ಸಿಎಂ ಸಿದ್ದರಾಮಯ್ಯ ವಿರುದ್ಧದ ಚುನಾವಣಾ ತಕರಾರು ಅರ್ಜಿ: ವಿಚಾರಣೆ ಅ. 6ಕ್ಕೆ ಮುಂದೂಡಿದ ಹೈಕೋರ್ಟ್

ಸಿಎಂ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಿದ್ದರಾಮಯ್ಯ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಸಲಾಗಿದ್ದು, ಅರ್ಜಿದಾರರು ಊಹೆಗಳ ಮೇಲೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದು, ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 6ಕ್ಕೆ ಹೈಕೋರ್ಟ್ ಮುಂದೂಡಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧದ ಚುನಾವಣಾ ತಕರಾರು ಅರ್ಜಿ: ವಿಚಾರಣೆ ಅ. 6ಕ್ಕೆ ಮುಂದೂಡಿದ ಹೈಕೋರ್ಟ್
ಹೈಕೋರ್ಟ್, ಸಿಎಂ ಸಿದ್ದರಾಮಯ್ಯ
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on: Sep 21, 2023 | 10:40 PM

ಬೆಂಗಳೂರು, ಸೆಪ್ಟೆಂಬರ್​​ 21: ಸಿಎಂ ಸಿದ್ದರಾಮಯ್ಯ (Siddaramaiah) ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಿದ್ದರಾಮಯ್ಯ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಸಲಾಗಿದ್ದು, ಇದು ಪ್ರಚಾರಕ್ಕಾಗಿ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ. ಅರ್ಜಿದಾರರು ಊಹೆಗಳ ಮೇಲೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದು, ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 6ಕ್ಕೆ ಹೈಕೋರ್ಟ್ ಮುಂದೂಡಿದೆ.

ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಮತದಾರರಿಗೆ ಆಮಿಷ: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್​​ಗೆ ಅರ್ಜಿ

ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ಐದು ಗ್ಯಾರಂಟಿ ಯೋಜನೆಗಳು ನೆರವಾಗಿದ್ದವು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಐದು ಯೋಜನೆಗಳು ಜಾರಿ ಮಾಡುತ್ತೇವೆ ಎಂದು ಮತದಾರರನ್ನು ತಮ್ಮತ್ತ ಸೆಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್​ಗಳನ್ನು​ ಚುನಾವಣಾ ಪೂರ್ವದಲ್ಲಿ ರಾಜ್ಯಾದ್ಯಂತ ಹಂಚಲಾಗಿತ್ತು.

ಇದನ್ನೂ ಓದಿ: Siddaramaiah: ಚುನಾವಣಾ ತಕರಾರು ಅರ್ಜಿ; ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನೆ 123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಅದರಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಪರ ವಕೀಲರಿಂದ ಇದಕ್ಕೆ ಆಕ್ಷೇಪಣೆ ಸಲ್ಲಿಸಲಾಗಿತ್ತು. ಇದು ಪ್ರಚಾರಕ್ಕಾಗಿ ಮತ್ತು ಅರ್ಜಿದಾರರ ಊಹೆಗಳ ಮೇಲೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದು, ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 6ಕ್ಕೆ ಮುಂದೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ