ಮಾನಸಿಕ ಖಿನ್ನತೆ: ಜೀವನದಲ್ಲಿ ಗೆಲ್ಲಲು ಆಗಲಿಲ್ಲ ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಏಕಲವ್ಯ ಪ್ರಶಸ್ತಿ ವಿಜೇತೆ
ಮಾನಸಿಕವಾಗಿ ನೊಂದು ಹೋಗಿದ್ದ ಶಿಲ್ಪಾ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದುಕೊಂಡಂತೆ ಜೀವನದಲ್ಲಿ ಗೆಲ್ಲಲು ಆಗಲಿಲ್ಲ ಎಂದು ಡೆತ್ನೋಟ್ ಬರೆದಿಟ್ಟು ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.
ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿ ಏಕಲವ್ಯ ಪ್ರಶಸ್ತಿ ವಿಜೇತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಏಕಲವ್ಯ ಪ್ರಶಸ್ತಿ ವಿಜೇತೆ ಶಿಲ್ಪಾ(41) ಡೆತ್ನೋಟ್ ಬರೆದಿಟ್ಟು ಮನೆಯ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಶಿಲ್ಪಾ ಹಾಗೂ ಬಾಲರಾಜ್ ದಂಪತಿಗೆ ಮದುವೆಯಾಗಿ ವರ್ಷಗಳೇ ಕಳೆದರೂ ಮಕ್ಕಳಾಗಿರಲಿಲ್ಲ. ಈ ಸಮಸ್ಯೆ ಶಿಲ್ಪಾರನ್ನು ಕುಗ್ಗಿಸಿತ್ತು. ಇದರ ಜೊತೆಗೆ 4 ತಿಂಗಳ ಹಿಂದೆ ತಾಯಿಯ ಸಾವು ಮತ್ತಷ್ಟು ಖಿನ್ನತೆಗೆ ಒಳಗಾಗುವಂತೆ ಮಾಡಿತ್ತು. ಹಾಗೂ ಶಾಲೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಶಿಲ್ಪಾ ಕೊರೊನಾ ಲಾಕ್ಡೌನ್ನಿಂದಾಗಿ ಕೆಲಸವನ್ನೂ ಕಳೆದುಕೊಂಡಿದ್ದರು. ಇದೆಲ್ಲಾ ಕಾರಣದಿಂದ ಮಾನಸಿಕವಾಗಿ ನೊಂದು ಹೋಗಿದ್ದ ಶಿಲ್ಪಾ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದುಕೊಂಡಂತೆ ಜೀವನದಲ್ಲಿ ಗೆಲ್ಲಲು ಆಗಲಿಲ್ಲ ಎಂದು ಡೆತ್ನೋಟ್ ಬರೆದಿಟ್ಟು ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.
ಇದನ್ನೂ ಓದಿ: ಲಾಡ್ಜ್ನಲ್ಲಿ ವಿಷಸೇವಿಸಿ ತಾಯಿ ಆತ್ಮಹತ್ಯೆ, ಮಗನ ಸ್ಥಿತಿ ಗಂಭೀರ
(Ekalavya Award Winner Woman Commits To Suicide in Bengaluru)
Published On - 12:35 pm, Sun, 11 April 21