ಧಾರವಾಡ : ಬಹು ನಿರೀಕ್ಷಿತ ಮಹಾನಗರ ಪಾಲಿಕೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಮುಂಬರುವ ಎರಡು ತಿಂಗಳಲ್ಲಿ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ.ಈ ದಿಸೆಯಲ್ಲಿ ರಾಜ್ಯ ಚುನಾವಣೆ ಆಯೋಗ ಹುಬ್ಬಳ್ಳಿ-ಧಾರವಾಡ ಪಾಲಿಕೆ ಜತೆಗೆ ದೂರದ ಕಲಬುರಗಿ ಪಾಲಿಕೆಗೂ ಚುನಾವಣೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ಗಳ ಮತದಾರರ ಪರಿಷ್ಕೃತ ಪಟ್ಟಿ ತಯಾರಿಸಿ, ಜುಲೈ 9ರ ಒಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರಿಗೆ ಸ್ಪಷ್ಟ ನಿರ್ದೇಶನ ನೀಡಿದೆ.
ಚುನಾವಣೆ ಆಯೋಗವು ಜೂ. 14ರಂದು ಲಿಖಿತ ನಿರ್ದೇಶನ ನೀಡಿದ್ದು, ಮಂಗಳವಾರ ಬೆಳಕಿಗೆ ಬಂದಿದೆ. ಮತದಾರ ಪರಿಷ್ಕರಣೆ ಪಟ್ಟಿ ಅಂತಿಮಗೊಳ್ಳುತ್ತಿದ್ದಂತೆ ಇಲ್ಲವೇ ಏತನ್ಮಧ್ಯೆಯೇ ಚುನಾವಣೆ ದಿನಾಂಕ ಘೋಷಿಸುವ ಸಾಧ್ಯತೆಗಳು ದಟ್ಟವಾಗಿವೆ. ಕೊರೋನಾ ಎರಡನೇ ಅಲೆ ತಕ್ಕ ಮಟ್ಟಿಗೆ ತಹಬದಿಗೆ ಬಂದಿರುವ ಹಿನ್ನೆಲೆಯಲ್ಲಿ ಹಾಗೂ ಮೂರನೇ ಅಲೆ ಏಳುವ ಮುನ್ನವೇ ಎರಡೂ ಪಾಲಿಕೆಗಳಿಗೆ ಚುನಾವಣೆ ನಡೆಸುವುದು ಸೂಕ್ತ ಎಂಬ ನಿರ್ಧಾರಕ್ಕೆ ಚುನಾವಣೆ ಆಯೋಗ ಬಂದಿದೆ.
ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಆಗಸ್ಟ್ ತಿಂಗಳಲ್ಲಿ ಚುನಾವಣೆ ಪ್ರಕ್ರಿಯೆ ಶುರುವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಪಾಲಿಕೆಗೆ ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರುವುದರಲ್ಲಿ ಅನುಮಾನವಿಲ್ಲ. ವಾರ್ಡ್ಗಳ ಮರುವಿಂಗಡಣೆ ಹಾಗೂ ವಾರ್ಡ್ ಮೀಸಲಾತಿ ಪ್ರಕ್ರಿಯೆಯನ್ನು ನಗರಾಭಿವೃದ್ಧಿ ಇಲಾಖೆ ಇತ್ತೀಚೆಗಷ್ಟೇ ಪೂರ್ಣಗೊಳಿಸಿದೆ.
ವಾರ್ಡ್ಗಳ ವಿಂಗಡಣೆ ಅಧಿಸೂಚನೆಯಂತೆ ಮತದಾರರನ್ನು ಗುರುತಿಸಲು ಜೂನ್ 17ರಿಂದ 19 ರವರಗೆ ಅವಕಾಶ ನೀಡಲಾಗಿದೆ. ಜೂನ್ 28ರಂದು ಮತದಾರರ ಕರಡುಪಟ್ಟಿ ಪ್ರಕಟಿಸಿ, ಆಕ್ಷೇಪಣೆ ಆಹ್ವಾನಿಸಬೇಕು. ಜುಲೈ 1ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ತಿದ್ದುಪಡಿ, ಪುನರ್ ಪರಿಶೀಲನೆ ಸೇರಿ ಎಲ್ಲ ಪ್ರಕ್ರಿಯೆ ಮುಗಿಸಿ ಜುಲೈ 9ರಂದು ಅಂತಿಮ ಪಟ್ಟಿ ಸಲ್ಲಿಸುವಂತೆ ರಾಜ್ಯ ಚುನಾವಣೆ ಆಯೋಗ ನಿರ್ದೇಶನ ನೀಡಿದೆ.
ಇದನ್ನೂ ಓದಿ:
Mysuru Mayor Election: ಇಂದು ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ನಡೆಯೋದಿಲ್ಲ; ಹೈಕೋರ್ಟ್ನಿಂದ ತಡೆ
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ ಸ್ಮಾರ್ಟ್ ಯೋಜನೆ; ನಗರದಲ್ಲಿ ಹೆಚ್ಡಿಪಿಇ ಮೂತ್ರಿ ಅಳವಡಿಸಲು ನಿರ್ಧಾರ
Published On - 1:56 pm, Sat, 19 June 21