ಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಚುನಾವಣೆ: ಆರು ಕ್ಷೇತ್ರಗಳಿಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ

| Updated By: ಗಂಗಾಧರ​ ಬ. ಸಾಬೋಜಿ

Updated on: May 17, 2024 | 10:15 PM

ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಇತ್ತೀಚೆಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿತ್ತು. ಇದೀಗ ಆರು ಕ್ಷೇತ್ರಗಳಿಗೆ ಉಸ್ತುವಾರಿಗಳನ್ನ ನೇಮಕ ಮಾಡಿದೆ. ರಾಜ್ಯ ವಿಧಾನ ಪರಿಷತ್​ಗೆ ಈಶಾನ್ಯ, ನೈಋತ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ, ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ.

ಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಚುನಾವಣೆ: ಆರು ಕ್ಷೇತ್ರಗಳಿಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ
ಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಚುನಾವಣೆ: ಆರು ಕ್ಷೇತ್ರಗಳಿಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ
Follow us on

ಬೆಂಗಳೂರು, ಮೇ 17: ಲೋಕ ಸಮರ ಮುಗಿದಾಯ್ತು.. ಇನ್ನೇನು ಫಲಿತಾಂಶ ಬರಬೇಕಷ್ಟೇ.. ಇದೀಗ ಮೇಲ್ಮನೆ ಚುನಾವಣೆಗೆ ಭರ್ಜರಿ ಸಿದ್ಧತೆಯೇ ನಡೆಯುತ್ತಿದೆ. ರಾಜ್ಯ ವಿಧಾನ ಪರಿಷತ್​ಗೆ (mlc election) ಈಶಾನ್ಯ, ನೈಋತ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ, ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ. ಹೀಗಾಗಿ ಪರಿಷತ್‌ನ ಆರು ಕ್ಷೇತ್ರಗಳಿಗೆ ಬಿಜೆಪಿ (BJP) ಉಸ್ತುವಾರಿಗಳ ನೇಮಕ ಮಾಡಿದೆ.

ಆರು ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ

  • ಈಶಾನ್ಯ ಪದವೀಧರ ಕ್ಷೇತ್ರ: ವಿಪಕ್ಷ ಮುಖ್ಯ ಸಚೇತಕ ರವಿಕುಮಾರ್​
  • ನೈಋತ್ಯ ಪದವೀಧರ, ನೈಋತ್ಯ ಶಿಕ್ಷಕರ ಕ್ಷೇತ್ರ: ವಿ.ಸುನೀಲ್ ಕುಮಾರ್ (ಉಸ್ತುವಾರಿ), ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್ (ಸಹ ಉಸ್ತುವಾರಿ)
  • ಬೆಂಗಳೂರು ಪದವೀಧರ ಕ್ಷೇತ್ರ: ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ್‌ ನಾರಾಯಣ
  • ಆಗ್ನೇಯ ಶಿಕ್ಷಕರ ಕ್ಷೇತ್ರ: ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್​
  • ದಕ್ಷಿಣ ಶಿಕ್ಷಕರ ಕ್ಷೇತ್ರ: ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ

ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಇತ್ತೀಚೆಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿತ್ತು. ಇದೀಗ ಆರು ಕ್ಷೇತ್ರಗಳಿಗೆ ಉಸ್ತುವಾರಿಗಳ ನೇಮಕ ಮಾಡಿದೆ. ಇನ್ನು ಜೆಡಿಎಸ್ ಜೊತೆಗಿನ ಲೋಕಸಭಾ ಚುನಾವಣಾ ಮೈತ್ರಿ ವಿಧಾನ ಪರಿಷತ್​​ಗೂ ವಿಸ್ತರಣೆಯಾಗಿದೆ. ಮತ್ತೊಂದೆಡೆ ಕಾಂಗ್ರೆಸ್​ ಕೂಡ ಕಲಿಗಳನ್ನ ಅಖಾಡಕ್ಕಿಳಿಸಿದೆ.

ಇದನ್ನೂ ಓದಿ: ಅನಗತ್ಯವಾಗಿ ನಾಮಪತ್ರ ತಿರಸ್ಕಾರ: ಚುನಾವಣಾಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ ವಿರುದ್ಧ ಗಂಭೀರ ಆರೋಪ

ಜೆಡಿಎಸ್​ ಬೇಡಿಕೆಯಂತೆಯೇ 2ಸ್ಥಾನ ಬಿಟ್ಟು ಕೊಡೋಕೆ ಬಿಜೆಪಿ ಸಮ್ಮತಿ ನೀಡಿದೆ. ಕುಮಾರಸ್ವಾಮಿ ಬೇಡಿಕೆಗೆ ಜೆ.ಪಿ.ನಡ್ಡಾ ಹಾಗೂ ವಿಜಯೇಂದ್ರ ಸಮ್ಮತಿ ನೀಡಿದ್ದಾರೆ. 6 ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸಿದ್ರೆ, ಉಳಿದೆರಡು ಕ್ಷೇತ್ರದಲ್ಲಿ ಜೆಡಿಎಸ್​ ಸ್ಪರ್ಧೆ ಮಾಡಲಿದೆ.

ಇದನ್ನೂ ಓದಿ; ಲೋಕಸಭಾ ಚುನಾವಣೆ ಬಳಿಕ ಬಿಜೆಪಿ ಮತ್ತು ಜೆಡಿಎಸ್ ನ 25-30 ಶಾಸಕರು ಕಾಂಗ್ರೆಸ್ ಸೇರ್ತಾರೆ: ಡಿ ಸುಧಾಕರ್, ಸಚಿವ

ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಲಿ ಸದಸ್ಯ ಅ.‌ದೇವೇಗೌಡಗೆ ಮತ್ತೊಮ್ಮೆ ಟಿಕೆಟ್ ನೀಡಲಾಗಿದೆ. ಇಲ್ಲಿ ಎ.ಹೆಚ್.ಆನಂದ್ ಪ್ರಬಲ ಆಕಾಂಕ್ಷಿಯಾಗಿದ್ದರು. ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಹಾಲಿ ಸದಸ್ಯ ವೈ.ಎ. ನಾರಾಯಣಸ್ವಾಮಿಗೆ ಮತ್ತೆ ಟಿಕೆಟ್ ನೀಡಲಾಗಿದೆ.‌ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಮಾಜಿ ಎಂಎಲ್ಸಿ ಅಮರನಾಥ ಪಾಟೀಲ್​​ರಿಗೆ ಟಿಕೆಟ್ ಕೊಟ್ಟಿದ್ದಾರೆ. ಆದ್ರೆ, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ಮತ್ತು ಗುರುನಾಥ್ ಜಾಂತಿಕರ್ ಆಕಾಂಕ್ಷಿಗಳಾಗಿದ್ದರು. ಇದೀಗ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಹೊಸಮುಖ ಇ.ಸಿ.ಲಿಂಗರಾಜುಗೆ ಟಿಕೆಟ್​ ನೀಡಲಾಗಿದೆ. ಜೆಡಿಎಸ್​ಗೆ ಬಿಟ್ಟು ಕೊಡಲಾಗಿದೆ. ಇನ್ನು ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಡಾ.ಧನಂಜಯ ಸರ್ಜಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.