ಉಪಚುನಾವಣೆಯಲ್ಲಿ ಸ್ಪರ್ಧೆ: ಅನರ್ಹರಿಗೆ ಆಯೋಗದಿಂದ ಗ್ರೀನ್ ಸಿಗ್ನಲ್?
ದೆಹಲಿ: ರಾಜೀನಾಮೆ ನೀಡಿದ ಶಾಸಕರ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಅನರ್ಹ ಶಾಸಕರು ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಸುಪ್ರೀಂಕೋರ್ಟ್ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇತ್ತು. ಈ ವೇಳೆ ಉಪಚುನಾವಣೆಗೆ ತಡೆ ನೀಡುವುದು ಅಥವಾ ಮುಂದೂಡುವುದು ಸಾಧ್ಯವಿಲ್ಲ. ಆದ್ರೆ ಚುನಾವಣೆಗೆ ಅನರ್ಹ ಶಾಸಕರು ಸ್ಪರ್ಧಿಸುವ ಬಗ್ಗೆ ನಮ್ಮದು ತಕರಾರು ಇಲ್ಲ ಎಂದು ಚುನಾವಣಾ ಆಯೋಗದ ಪರ ವಕೀಲ ರಾಕೇಶ್ ದ್ವಿವೇದಿ ಹೇಳಿದರು. ತಕ್ಷಣ ರಾಕೇಶ್ ದ್ವಿವೇದಿ ವಾದಕ್ಕೆ ವಕೀಲ ಕಪಿಲ್ ಸಿಬಲ್ […]
ದೆಹಲಿ: ರಾಜೀನಾಮೆ ನೀಡಿದ ಶಾಸಕರ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಅನರ್ಹ ಶಾಸಕರು ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ ನೀಡಿದೆ.
ಇಂದು ಸುಪ್ರೀಂಕೋರ್ಟ್ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇತ್ತು. ಈ ವೇಳೆ ಉಪಚುನಾವಣೆಗೆ ತಡೆ ನೀಡುವುದು ಅಥವಾ ಮುಂದೂಡುವುದು ಸಾಧ್ಯವಿಲ್ಲ. ಆದ್ರೆ ಚುನಾವಣೆಗೆ ಅನರ್ಹ ಶಾಸಕರು ಸ್ಪರ್ಧಿಸುವ ಬಗ್ಗೆ ನಮ್ಮದು ತಕರಾರು ಇಲ್ಲ ಎಂದು ಚುನಾವಣಾ ಆಯೋಗದ ಪರ ವಕೀಲ ರಾಕೇಶ್ ದ್ವಿವೇದಿ ಹೇಳಿದರು. ತಕ್ಷಣ ರಾಕೇಶ್ ದ್ವಿವೇದಿ ವಾದಕ್ಕೆ ವಕೀಲ ಕಪಿಲ್ ಸಿಬಲ್ ಆಕ್ಷೇಪ ವ್ಯಕ್ತಪಡಿಸಿ, ನಿಮ್ಮ ಅಭಿಪ್ರಾಯ ಇಲ್ಲಿ ಕೇಳಿಲ್ಲ. ನೀವು ಸ್ವಯಂಪ್ರೇರಿತವಾಗಿ ನಿಮ್ಮ ಅಭಿಪ್ರಾಯ ಹೇಳುವಂತಿಲ್ಲ. ಚುನಾವಣಾ ಆಯೋಗ ಒಂದು ಪಕ್ಷ ಅಲ್ಲ ಎಂದು ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ನ ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದೆ.
ಚುನಾವಣಾ ಆಯೋಗ ಮಧ್ಯಪ್ರವೇಶ ಸರಿಯಲ್ಲ: ಅನರ್ಹರ ಸ್ಪರ್ಧೆ ವಿಚಾರದಲ್ಲಿ ಚುನಾವಣಾ ಆಯೋಗ ಮಧ್ಯಪ್ರವೇಶಿಸಿದ್ದು ಸರಿಯಲ್ಲ. ಅನರ್ಹರ ಚುನಾವಣೆ ಸ್ಪರ್ಧೆ ಬಗ್ಗೆ ಆಯೋಗ ಹೇಳಿರಬಹುದು. ಆದ್ರೆ ಈ ಪ್ರಕರಣಕ್ಕೂ, ಚುನಾವಣಾ ಆಯೋಗಕ್ಕೂ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ದಿನೇಶ್ ಗುಂಡೂರಾವ್, ಅನರ್ಹ ಶಾಸಕರು ಪಕ್ಷಾಂತರ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಾರೆ. ನಾವು ಕೇವಿಯೆಟ್ ಸಲ್ಲಿಸಿದ್ದೇವೆ. ಹೀಗಾಗಿ ನಮ್ಮ ವಕೀಲರು ಸ್ಪಷ್ಟ ವಾದ ಮಾಡಲಿದ್ದಾರೆ ಎಂದರು. ಉತ್ತಮ ಉದ್ದೇಶದಿಂದ ರಾಜೀವ್ ಗಾಂಧಿ ಕಾಯ್ದೆ ಜಾರಿಗೆ ತಂದಿದ್ದರು. ಆ ಕಾಯ್ದೆಯನ್ನು ಸ್ಪೀಕರ್ ಎತ್ತಿಹಿಡಿದಿದ್ದಾರೆ. ಅಲ್ದೆ ಜನ ಕೂಡಾ ಸ್ಪೀಕರ್ ಆದೇಶವನ್ನೇ ಬಯಸಿದ್ದರು. ಹೀಗಾಗಿ ಕೋರ್ಟ್ ಸ್ಪೀಕರ್ ಆದೇಶ ಎತ್ತಿಹಿಡಿಯಲಿದೆ ಅಂತ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್-ಜೆಡಿಎಸ್ನ 17 ಶಾಸಕರು ರಾಜೀನಾಮೆ ನೀಡಿದ್ದರು. ಆಗ ಅಂದಿನ ಸ್ಪೀಕರ್ ರಮೇಶ್ ಕುಮಾರ್ ರಾಜೀನಾಮೆ ನೀಡಿದ ಶಾಸಕರನ್ನು ಅನರ್ಹಗೊಳಿಸಿ ತೀರ್ಪು ನೀಡಿದ್ದರು. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಅನರ್ಹತೆ ಆದೇಶ ಪ್ರಶ್ನಿಸಿ 17 ಶಾಸಕರು ಸುಪ್ರೀಂಕೋರ್ಟ್ನ ಮೆಟ್ಟಿಲೇರಿದ್ದರು.
Published On - 2:31 pm, Mon, 23 September 19