AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದಲ್ಲಿ ಬ್ಲ್ಯಾಕ್ ಫಂಗಸ್​ಗೆ ಮೊದಲ ಬಲಿ

60 ವರ್ಷದ ಕೊರೊನಾ ಸೋಂಕಿತ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮೇ 28 ರಂದು ಕಾರವಾರದ ಕ್ರಿಮ್ಸ್ ಆಸ್ಪತ್ರೆಯಿಂದ ಮಂಗಳೂರಿಗೆ ಹೋಗಿದ್ದರು. ಕಿಡ್ನಿ, ಡಯಾಬಿಟಿಸ್, ನ್ಯುಮೋನಿಯಾ, ಹೈಪರ್ ಟೆನ್ಶನ್ ಖಾಯಿಲೆಯಿಂದ ಬಳಲುತ್ತಿದ್ದ ಸೋಂಕಿತನಿಗೆ ಭಾನುವಾರ ಬ್ಲ್ಯಾಕ್ ಫಂಗಸ್ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

ಉತ್ತರ ಕನ್ನಡದಲ್ಲಿ ಬ್ಲ್ಯಾಕ್ ಫಂಗಸ್​ಗೆ ಮೊದಲ ಬಲಿ
ಪ್ರಾತಿನಿಧಿಕ ಚಿತ್ರ
TV9 Web
| Updated By: sandhya thejappa|

Updated on:Jun 02, 2021 | 12:09 PM

Share

ಕಾರವಾರ: ರಾಜ್ಯದಲ್ಲಿ ಕೊರೊನಾ ಬೆನ್ನಲ್ಲೆ ಬ್ಲ್ಯಾಕ್ ಫಂಗಸ್ ಆತಂಕ ಹೆಚ್ಚಾಗಿದೆ. ಬ್ಲ್ಯಾಕ್ ಫಂಗಸ್​ನಿಂದ ಸಾವಿನ ಸಂಖ್ಯೆ ಕೂಡಾ ಏರಿಕೆಯಾಗುತ್ತಿದ್ದು, ಭೀತಿಗೆ ಕಾರಣವಾಗಿದೆ. ಮಂಡ್ಯದಲ್ಲಿ ಇಂದು ಮೊದಲ ಬಾರಿಗೆ ಬ್ಲ್ಯಾಕ್ ಫಂಗಸ್​ನಿಂದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಜೊತೆಗೆ ಉತ್ತರ ಕನ್ನಡ ಜಿಲ್ಲೆಯಲ್ಲೂ ವೃದ್ಧ ಬ್ಲ್ಯಾಕ್ ಫಂಗಸ್​ನಿಂದ ಸಾವನ್ನಪ್ಪಿದ್ದಾರೆ. ಕಾರವಾರ ತಾಲೂಕಿನ ಸದಾಶಿವಗಡ ಮೂಲದ ವೃದ್ಧ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸದಾಶಿವಗಡ ಮೂಲದ 60 ವರ್ಷದ ಕೊರೊನಾ ಸೋಂಕಿತ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮೇ 28 ರಂದು ಕಾರವಾರದ ಕ್ರಿಮ್ಸ್ ಆಸ್ಪತ್ರೆಯಿಂದ ಮಂಗಳೂರಿಗೆ ಹೋಗಿದ್ದರು. ಕಿಡ್ನಿ, ಡಯಾಬಿಟಿಸ್, ನ್ಯುಮೋನಿಯಾ, ಹೈಪರ್ ಟೆನ್ಶನ್ ಖಾಯಿಲೆಯಿಂದ ಬಳಲುತ್ತಿದ್ದ ಸೋಂಕಿತನಿಗೆ ಭಾನುವಾರ ಬ್ಲ್ಯಾಕ್ ಫಂಗಸ್ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಸೋಮವಾರ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿ ಗ್ರಾಮದ ವೃದ್ಧ ಬ್ಲ್ಯಾಕ್ ಫಂಗಸ್​ಗೆ ಮೊದಲು ಬಲಿಯಾಗಿದ್ದಾರೆ. ತಮ್ಮಯ್ಯ(68) ಮೃತ ದುರ್ದೈವಿ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ತಮ್ಮಯ್ಯ ಚಿಕಿತ್ಸೆ ಪಡೆಯುತ್ತಿದ್ದರು. 1 ತಿಂಗಳ ಹಿಂದೆ ಕೊರೊನಾದಿಂದ ಚೇತರಿಸಿಕೊಳ್ಳುತ್ತಿದ್ದರು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಆ ಬಳಿಕ ಬ್ಲ್ಯಾಕ್ ಫಂಗಸ್ ಪತ್ತೆಯಾಗಿ ಮಂಗಳೂರಿಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಬ್ಲ್ಯಾಕ್ ಫಂಗಸ್​ಗೆ ಮೂವರು ಬಲಿ ಬಳ್ಳಾರಿಯಲ್ಲಿ ನಿನ್ನೆ ಮೂವರು ಬ್ಲ್ಯಾಕ್ ಫಂಗಸ್​ಗೆ ತುತ್ತಾಗಿದ್ದು, ಬಲಿಯಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 62 ಜನರಿಗೆ ಬ್ಲ್ಯಾಕ್ ಫಂಗಸ್ ದೃಢವಾಗಿದೆ. ಸಿರುಗುಪ್ಪ ತಾಲೂಕಿನ 14 ವರ್ಷದ ಬಾಲಕಿಗೂ ಬ್ಲ್ಯಾಕ್ ಫಂಗಸ್ ಇರುವುದು ತಿಳಿದುಬಂದಿದೆ. ಕೊರೊನಾ ಪಾಸಿಟಿವ್ ಆಗಿ ಬಳ್ಳಾರಿ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಇದೀಗ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾಳೆ.

17 ಜನರಿಗೆ ಬ್ಲ್ಯಾಕ್ ಫಂಗಸ್ ಶಂಕೆ ಗದಗ ಜಿಲ್ಲೆಯಲ್ಲಿ 12 ಜನರಿಗೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಇನ್ನೂ 17 ಜನರಿಗೆ ಬ್ಲ್ಯಾಕ್ ಫಂಗಸ್ ಇರುವ ಶಂಕೆ ವ್ಯಕ್ತವಾಗಿದೆ. ವೈದ್ಯರು 17 ರೋಗಿಗಳ ವರದಿಗಾಗಿ ಕಾಯುತ್ತಿದ್ದಾರೆ.

ಇದನ್ನೂ ಓದಿ

ಕೊವಿಡ್ ಟೆಸ್ಟ್ ಮಾಡಲು ಬಂದ ಸಿಬ್ಬಂದಿಗೆ ಮೈಸೂರು ಮಹಿಳೆ ಆವಾಜ್

Covid 19: ಮೇ ತಿಂಗಳಲ್ಲಿ ದೆಹಲಿ, ಪಂಜಾಬ್, ಉತ್ತರಾಖಂಡದಲ್ಲಿ ಅತೀ ಹೆಚ್ಚು ಸಾವು

(Elderly man first died due to black fungus in Uttara Kannada)

Published On - 12:06 pm, Wed, 2 June 21