 2022 | 2:56 PM

Share

ಬೆಂಗಳೂರು: ಎಂಟು ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ ‘ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ (higher education minister Dr cn Ashwathnarayan) ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಇದರಿಂದಾಗಿ ಚಾಮರಾಜನಗರ, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ, ಬೀದರ್ ಮತ್ತು ಮಂಡ್ಯ ವಿ.ವಿ.ಗಳ ಸ್ಥಾಪನೆ ಸುಗಮವಾಗಿ ನಡೆಯಲಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದಿದ್ದಾರೆ.

ಹೊಸ ವಿ.ವಿ.ಗಳ ಪೈಕಿ ಕ್ರಮವಾಗಿ ಚಾಮರಾಜನಗರ ವಿ.ವಿ.ಯಲ್ಲಿ 18, ಹಾಸನ ವಿ.ವಿ.ಯಲ್ಲಿ 36, ಹಾವೇರಿ 40, ಬೀದರ್ 140, ಕೊಡಗು 24, ಕೊಪ್ಪಳ 40 ಮತ್ತು ಬಾಗಲಕೋಟೆ ವಿವಿಗಳು 71 ಕಾಲೇಜುಗಳನ್ನು ಹೊಂದಿರಲಿವೆ. ಇವುಗಳ ಜತೆಗೆ ಮಂಡ್ಯ ವಿ.ವಿ. ವ್ಯಾಪ್ತಿಗೆ ಆ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳು ಬರಲಿವೆ ಎಂದು ಅವರು ವಿವರಿಸಿದರು.

ಮಂಡ್ಯ ವಿವಿ ಒಂದನ್ನು ಹೊರತುಪಡಿಸಿ ಮಿಕ್ಕ 7 ವಿ.ವಿ.ಗಳ ಆರಂಭವನ್ನು ಈ ವರ್ಷದ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ ಈಗಾಗಲೇ ತಲಾ 2 ಕೋಟಿ ರೂ.ಗಳಂತೆ ಒಟ್ಟು 14 ಕೋಟಿ ರೂಪಾಯಿ ಒದಗಿಸಲಾಗಿದೆ. ಏಕೀಕೃತ ವಿವಿಯಾಗಿದ್ದ ಮಂಡ್ಯದ ಸರಕಾರಿ ಕಾಲೇಜನ್ನು ಪೂರ್ಣ ಪ್ರಮಾಣದ ವಿ.ವಿ.ಯಾಗಿ ಮಾಡುವ ತೀರ್ಮಾನವನ್ನು ಇತ್ತೀಚೆಗೆ ಕೈಗೊಳ್ಳಲಾಗಿತ್ತು ಎಂದು ಅವರು ವಿವರಿಸಿದರು.

ಜಿಲ್ಲೆಗೊಂದು ವಿವಿ ಇರಬೇಕು ಎನ್ನುವುದು ಸರಕಾರದ ತೀರ್ಮಾನವಾಗಿದೆ. ಈ ಮೂಲಕ ಶೈಕ್ಷಣಿಕ ಅಸಮತೋಲನ ನಿವಾರಣೆ ಮಾಡಲಾಗುವುದು. ಜೊತೆಗೆ, ಯುವಜನರಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಶಿಕ್ಷಣ ನೀಡುವ ಸದಾಶಯ ಇದರ ಹಿಂದಿದೆ ಎಂದು ಸಚಿವರು ಹೇಳಿದರು.

ನೂತನ ವಿ.ವಿ.ಗಳ ಸ್ಥಾಪನೆಗೆ ಆರ್ಥಿಕ ಮತ್ತು ಯೋಜನಾ ಇಲಾಖೆಗಳು ಒಪ್ಪಿಗೆ ನೀಡಿವೆ. ಇವು ಕಡಿಮೆ ಸ್ಥಳ, ಕಡಿಮೆ ಸಿಬ್ಬಂದಿ ಮತ್ತು ಕಡಿಮೆ ವೆಚ್ಚದೊಂದಿಗೆ ಕಾರ್ಯ ಚಟುವಟಿಕೆ ನಡೆಸಲಿವೆ ಎಂದು ಅವರು ಹೇಳಿದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ