ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು: ರಾಜ್ಯದ ವಿವಿಧಡೆ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ವಸ್ತುಗಳು ಜಪ್ತಿ

ಬಾಗಲಕೋಟೆ ಜಿಲ್ಲೆಯ ವಿವಿಧೆಡೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.90 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ. ಬಾದಾಮಿ ತಾಲೂಕಿನ ಜಾಲಿಹಾಳ ಚೆಕ್​ಪೋಸ್ಟ್​ ಒಂದರಲ್ಲೇ 2.90 ಲಕ್ಷ ರೂ. ಮತ್ತು ಬೂದನಗುಡ್ಡ ರೋಡ್ ಚೆಕ್​ಪೋಸ್ಟ್​ನಲ್ಲಿ 1 ಲಕ್ಚ ರೂ. ಅನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು: ರಾಜ್ಯದ ವಿವಿಧಡೆ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ವಸ್ತುಗಳು ಜಪ್ತಿ
ಜಪ್ತಿ ಮಾಡಲಾದ ಹಣ, ಸೀರೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Mar 27, 2024 | 10:18 AM

ಲೋಕಸಭೆ ಚುನಾವಣೆಗೆ (Lok Sabha Election) ದಿನಾಂಕ ಘೋಷಣೆಯಾಗುತ್ತಿದ್ದಂತೆ ದೇಶದಲ್ಲಿ ನೀತಿ ಸಂಹಿತೆ (Model Code of Conduct) ಜಾರಿಯಾಗಿದೆ. ಮತಕ್ಕಾಗಿ ಜನರಿಗೆ ಆಮಿಷವೊಂಡುವುದನ್ನು ತಡೆಯಲು ಚುನಾವಣಾ ಆಯೋಗ (Election Commission) ಹಲವು ಕ್ರಮಗಳನ್ನು ಕೈಗೊಂಡಿದ್ದು, ಅಕ್ರಮ ಹಣ-ಹೆಂಡ ಹಾಗೂ ವಸ್ತುಗಳನ್ನು ಹಂಚುವುದು ಮತ್ತು ಸಾಗಾಟದ ಮೇಲೆ ಕಣ್ಣಿಟ್ಟಿದೆ. ನಾಕಾ ಬಂದಿಗಳನ್ನು ಹಾಕಿದೆ. ನಾಕಾ ಬಂದಿಗಳಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಹಗಲು-ರಾತ್ರಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಅದರಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಸುಲ್ತಾನ್​ಪೇಟೆ ಚೆಕ್​ ಪೋಸ್ಟ್​​ ಮೂಲಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಕೊಂಡಿಕೊಪ್ಪ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ 1,536 ರೇಷ್ಮೆ ಸೀರೆಗಳು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿ ವಾಣಿಜ್ಯ ತೆರಿಗೆ ಜಾರಿ ವಿಭಾಗದ ಜಂಟಿ ಆಯುಕ್ತ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ವಿವಿಧೆಡೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.90 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ. ಬಾದಾಮಿ ತಾಲೂಕಿನ ಜಾಲಿಹಾಳ ಚೆಕ್​ಪೋಸ್ಟ್​ ಒಂದರಲ್ಲೇ 2.90 ಲಕ್ಷ ರೂ. ಮತ್ತು ಬೂದನಗುಡ್ಡ ರೋಡ್ ಚೆಕ್​ಪೋಸ್ಟ್​ನಲ್ಲಿ 1 ಲಕ್ಚ ರೂ. ಅನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗ ಭರ್ಜರಿ ಬೇಟೆ: ಆರೇ ದಿನಗಳಲ್ಲಿ 9 ಕೋಟಿ ರೂ.ಗೂ ಹೆಚ್ಚು ನಗದು, ಚಿನ್ನಾಭರಣ ವಶ

ಚುನಾವಣಾ ಅಕ್ರಮ: ಸೋಮವಾರ ದಾಖಲಾದ ಪ್ರಕರಣ

ಕ್ಷಿಪಪಡೆಗಳು (FS), ಸ್ಥಿರ ಕಣಾವಲು ತಂಡಗಳು (SST) ಮತ್ತು ಪೊಲೀಸ್ ಅಧಿಕಾರಿಗಳು ನಗದು, ಮದ್ಯ ಡ್ರಗ್ಸ್​​ ಬೆಲೆಬಾಳುವ ಲೋಹ ಮತ್ತು ಉಚಿತ ಉಡುಗೊರೆ ವಶಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ 692 ಎಫ್​ಐಆರ್​​ಗಳನ್ನು ದಾಖಲಿಸಿದ್ದಾರೆ.

83,772 ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಲಾಗಿದೆ, 845 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 10 ಶಸ್ತ್ರಾಸ, ಪರವಾನಗಿಯನ್ನು ರದ್ದುಗೊಳಿಸಲಾಗಿದೆ, CRPCಯ ತಡೆಗಟ್ಟುವ ವಿಭಾಗಗಳ ಅಡಿಯಲ್ಲಿ 5,666 ಪ್ರಕರಣಗಳನ್ನು ದಾಖಲಿಸಲಾಗಿದೆ. ಅದರಲ್ಲಿ 5,480 ವ್ಯಕ್ತಿ / ವ್ಯಕ್ತಿಗಳನ್ನು ಒಳಪಟ್ಟ ಪ್ರಕರಣಗಳನ್ನು ದಾಖಲಾಗಿವೆ.

ಅಬಕಾರಿ ಇಲಾಖೆ ಘೋರ ಅಪರಾಧ ಅಡಿಯಲ್ಲಿ 679 ಪ್ರಕರಣಗಳು ದಾಖಲಾಗಿವೆ. ಪರವಾನಗೆ ಉಲ್ಲಂಘನೆ ಅಡಿಯಲ್ಲಿ 493 ಪ್ರಕರಣ ದಾಖಲಾಗಿವೆ. ಎನ್​ಡಿಪಿಎಸ್​ ಅಡಿಯಲ್ಲಿ 38 ಪ್ರಕರಣಗಳನ್ನು ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965 ರ ಸೆಕ್ಷನ್ 15(a) ಅಡಿಯಲ್ಲಿ 2,324 ಪ್ರಕರಣಗಳು ದಾಖಲಾಗಿವೆ. ಮತ್ತು 404 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:53 am, Tue, 26 March 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ