ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ

| Updated By: ರಮೇಶ್ ಬಿ. ಜವಳಗೇರಾ

Updated on: Oct 15, 2024 | 5:13 PM

ಎರಡು ರಾಜ್ಯಗಳಾದ ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರ ಜೊತೆಗೆ ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕವನ್ನೂ ಸಹ ಪ್ರಕಟಿಸಿದೆ. ಹಾಗಾದ್ರೆ, ನಾಮಪತ್ರ ಸಲ್ಲಿಕೆ ಯಾವಾಗಿನಿಂದ? ಮತದಾನ ಯಾವಾಗ? ಮತ ಎಣಿಕೆ ಯಾವಾಗ ಎನ್ನುವ ವಿವರ ಇಲ್ಲಿದೆ.

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ
ಪ್ರಾತಿನಿಧಿಕ ಚಿತ್ರ
Follow us on

ನವದೆಹಲಿ, (ಆಗಸ್ಟ್ 16): ಕರ್ನಾಟಕ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಇಂದು (ಅಕ್ಟೋಬರ್ 15) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು. ಇದೇ ವೇಳೆ ಕರ್ನಾಟಕದ ಶಿಗ್ಗಾಂವಿ(ಹಾವೇರಿ), ಚನ್ನಪಟ್ಟಣ)ರಾಮನಗರ) ಮತ್ತು ಸಂಡೂರು(ಬಳ್ಳಾರಿ ಜಿಲ್ಲೆ) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ್ದು, ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇನ್ನು ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.

ಸಂಸದರಾಗಿ ಆಯ್ಕೆಯಾಗಿರುವ ಹೆಚ್​ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಚನ್ನಪಟ್ಟಣ ಕ್ಷೇತ್ರ ತೆರವಾಗಿದ್ದರೆ, ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾಂವಿ (ಹಾವೇರಿ ಜಿಲ್ಲೆ) ವಿಧಾನಸಭಾ ಕ್ಷೇತ್ರ ತೆರವಾಗಿದೆ. ಇನ್ನು ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೆ ಇದೀಗ ಉಪಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ.

ಪ್ರಮುಖ ದಿನಾಂಕಗಳು

  • ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟ
  • ಅಕ್ಟೋಬರ್ 25ರಂದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಕೊನೆ ದಿನ
  • ಅಕ್ಟೋಬರ್​ 28ರಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ
  • ಅಕ್ಟೋಬರ್​ ಅ.30ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ

ಚನ್ನಪಟ್ಟಣ ಕ್ಷೇತ್ರದ ವಿವರ

ಚನ್ನಪಟ್ಟಣ ಒಟ್ಟು ಮತದಾರರ ಸಂಖ್ಯೆ 2,31,263 ಇದ್ದು, ಈ ಪೈಕಿ 1,11,577 ಪುರುಷ ಮತದಾರರು ಇದ್ದರೆ, 1,19,678 ಮಹಿಳಾ ಮತದಾರರು ಇದ್ದಾರೆ. 8 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಇದ್ದಾರೆ. 2023 ರ‌ ಚುನಾವಣೆಯಲ್ಲಿ ಮಾಜಿ ಸಿ ಎಂ ಎಚ್ ಡಿ ಕುಮಾರಸ್ವಾಮಿ ಗೆಲವು ಸಾಧಿಸಿದ್ದರು. ಆಗ ಕುಮಾರಸ್ವಾಮಿ 96592 ಮತಗಳನ್ನು ಪಡೆದುಕೊಂಡಿದ್ದರು. ಇನ್ನು ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಸಿಪಿ ಯೋಗೇಶ್ವರ್ ವಿರುದ್ಧ ಕುಮಾರಸ್ವಾಮಿ 15915‌ ಮತಗಳ ಅಂತರದಿಂದ ಗೆದ್ದಿದರು.

ಇನ್ನು ಬಿಜಿಪಿ ಅಭ್ಯರ್ಥಿ ಸಿ ಪಿ ಯೋಗೇಶ್ವರ್ 80677 ಮತ‌ ಪಡೆದಿದ್ದರೆ, ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿದ್ದ ಗಂಗಾಧರ್ ಎಸ್ 15374 ಮತ ಪಡೆದಿದ್ದರು.

ಸಂಡೂರು ವಿಧಾನಸಭಾ ಕ್ಷೇತ್ರದ ವಿವರ

ಸಂಡೂರು ವಿಧಾನಸಭಾ ಕ್ಷೇತ್ರ ಎಸ್ಟಿ ಮೀಸಲು ಕ್ಷೇತ್ರವಾಗಿದ್ದು, 2023 ಚುನಾವಣೆಯಲ್ಲಿ ಕಾಂಗ್ರೆಸ್​ನ ಈ ತುಕರಾಂ ಗೆಲುವು ಸಾಧಿಸಿದ್ದರು. ಇನ್ನು ಈ ಕ್ಷೇತ್ರದಲ್ಲಿ ಒಟ್ಟು 221753 ಮತದಾರರು ಇದ್ದು, ಈ ಪೈಕಿ 111109 ಪುರುಷರು, 110618 ಮಹಿಳಾ ಮತದಾರರು ಇದ್ದಾರೆ. ಇನ್ನು ಇತರರು 32.

ಇನ್ನು ಜಾತಿವಾರು ಮತದಾರರ ಲೆಕ್ಕಾಚಾರ ನೋಡುವುದಾರೆ, ಎಸ್​.ಟಿ :  65,000, ಲಿಂಗಾಯಿತರು  : 35,000, ಕುರುಬರು : 30,000, ಮುಸ್ಲಿಂ : 10,000 , ಎಸ್.ಸಿ ( ಎಲ್ಲ ವರ್ಗ ಸೇರಿ)  40,000, ಇತರೆ : 40,000 ( ಬ್ರಾಹ್ಮಣ, ಶೆಟ್ಟಿ, ಕಮ್ಮ, ಬಲಿಜ ಸಣ್ಣಪುಟ್ಟ ಜಾತಿಗಳು )

ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಪರಿಚಯ

  • ಒಟ್ಟು ಮತದಾರರ ಸಂಖ್ಯೆ- 2,26,079
  • ಪುರುಷರು- 1,16,588
  • ಮಹಿಳೆಯರು- 1,09480
  • ಇತರೇ- 11

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಜಾತಿ ಲೆಕ್ಕಾಚಾರ

  • ಲಿಂಗಾಯತರು- 80000
  • ಮುಸ್ಲಿಂ – 55 000
  • ಕುರುಬ – 25000
  • ಎಸ್ ಸಿ- 30, 000
  • ಎಸ್ಟಿ-22,000
  • ಬ್ರಾಹ್ಮಣ ,ದೈವಜ್ಞ ಸಮಾಜ- 3000
  • ಇತರೆ-12,000 ಮತಗಳು

Published On - 4:08 pm, Tue, 15 October 24