
ಬೆಂಗಳೂರು, (ಸೆಪ್ಟೆಂಬರ್ 22): ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಚುನಾವಣಾ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಕರ್ನಾಟಕದಲ್ಲಿ ಖಾಲಿಯಿರುವ 4 ವಿಧಾನ ಪರಿಷತ್ ಸ್ಥಾನಗಳೂ ಸೇರಿದಂತೆ ವಿವಿಧ ರಾಜ್ಯಗಳ ಒಟ್ಟು 28 ಸ್ಥಾನಗಳಿಗೆ ಚುನಾವಣಾ ಆಯೋಗವು ಚುನಾವಣಾ ದಿನಾಂಕ ಪ್ರಕಟಿಸಿದೆ. ಕರ್ನಾಟಕದಲ್ಲಿ ನಡೆಯಲಿರುವ ಚುನಾವಣೆ ಪದವೀಧರರ 2 ಹಾಗೂ ಶಿಕ್ಷಕರ 2 ಕ್ಷೇತ್ರಗಳಿಗೆ ಸೀಮಿತವಾಗಿದೆ. ಉತ್ತರ ಪ್ರದೇಶದಲ್ಲಿ 11, ಬಿಹಾರದಲ್ಲಿ 8, ಮಹಾರಾಷ್ಟ್ರದಲ್ಲಿ 5 ಸ್ಥಾನಗಳು ಸೇರಿವೆ. ಈ ಎಲ್ಲ ಕ್ಷೇತ್ರಗಳಿಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿದೆ.
ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಸೆ.29ರಂದು ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 6 ಕೊನೆಯ ದಿನವಾಗಿದ್ದು, ಅ.7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಅ.9ರವರೆಗೆ ನಾಮಪತ್ರ ಹಿಂಪಡೆಯಬಹುದು. ಬಳಿಕ ಅ.23ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅ.27ರಂದು ಮತ ಎಣಿಕೆ ನಡೆಯಲಿದೆ. ಸಂಬಂಧಿತ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ಮಾದರಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬಂದಿದೆ.
ಕರ್ನಾಟಕದ ಹಾಲಿ ನಾಲ್ವರು ವಿಧಾನ ಪರಿಷತ್ ಸದಸ್ಯರ ಅಧಿಕಾರಾವಧಿಯು 2026ರ ನವೆಂಬರ್ 11ರಂದು ಮುಕ್ತಾಯಗೊಳ್ಳಲಿದ್ದು, ತೆರವಾಗಲಿರುವ ಈ ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣೆ ನಡೆಸಲಾಗುತ್ತಿದೆ. ಈ ಕ್ಷೇತ್ರಗಳಲ್ಲಿ ಇಂದಿನಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
ಈ ನಾಲ್ಕು ಕ್ಷೇತ್ರಗಳಿಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿದ್ದು, ಅ.2ರಂದು ಫಲಿತಾಂಶ ಪ್ರಕಟವಾಗಲಿದೆ.
Published On - 4:10 pm, Tue, 22 September 26