AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಶಾಸಕರ ಅವಧಿ ಅಂತ್ಯ: ಕರ್ನಾಟಕ ವಿಧಾನ ಪರಿಷತ್​​ ನಾಲ್ಕು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ 28 ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಹಾಗಾದ್ರೆ, ಕರ್ನಾಟಕದ ನಾಲ್ಕು ಪರಿಷತ್​​ಗೆ ಚುನಾವಣೆ ಯಾವಾಗ ಎನ್ನುವ ಡಿಟೇಲ್ಸ್ ಇಲ್ಲಿದೆ.

4 ಶಾಸಕರ ಅವಧಿ ಅಂತ್ಯ: ಕರ್ನಾಟಕ ವಿಧಾನ ಪರಿಷತ್​​ ನಾಲ್ಕು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ
Mlc Poll
ರಮೇಶ್ ಬಿ. ಜವಳಗೇರಾ
|

Updated on:Sep 22, 2026 | 4:18 PM

Share

ಬೆಂಗಳೂರು, (ಸೆಪ್ಟೆಂಬರ್ 22): ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಚುನಾವಣಾ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಕರ್ನಾಟಕದಲ್ಲಿ ಖಾಲಿಯಿರುವ 4 ವಿಧಾನ ಪರಿಷತ್ ಸ್ಥಾನಗಳೂ ಸೇರಿದಂತೆ ವಿವಿಧ ರಾಜ್ಯಗಳ ಒಟ್ಟು 28 ಸ್ಥಾನಗಳಿಗೆ ಚುನಾವಣಾ ಆಯೋಗವು ಚುನಾವಣಾ ದಿನಾಂಕ ಪ್ರಕಟಿಸಿದೆ.  ಕರ್ನಾಟಕದಲ್ಲಿ ನಡೆಯಲಿರುವ ಚುನಾವಣೆ ಪದವೀಧರರ 2 ಹಾಗೂ ಶಿಕ್ಷಕರ 2 ಕ್ಷೇತ್ರಗಳಿಗೆ ಸೀಮಿತವಾಗಿದೆ. ಉತ್ತರ ಪ್ರದೇಶದಲ್ಲಿ 11, ಬಿಹಾರದಲ್ಲಿ 8, ಮಹಾರಾಷ್ಟ್ರದಲ್ಲಿ 5 ಸ್ಥಾನಗಳು ಸೇರಿವೆ. ಈ ಎಲ್ಲ ಕ್ಷೇತ್ರಗಳಿಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿದೆ.

ಚುನಾವಣೆಯ ಮಾಹಿತಿ

ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಸೆ.29ರಂದು ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 6 ಕೊನೆಯ ದಿನವಾಗಿದ್ದು, ಅ.7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಅ.9ರವರೆಗೆ ನಾಮಪತ್ರ ಹಿಂಪಡೆಯಬಹುದು. ಬಳಿಕ ಅ.23ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅ.27ರಂದು ಮತ ಎಣಿಕೆ ನಡೆಯಲಿದೆ. ಸಂಬಂಧಿತ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ಮಾದರಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬಂದಿದೆ.

ಇದನ್ನೂ ಓದಿ: ಹೊಸ ಯೋಜನೆಗಳ ಘೋಷಣೆ: ಸಿಎಂ ಡಿ.ಕೆ.ಶಿವಕುಮಾರ್‌ಗೆ ಹಣಕಾಸು ಇಲಾಖೆಯಿಂದ ಮಹತ್ವದ ಎಚ್ಚರಿಕೆ

ನಾಲ್ವರ ಅವಧಿ ನವೆಂಬರ್ 11ಕ್ಕೆ ಅಂತ್ಯ

ಕರ್ನಾಟಕದ ಹಾಲಿ ನಾಲ್ವರು ವಿಧಾನ ಪರಿಷತ್ ಸದಸ್ಯರ ಅಧಿಕಾರಾವಧಿಯು 2026ರ ನವೆಂಬರ್ 11ರಂದು ಮುಕ್ತಾಯಗೊಳ್ಳಲಿದ್ದು, ತೆರವಾಗಲಿರುವ ಈ ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣೆ ನಡೆಸಲಾಗುತ್ತಿದೆ. ಈ ಕ್ಷೇತ್ರಗಳಲ್ಲಿ ಇಂದಿನಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.

ನಿವೃತ್ತಿಯಾಗುತ್ತಿರುವ ಸದಸ್ಯರು

  • ಚಿದಾನಂದ ಎಂ. ಗೌಡ – ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರ
  • ಎಸ್.ವಿ. ಸಂಕನೂರ – ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರ
  • ಶಶೀಲ್ ಜಿ. ನಮೋಶಿ – ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ
  • ಪುಟ್ಟಣ್ಣ – ಬೆಂಗಳೂರು ಶಿಕ್ಷಕರ ಕ್ಷೇತ್ರ.

ಈ ನಾಲ್ಕು ಕ್ಷೇತ್ರಗಳಿಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿದ್ದು, ಅ.2ರಂದು ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Tue, 22 September 26

Follow Us