Escom Online Services: ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆ ಬಂದ್!

| Updated By: ರಮೇಶ್ ಬಿ. ಜವಳಗೇರಾ

Updated on: Mar 06, 2024 | 11:01 PM

Escom Online Services: ಇಂಧನ ಇಲಾಖೆಯ ಸಾಫ್ಟ್​ವೇರ್​ ಅಪ್ಡೇಟ್​ ಹಿನ್ನೆಲೆಯಲ್ಲಿ ಮಾರ್ಚ್​ 10ರಿಂದ ಒಟ್ಟು 10ದಿನಗಳ ಕಾಲ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಸೆಸ್ಕಾಂ, ಮೆಸ್ಕಾಂ, ಜೆಸ್ಕಾಂ,  ಹೆಸ್ಕಾಂ ಆನ್​ಲೈನ್ ಸೇವೆಗಳು ಇರುವುದಿಲ್ಲ. ಹಾಗಾದ್ರೆ, ಯಾವ ವಿದ್ಯುತ್ ಸರಬರಾಜು ಕಂಪನಿಗಳ ಯಾವ ನಗರಗಳಲ್ಲಿ ಆನ್‌ಲೈನ್ ಸೇವೆ ಇರುವುದಿಲ್ಲ ಎನ್ನುವ ವಿವರ ಈ ಕೆಳಗಿನಂತಿದೆ.

Escom Online Services: ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆ ಬಂದ್!
Follow us on

ಬೆಂಗಳೂರು, (ಮಾರ್ಚ್ 06): ಇಂಧನ ಇಲಾಖೆಯ ಸಾಫ್ಟ್​ವೇರ್ ಅಪ್ಡೇಟ್​ ಹಿನ್ನೆಲೆಯಲ್ಲಿ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳು (Escom Online Services) ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಇಂಧನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ.

ಆನ್‌ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ. ಸಾಫ್ಟ್​ವೇರ್ ಅಪ್ಡೇಟ್​  ಬಳಿಕ ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ  ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟಿಗೆ ವ್ಯತ್ಯಯ ಉಂಟಾಗಬಹುದು ಎಂದು ತಿಳಿಸಿದೆ.

ಸಾಫ್ಟ್‌ವೇರ್  ಅಪ್ಡೇಟ್ ಸಂದರ್ಭದಲ್ಲಿ ಆನ್​ಲೈನ್​ನಲ್ಲಿ ವಿದ್ಯುತ್ ಬಿಲ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲ. ಆದ್ರೆ, ಈ ಸಂದರ್ಭದಲ್ಲಿ  ವಿದ್ಯುತ್​ ಬಿಲ್‌ ನೀಡಲಿದ್ದು,  ಈ ಬಿಲ್‌ ಅನ್ನು ಮಾರ್ಚ್ 20ರ ನಂತರವೇ ವೆಬ್​ಸೈಟ್​ನಲ್ಲಿ ಅಪಲೋಡ್ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದೆ.

ರಾಜ್ಯದ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಸೆಸ್ಕಾಂ, ಮೆಸ್ಕಾಂ, ಜೆಸ್ಕಾಂ,  ಹೆಸ್ಕಾಂ ಆನ್​ಲೈನ್ ಸೇವೆಗಳು ಇರುವುದಿಲ್ಲ. ಹಾಗಾದ್ರೆ, ಯಾವ ವಿದ್ಯುತ್ ಸರಬರಾಜು ಕಂಪನಿಗಳ ಯಾವ ನಗರಗಳಲ್ಲಿ ಆನ್‌ಲೈನ್ ಸೇವೆ ಇರುವುದಿಲ್ಲ ಎನ್ನುವ ವಿವರ ಈ ಕೆಳಗಿನಂತಿದೆ.

ಬೆಸ್ಕಾಂ: ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು.

ಸೆಸ್ಕ್: ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆ‌ರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.

ಮೆಸ್ಕಾಂ: ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

ಜೆಸ್ಕಾಂ: ಕಲಬುರಗಿ, ಮಾನ್ವಿ, ಸಿಂಧನೂರು, ಬೀದರ್, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್ ಹಾಗೂ ಹೊಸಪೇಟೆ.

ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ,
ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.