ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ: ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ

Edited By:

Updated on: Sep 14, 2026 | 5:25 PM

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರಾಮದಲ್ಲಿ ಗಜರಾಜನ ಕಾಲ್ತುಳಿತಕ್ಕೆ ಸಿಕ್ಕಿ 65 ವರ್ಷದ ರೈತ ಜನ್ನೂರ ನಾಯಕ ಮೃತಪಟ್ಟಿದ್ದಾರೆ. ಗೌರಿ ಗಣೇಶ ಹಬ್ಬದ ದಿನದಂದೇ ಈ ದುರ್ಘಟನೆ ಸಂಭವಿಸಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಮಾನವ-ಕಾಡುಪ್ರಾಣಿ ಸಂಘರ್ಷ ಹೆಚ್ಚಾಗಲು ಕಾರಣ. ಸೋಲಾರ್ ಫೆನ್ಸಿಂಗ್ ಅಳವಡಿಸದಿರುವುದು ಪದೇ ಪದೇ ಕಾಡಾನೆ ದಾಳಿ ನೆಡೆಯುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಚಾಮರಾಜನಗರ, ಸೆಪ್ಟೆಂಬರ್​​ 14: ಗುಂಡ್ಲುಪೇಟೆ ತಾಲೂಕಿನಲ್ಲಿ ಮಾನವ-ಕಾಡುಪ್ರಾಣಿ ಸಂಘರ್ಷ ಮತ್ತೆ ಮುನ್ನಲೆಗೆ ಬಂದಿದೆ. ಕೋಟೆಕೆರೆ ಗ್ರಾಮದಲ್ಲಿ ರೈತ ಜನ್ನೂರ ನಾಯಕ (65) ಕಾಡಾನೆ ದಾಳಿಗೆ ಬಲಿಯಾಗಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಇವರನ್ನು ಆನೆ ತುಳಿದು ಸಾಯಿಸಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪದೇ ಪದೇ ಕಾಡಾನೆಗಳ ಉಪಟಳದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅರಣ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಕಾಡಿನಿಂದ ನಾಡಿಗೆ ಕಾಡಾನೆಗಳು ಬರುವುದನ್ನು ತಡೆಯಲು ಸೋಲಾರ್ ಫೆನ್ಸಿಂಗ್ ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸುವಂತೆ ಸ್ಥಳೀಯರು ಈ ಹಿಂದೆ ಮನವಿ ಮಾಡಿದ್ದರೂ, ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ಅರಣ್ಯಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More