ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ, ಮತದಾನ, ರಿಸಲ್ಟ್ ಯಾವಾಗ? ಇಲ್ಲಿದೆ ವಿವರ

Karnataka MLC Elections 2026: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್‌ ನ 7 ಸದಸ್ಯ ಸ್ಥಾನಕ್ಕೆ ನಡೆಯುವ ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ವಿಧಾನಪರಿಷತ್‌ ನ ದ್ವೈವಾರ್ಷಿಕ ಚುನಾವಣೆಯ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಕ್ಷಿ ಅವರು ಅಧಿಸೂಚನೆ ಪ್ರಕಟಿಸಿದ್ದು, ಇಂದಿನಿಂದ ಜೂನ್ 8ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ, ಮತದಾನ, ರಿಸಲ್ಟ್ ಯಾವಾಗ? ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ

Updated on: Jun 01, 2026 | 4:26 PM

ಬೆಂಗಳೂರು, (ಜೂನ್ 01): ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ (Karnataka Legislative Council biennial polls) 7 ಸದಸ್ಯ ಸ್ಥಾನಕ್ಕೆ ನಡೆಯುವ ದ್ವಿವಾರ್ಷಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ಇಂದಿನಿಂದ (ಜೂನ್ 01) ಜೂ.8ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಯ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಕ್ಷಿ ಅವರು ಈ ಸಂಬಂಧ ಪ್ರಕಟಣೆ ಹೊರಡಿಸಿದ್ದಾರೆ. ಚುನಾವಣಾ ಸ್ಪರ್ಧೆಯಲ್ಲಿ 7ಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಜೂನ್ 18ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ಮುಖ್ಯಾಂಶಗಳು

  • ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ
  • ವಿಧಾನಸಭೆಯಿಂದ ವಿಧಾನಪರಿಷತ್‌ ನ 7 ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆ
  • ಇಂದಿನಿಂದ ಜೂನ್ 8ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ
  • ಜೂನ್ 18ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ

ಪ್ರಮುಖ ದಿನಾಂಕಗಳು

ಜೂ.9 ರಂದು ನಾಮಪತ್ರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದು ಸಂಜೆ ವೇಳೆಗೆ ಸಿಂಧುವಾದ ನಾಮಪತ್ರಗಳ ಪ್ರಕಟಣೆ ಹೊರಡಿಸಲಾಗುತ್ತದೆ.  ಜೂನ್ 11 ರವರೆಗೆ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಅವಕಾಶ ನೀಡಲಾಗಿದ್ದು, ಚುನಾವಣಾ ಸ್ಪರ್ಧೆಯಲ್ಲಿ 7ಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಜೂನ್ 18ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಇನ್ನು ಅಂದೆ ಸಂಜೆ 5 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಪತ್ನಿಗೆ ರಾಜ್ಯಸಭಾ ಆಫರ್ ನೀಡಿದ್ದ ರಾಹುಲ್ ಗಾಂಧಿ: ಬೇಡವೆಂದಿದ್ದ ಮಾಜಿ ಸಿಎಂ ಇಟ್ಟಿದ್ದು ಬೇರೆಯೇ ಬೇಡಿಕೆ!

7 ಪರಿಷತ್ ಸದಸ್ಯರ ಅವಧಿ ಅಂತ್ಯ

ವಿಧಾನಪರಿಷತ್‌ ಸದಸ್ಯರಾದ ಗೋವಿಂದರಾಜು (ಕಾಂಗ್ರೆಸ್), ನಾಸಿರ್‌ ಅಹಮದ್‌ (ಕಾಂಗ್ರೆಸ್), ಎಂಟಿಬಿ ನಾಗರಾಜ್‌ (ಬಿಜೆಪಿ), ಪ್ರತಾಪ್‌ ಸಿಂಹ ನಾಯಕ್‌ ಕೆ(ಬಿಜೆಪಿ)., ತಿಪ್ಪಣ್ಣಪ್ಪ (ಕಾಂಗ್ರೆಸ್), ಸುನೀಲ್‌ ವಲ್ಯಾಪುರೆ (ಬಿಜೆಪಿ), ಬಿ.ಕೆ.ಹರಿಪ್ರಸಾದ್‌ (ಕಾಂಗ್ರೆಸ್) ಅವರು ಜೂ. 30 ರಂದು ನಿವೃತ್ತಿ ಹೊಂದಲಿದ್ದಾರೆ. ಇವರ ನಿವೃತ್ತಿಯಿಂದ ತೆರವಾಗುವ ಮೇಲನೆ ಸದಸ್ಯ ಸ್ಥಾನಕ್ಕೆ ಭಾರತೀಯ ಚುನಾವಣಾ ಆಯೋಗವು ಪ್ರಕಟಣೆ ಹೊರಡಿಸಿದ್ದು, ಅದರಂತೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Mon, 1 June 26

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us