AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮೂರನೇ ಅಲೆಯ ಮುನ್ನವೇ ನಡೆಯಲಿದೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ

ಚುನಾವಣೆ ಆಯೋಗವು ಜೂ. 14ರಂದು ಲಿಖಿತ ನಿರ್ದೇಶನ ನೀಡಿದ್ದು, ಮಂಗಳವಾರ ಬೆಳಕಿಗೆ ಬಂದಿದೆ. ಮತದಾರ ಪರಿಷ್ಕರಣೆ ಪಟ್ಟಿ ಅಂತಿಮಗೊಳ್ಳುತ್ತಿದ್ದಂತೆ ಇಲ್ಲವೇ ಏತನ್ಮಧ್ಯೆಯೇ ಚುನಾವಣೆ ದಿನಾಂಕ ಘೋಷಿಸುವ ಸಾಧ್ಯತೆಗಳು ದಟ್ಟವಾಗಿವೆ.

ಕೊರೊನಾ ಮೂರನೇ ಅಲೆಯ ಮುನ್ನವೇ ನಡೆಯಲಿದೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ
TV9 Web
| Updated By: preethi shettigar|

Updated on:Jun 19, 2021 | 1:59 PM

Share

ಧಾರವಾಡ : ಬಹು ನಿರೀಕ್ಷಿತ ಮಹಾನಗರ ಪಾಲಿಕೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಮುಂಬರುವ ಎರಡು ತಿಂಗಳಲ್ಲಿ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ.ಈ ದಿಸೆಯಲ್ಲಿ ರಾಜ್ಯ ಚುನಾವಣೆ ಆಯೋಗ ಹುಬ್ಬಳ್ಳಿ-ಧಾರವಾಡ ಪಾಲಿಕೆ ಜತೆಗೆ ದೂರದ ಕಲಬುರಗಿ ಪಾಲಿಕೆಗೂ ಚುನಾವಣೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್​ಗಳ ಮತದಾರರ ಪರಿಷ್ಕೃತ ಪಟ್ಟಿ ತಯಾರಿಸಿ, ಜುಲೈ 9ರ ಒಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರಿಗೆ ಸ್ಪಷ್ಟ ನಿರ್ದೇಶನ ನೀಡಿದೆ.

ಚುನಾವಣೆ ಆಯೋಗವು ಜೂ. 14ರಂದು ಲಿಖಿತ ನಿರ್ದೇಶನ ನೀಡಿದ್ದು, ಮಂಗಳವಾರ ಬೆಳಕಿಗೆ ಬಂದಿದೆ. ಮತದಾರ ಪರಿಷ್ಕರಣೆ ಪಟ್ಟಿ ಅಂತಿಮಗೊಳ್ಳುತ್ತಿದ್ದಂತೆ ಇಲ್ಲವೇ ಏತನ್ಮಧ್ಯೆಯೇ ಚುನಾವಣೆ ದಿನಾಂಕ ಘೋಷಿಸುವ ಸಾಧ್ಯತೆಗಳು ದಟ್ಟವಾಗಿವೆ. ಕೊರೋನಾ ಎರಡನೇ ಅಲೆ ತಕ್ಕ ಮಟ್ಟಿಗೆ ತಹಬದಿಗೆ ಬಂದಿರುವ ಹಿನ್ನೆಲೆಯಲ್ಲಿ ಹಾಗೂ ಮೂರನೇ ಅಲೆ ಏಳುವ ಮುನ್ನವೇ ಎರಡೂ ಪಾಲಿಕೆಗಳಿಗೆ ಚುನಾವಣೆ ನಡೆಸುವುದು ಸೂಕ್ತ ಎಂಬ ನಿರ್ಧಾರಕ್ಕೆ ಚುನಾವಣೆ ಆಯೋಗ ಬಂದಿದೆ.

ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಆಗಸ್ಟ್ ತಿಂಗಳಲ್ಲಿ ಚುನಾವಣೆ ಪ್ರಕ್ರಿಯೆ ಶುರುವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಪಾಲಿಕೆಗೆ ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರುವುದರಲ್ಲಿ ಅನುಮಾನವಿಲ್ಲ. ವಾರ್ಡ್​ಗಳ ಮರುವಿಂಗಡಣೆ ಹಾಗೂ ವಾರ್ಡ್ ಮೀಸಲಾತಿ ಪ್ರಕ್ರಿಯೆಯನ್ನು ನಗರಾಭಿವೃದ್ಧಿ ಇಲಾಖೆ ಇತ್ತೀಚೆಗಷ್ಟೇ ಪೂರ್ಣಗೊಳಿಸಿದೆ. ವಾರ್ಡ್​ಗಳ ವಿಂಗಡಣೆ ಅಧಿಸೂಚನೆಯಂತೆ ಮತದಾರರನ್ನು ಗುರುತಿಸಲು ಜೂನ್ 17ರಿಂದ 19 ರವರಗೆ ಅವಕಾಶ ನೀಡಲಾಗಿದೆ. ಜೂನ್ 28ರಂದು ಮತದಾರರ ಕರಡುಪಟ್ಟಿ ಪ್ರಕಟಿಸಿ, ಆಕ್ಷೇಪಣೆ ಆಹ್ವಾನಿಸಬೇಕು. ಜುಲೈ 1ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ತಿದ್ದುಪಡಿ, ಪುನರ್ ಪರಿಶೀಲನೆ ಸೇರಿ ಎಲ್ಲ ಪ್ರಕ್ರಿಯೆ ಮುಗಿಸಿ ಜುಲೈ 9ರಂದು ಅಂತಿಮ ಪಟ್ಟಿ ಸಲ್ಲಿಸುವಂತೆ ರಾಜ್ಯ ಚುನಾವಣೆ ಆಯೋಗ ನಿರ್ದೇಶನ ನೀಡಿದೆ.

ಇದನ್ನೂ ಓದಿ:

Mysuru Mayor Election: ಇಂದು ಮೈಸೂರು ಮಹಾನಗರ ಪಾಲಿಕೆ ಮೇಯರ್​ ಚುನಾವಣೆ ನಡೆಯೋದಿಲ್ಲ; ಹೈಕೋರ್ಟ್​ನಿಂದ ತಡೆ

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ ಸ್ಮಾರ್ಟ್ ಯೋಜನೆ; ನಗರದಲ್ಲಿ ಹೆಚ್​ಡಿಪಿಇ ಮೂತ್ರಿ ಅಳವಡಿಸಲು ನಿರ್ಧಾರ

Published On - 1:56 pm, Sat, 19 June 21

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!