ಲೋಕಸಭೆ ಚುನಾವಣೆ: ಆನ್‌ಲೈನ್ ವಹಿವಾಟಿನ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು, ಅಕ್ರಮ ತಡೆಗಟ್ಟಲು ಕ್ರಮ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೂರ್ಹತ ಫಿಕ್ಸ್ ಆಗಿದೆ. ಲೋಕಸಭಾ ಚುನಾವಣೆಗೆ ಡೇಟ್ ಫಿಕ್ಸ್ ಬೆನ್ನಲೆ ಎಲೆಕ್ಷನ್ ಟೈಮ್ನಲ್ಲಿ ಅಭ್ಯರ್ಥಿಗಳು, ಜನರಿಗೆ ಹಣ ಸೇರಿದಂತೆ ಯಾವುದೇ ರೀತಿಯಲ್ಲಾದರೂ ಲಂಚ ನೀಡಿ ಮತಗಳನ್ನು ಸೆಳೆಯಲು ಯತ್ನಿಸುವುದು ಸಾಮಾನ್ಯ. ಅದರಲ್ಲೂ ಅತ್ಯಾಧುನಿಕ ತಂತ್ರಜ್ಞಾನಗಳಾದ ಫೋನ್ ಪೇ, ಗೂಗಲ್ ಪೇ, ಯುಪಿಐ ಮೂಲಕ ಹಣ ರವಾನೆ ಮಾಡೋದು ಸುಲಭ. ಜೊತೆಗೆ ಇದು ಯಾರ ಗಮನಕ್ಕೂ ಬರೋದಿಲ್ಲ ಅಂತಾ ಅಂದ್ಕೊಂಡಿದ್ರೆ ತಪ್ಪು. ಚುನಾವಣಾ ಆಯೋಗ ಅಲರ್ಟ್ ಅಂತಿದ್ದು ಆಪ್‌ಗಳ ಮೂಲಕ ನಡೆಯುವ ಹಣ ವರ್ಗಾವಣೆ ಮೇಲೆ ಹದ್ದಿನ ಕಣ್ಣಿಟ್ಟಿದೆ.

ಲೋಕಸಭೆ ಚುನಾವಣೆ: ಆನ್‌ಲೈನ್ ವಹಿವಾಟಿನ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು, ಅಕ್ರಮ ತಡೆಗಟ್ಟಲು ಕ್ರಮ
ಕೇಂದ್ರ ಚುನಾವಣಾ ಆಯೋಗ
Follow us
Vinay Kashappanavar
| Updated By: ಆಯೇಷಾ ಬಾನು

Updated on: Mar 18, 2024 | 7:33 AM

ಬೆಂಗಳೂರು, ಮಾರ್ಚ್​.18: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ (Lok Sabha Election) ದಿನಾಂಕ ನಿಗದಿ ಆದ ಬೆನ್ನಲೆ ಅಭ್ಯರ್ಥಿಗಳು ಸೈಲೆಂಟ್ ಆಗಿ ಜನರಿಗೆ ಹಣ ಹಂಚಿ ಓಟ್ ಪಕ್ಕಾ ಮಾಡಿಕೊಳ್ಳಲು ಮುಂದಾಗಿರ್ತಾರೆ. ಆದ್ರೆ ಚುನಾವಣೆ ಆಯೋಗ (Election Commission) ಇದರ ಮೇಲೂ ಕಣ್ಣಿಟ್ಟಿದೆ. ಚುನಾವಣೆ ವೇಳೆ ಮತದಾರರಿಗೆ ಆನ್‌ಲೈನ್ ಮೂಲಕ ಹಣ ರವಾನೆ ಮಾಡಿ ಅವರ ಮತಗಳನ್ನು ಸೆಳೆಯುವ ರಾಜಕಾರಣಿಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ. ಫೋನ್ ಪೇ, ಗೂಗಲ್ ಪೇ, ಪೇಟಿಎಂ ಸೇರಿದಂತೆ ಯಾವುದೇ ರೀತಿಯ ಯುಪಿಐ ಆ್ಯಪ್‌ಗಳ ಮೂಲಕ ರವಾನೆಯಾಗುವ ಹಣಕಾಸು ವಹಿವಾಟಿನ ಮೇಲೆ ಚುನಾವಣಾ ಆಯೋಗ ನಿಗಾ ವಹಿಸಿದೆ.

ಮತದಾರರಿಗೆ ಯಾವುದೇ ಸ್ವರೂಪದಲ್ಲಿ ಆಮಿಷ ಒಡ್ಡಿ ಮತಗಳನ್ನು ಸೆಳೆಯಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ. ಇಷ್ಟಾದರೂ ಕೂಡಾ ಕೆಲವು ರಾಜಕಾರಣಿಗಳು ತಂತ್ರಜ್ಞಾನಗಳನ್ನು ಬಳಸಿಕೊಂಡು ಜನರಿಗೆ ಹಣ ರವಾನೆ ಮಾಡುತ್ತಿದ್ದಾರೆ. ಅದರಲ್ಲೂ ತಾಂತ್ರಿಕವಾಗಿ ಸಾಕಷ್ಟು ಜ್ಞಾನ ಸಂಪಾದಿಸಿರುವ ಬೆಂಗಳೂರು ಜನತೆಗೆ ವಿನೂತನ ತಂತ್ರಜ್ಞಾನದ ಮೂಲಕ ಹಣ ರವಾನಿಸೋದು ಕಷ್ಟವೇನಲ್ಲ. ಹೀಗಾಗಿ, ಚುನಾವಣಾ ಆಯೋಗ ಇದಕ್ಕಾಗಿ ಪ್ರತ್ಯೇಕ ತಂಡವನ್ನೇ ರಚನೆ ಮಾಡಿ ನಿಗಾ ವಹಿಸಿದೆ. ಫೋನ್ ಪೇನ್ ಪೇ, ಗೂಗಲ್ ಪೇ ಹಾಗೂ ಪೆಟಿಎಂ ಸಂಸ್ಥೆಗಳ ಜೊತೆ ಸಭೆ ಮಾಡಿ ಚರ್ಚಿಸಿ ಪ್ರತಿ ದಿನದ ವಹಿವಾಟು, ಯಾವುದೇ ವ್ಯಕ್ತಿಯಿಂದ ನಿರ್ದಿಷ್ಟ ಮೊತ್ತದ ಹಣ ಹೆಚ್ಚಿನ ಸಂಖ್ಯೆಯ ಜನರಿಗೆ ರವಾನೆ ಮಾಡುತ್ತಿದ್ರೆ ಅಂಥವರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಲು ಮುಂದಾಗಿದ್ದು ಪ್ರತಿದಿನದ ಯುಪಿಐ ಡಿಜಿಟಲ್ ಹಣದ ವಹಿವಾಟಿನ ಮೇಲೆ ನಿಗಾ ಇಡಲು ಮುಂದಾಗಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ ಶಾಸಕನ ಬೆಂಬಲಿಗರು, ಪುತ್ತೂರಲ್ಲಿ ಕೇಸ್ ದಾಖಲು

ಒಟ್ನಲ್ಲಿ ಮತದಾರರನ್ನು ಓಲೈಕೆ ಮಾಡಲು ಪೋನ್ ಪೇ, ಗೂಗಲ್ ಪೇ, ಯುಪಿಐ ತಂತ್ರಜ್ಞಾನದ ನೆರವಿನೊಂದಿಗೆ ಆದಷ್ಟು ಬೇಗ ಬಹುತೇಕ ಜನರಿಗೆ ಹಣ ಕಳಿಸಬಹುದು, ಯಾರಿಂದಲೂ ಪತ್ತೆ ಮಾಡಲು ಸಾಧ್ಯವಿಲ್ಲ ಎಂಬ ಭ್ರಮೆ ಇದ್ರೆ ಬಿಟ್ಟು ಬಿಡಿ ಆಯೋಗ ಪ್ರತಿಯೊಂದು ಡಿಜಿಟಲ್ ವಹಿವಾಟಿನ ಮೇಲೂ ಹದ್ದಿನ ಕಣ್ಣಿಟ್ಟಿದ್ದು ಅನುಮಾನ ಬಂದ ಅಕೌಂಟ್ ಗಳ ಮೇಲೆ ತನಿಖೆ ನಡೆಸಲು ಕೂಡಾ ಪ್ಲಾನ್ ಮಾಡಿಕೊಂಡಿದೆ. ಇನ್ನು ಜನರು ಯಾವುದೇ ಅಮೀಷಕ್ಕೆ ಬಲಿಯಾಗದೆ ಮತದಾನ ಮಾಡಿ ಪ್ರಜಾಪ್ರಭುತ್ವದ ಗೆಲುವಿಗೆ ಕಾರಣವಾಗಬೇಕು ಎನ್ನುವುದೇ ನಮ್ಮ ಕಳಕಳಿ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್