ಬೆಂಗಳೂರಿನಲ್ಲಿ ವಿದ್ಯುತ್ ಅವಘಡ ಹೆಚ್ಚಳ; ಎರಡು ವರ್ಷದಲ್ಲಿ 42 ಸಾವು, ಅನೇಕರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ

ಬೆಸ್ಕಾಂ ತಂತಿ ತಗುಲಿ ಮೃತ ಪಡುವವರ ಸಂಖ್ಯೆ ಜಾಸ್ತಿಯಾಗುತ್ತಿದ್ದು,‌ ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ದಾಖಾಲೆ ಬರೆಯುತ್ತಿದೆ.‌ ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ 42 ಜನ ವಿದ್ಯುತ್ ಅವಘಡಗಳಿಂದ ಮೃತಪಟ್ಟಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ‌ ಬಿಡಾಡಿ ಧನಗಳ ಹಾವಳಿ ಹೆಚ್ಚಾಗಿದ್ದು, ಒಟ್ಟು 166 ಜಾನುವಾರುಗಳು ಅಸುನೀಗಿವೆ.

ಬೆಂಗಳೂರಿನಲ್ಲಿ ವಿದ್ಯುತ್ ಅವಘಡ ಹೆಚ್ಚಳ; ಎರಡು ವರ್ಷದಲ್ಲಿ 42 ಸಾವು, ಅನೇಕರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ
ಸಾವು
Follow us
Poornima Agali Nagaraj
| Updated By: ಆಯೇಷಾ ಬಾನು

Updated on:Aug 15, 2024 | 2:20 PM

ಬೆಂಗಳೂರು, ಆಗಸ್ಟ್​.15: ರಾಜ್ಯ ರಾಜಧಾನಿಯಲ್ಲಿ ವಿದ್ಯುತ್ ತಂತಿ ತಗುಲಿ ಅಪಘಾತ ಪ್ರಕರಣ ಹೆಚ್ಚಳವಾಗುತ್ತಿದ್ದು, ಕಳೆದ ಎರಡು ವರ್ಷಗಳಿಂದ ವಿದ್ಯುತ್‌ ನಿಂದ ಮೃತಪಡುವವರ (Death) ಸಂಖ್ಯೆ ಹೆಚ್ಚಾಗಿದೆ. ಕಳೆದ 2022 ರಿಂದ 24 ರವರೆಗೂ ರಾಜ್ಯದಲ್ಲಿ ಒಟ್ಟು 290 ಮಂದಿ ಮೃತಪಟ್ಟಿದ್ದು, ಈ ಪೈಕಿ ಬೆಂಗಳೂರು (Bengaluru) ನಗರದಲ್ಲಿಯೇ ಬರೋಬ್ಬರಿ 42 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಕಳೆದ ಐದು ವರ್ಷಗಳಿಂದ ವಿದ್ಯುತ್ ತಂತಿ ತಗುಲಿ ಮೃತ ಪಡುವವರ ಸಂಖ್ಯೆ ಹೆಚ್ಚಾಗಿದೆ. ಅದ್ರಲ್ಲಿ ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಒಟ್ಟು 290 ಮೃತರಾಗಿದ್ದು, ಬೆಂಗಳೂರಿನಲ್ಲಿಯೇ ಒಟ್ಟು 42 ಮಂದಿ ಮೃತಪಟ್ಟಿದ್ದಾರೆ. ಇನ್ಮು 290ರ ಪೈಕಿ 38 ಮಂದಿ ಪ್ರಾಣಾಪಾಯದಿಂದ ಪರಾರಿಯಾಗಿದ್ದಾರೆ. ಇದಲ್ಲದೇ ಸಿಲಿಕಾನ್ ಸಿಟಿಯಲ್ಲಿ‌ ಬಿಡಾಡಿ ಧನಗಳ ಹಾವಳಿ ಹೆಚ್ಚಾಗಿದ್ದು, ಒಟ್ಟು 166 ಜಾನುವಾರುಗಳು ಅಸುನೀಗಿವೆ. ಇದಕ್ಕೆಲ್ಲ ಪ್ರಮುಖ ಕಾರಣಗಳು ಎಂದ್ರೆ ಅಧಿಕೃತವಾಗಿ ವಿದ್ಯುತ್ ಮಾರ್ಗಗಳ ಕೆಳಗೆ ಮನೆಗಳನ್ನ ನಿರ್ಮಾಣ ಮಾಡಿರುವುದು.

ಇದನ್ನೂ ಓದಿ: ಬೆಂಗಳೂರು: ರಸ್ತೆ ಡಾಂಬರೀಕರಣಕ್ಕೆ ಸಚಿವರಿಂದಲೇ ಟ್ವೀಟ್ ಮೂಲಕ ಮನವಿ!

ಸಧ್ಯ ವಿದ್ಯುತ್ ಕೇಬಲ್​ಗಳು ಹಾದು ಹೋಗಿರುವ ಒಟ್ಟು 7722 ಕಟ್ಟಡಗಳಿವೆ. ಈ ಕಟ್ಟಡಗಳ ಬೆಸ್ಕಾಂ ಇಲ್ಲಿಯವರೆಗೂ ಕ್ರಮಕ್ಕೆ ಮುಂದಾಗಿಲ್ಲ. ಇನ್ನು ಸಧ್ಯ ಮೃತರಾಗಿರುವ 42 ಜನರ ಪೈಕಿ ಕೇವಲ 7 ಜನರಿಗೆ ಮಾತ್ರ ಪರಿಹಾರ ನೀಡಿದ್ದು, ಇನ್ನು 35 ಜನರಿಗೆ ಪರಿಹಾರವನ್ನೆ ನೀಡಿಲ್ಲ.‌ ಹೀಗಾಗಿ ಸಾರ್ವಜನಿಕರೇ ವಿದ್ಯುತ್ ಕೇಬಲ್​ಗಳು ಹಾದು ಹೋಗಿರುವಲ್ಲಿ ಎಚ್ಚರಿಕೆ ವಹಿಸಬೇಕಾಗಿದೆ. ಇನ್ನು ಈ ಕುರಿತಾಗಿ ಬೆಸ್ಕಾಂ ಅಧಿಕಾರಿಗಳನ್ನ ಪ್ರಶ್ನಿಸಿದ್ರೆ ಅಗತ್ಯ ಕ್ರಮ ತೆಗೆದುಕೊಳ್ತಾ ಇದ್ದೀವಿ. ಮಳೆಗಾಲಕ್ಕೆಂದೆ ಸ್ಪೆಷಲ್ ಟೀಮ್ ಇದ್ದು, ಯಾವುದೇ ಸಮಸ್ಯೆಯಾಗದಂತೆ ಜಾಗೃತಿ ವಹಿಸುತ್ತೇವೆ ಅಂದು ತಿಳಿಸಿದ್ದಾರೆ.

ಇನ್ನು, ನಗರದೆಲ್ಲೆಡೆ ಅನಧಿಕೃತ ಕೇಬಲ್​ಗಳ ಹಾವಳಿ ಜಾಸ್ತಿಯಾಗಿದೆ. ಈ ಕುರಿತಾಗಿ ಬೆಸ್ಕಾಂ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ಸಧ್ಯಕ್ಕೆ ಇರುವ ಲೈಟ್ ಕಂಬಗಳಿಗೆ ಸುರಕ್ಷತೆ ವಹಿಸಬೇಕು. ಮಳೆಯ ಸಂದರ್ಭದಲ್ಲಿ ಓಡಾಡುವುದಕ್ಕೆ ಭಯವಾಗುತ್ತೆ. ಎಲ್ಲಾ ಕೇವಲ್ ಹಾಗೂ ಕರೆಂಟ್ ವಯರ್ ಗಳು ನೇತಾಡುತ್ತಿರುತ್ತವೆ. ಮಕ್ಕಳು ಓಡಾಡುವಾಗ ಹೇಗೆ ಸುರಕ್ಷತೆ ಸಿಗುತ್ತದೆ ಎಂದು ಸಾರ್ವಜನಿಕರೊಬ್ಬರು ಪ್ರಶ್ನಿಸಿದ್ರು.

ಒಟ್ನಲ್ಲಿ, ನಗರದಲ್ಲಿ ಅನಧಿಕೃತ ವಯರ್ ಸಂಖ್ಯೆ ಜಾಸ್ತಿಯಾಗಿದ್ದು, ಈ ಕುರಿತಾಗಿ ಬೆಸ್ಕಾಂ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಂಡು ಮೃತರಾಗುತ್ತಿರುವ ಪ್ರಕರಣಗಳಿಗೆ ಬ್ರೇಕ್ ಹಾಕಬೇಕಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:20 pm, Thu, 15 August 24

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ