ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಸಚಿವ ಈಶ್ವರ ಖಂಡ್ರೆ ಘೋಷಣೆ

ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್​ ಖಂಡ್ರೆ ಹೇಳಿದ್ದಾರೆ.

ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಸಚಿವ ಈಶ್ವರ ಖಂಡ್ರೆ ಘೋಷಣೆ
ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಸಚಿವ ಈಶ್ವರ ಖಂಡ್ರೆ ಘೋಷಣೆ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on:Oct 04, 2024 | 5:51 PM

ಶಿವಮೊಗ್ಗ, ಅಕ್ಟೋಬರ್​ 04: ಕಾಡಾನೆ ಹಾವಳಿ ತಡೆಗೆ 2 ಸಾವಿರ ಹೆಕ್ಟೇರ್​ನಲ್ಲಿ ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ (Eshwar Khandre) ಘೋಷಣೆ ಮಾಡಿದ್ದಾರೆ. ನಗರದ ಶಂಕರಘಟ್ಟದಲ್ಲಿ ನಡೆದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ರಜತ ಮಹೋತ್ಸವದಲ್ಲಿ ಘೋಷಣೆ ಮಾಡಿದ್ದಾರೆ.

ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪಿಸಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದೆ. ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆ ಹಾನಿ ಸಂಭವಿಸುತ್ತಿದೆ. ಇದನ್ನು ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರ ಧಾಮ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಫಾರಿ ಹೋಗುವವರಿಗೆ ಗುಡ್​ನ್ಯೂಸ್: ಸಿಂಹ, ಹುಲಿ ಜೊತೆಗೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ ಆರಂಭ

5 ಸಾವಿರ ಎಕರೆ ಪ್ರದೇಶದಲ್ಲಿ ಆನೆಗಳಿಗೆ ಇಷ್ಟವಾದ ಬಿದಿರು, ಹಲಸು, ಹುಲ್ಲು ಇತ್ಯಾದಿ ಬೆಳೆಸಲಾಗುವುದು. ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಸೆರೆ ಹಿಡಿದ ಆನೆಗಳನ್ನು ಇಲ್ಲಿ ತಂದು ಬಿಡಲಾಗುವುದು. ಇದರಿಂದ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಿನ ಹೊರಗೆ ಇರುವ ಆನೆಗಳಿಂದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ಕಾಡಾನೆಗಳ ಹಾವಳಿಯನ್ನು ತಪ್ಪಿಸಲು ಮನವಿ

ಪುರದಾಳು, ಬೆಳ್ಳೂರು, ತಮ್ಮಡಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸತತವಾಗಿ ಕಾಡನೆ ದಾಳಿಗೆ ಸಾವನ್ನಪ್ಪಿರುವ ವ್ಯಕ್ತಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಕೂಡ ಮನವಿ ಮಾಡಲಾಗಿತ್ತು.  ಕಾಡಾನೆಯಿಂದ ಬೆಳೆ ನಷ್ಟಕ್ಕೆ ಪರಿಹಾರ ಕೊಡಬೇಕು. ಕಾಡಾನೆಗಳನ್ನು ಗ್ರಾಮಗಳಿಗೆ, ರೈತರ ಜಮೀನಿಗೆ ಬರದಂತೆ ತಡೆಯುವಂತೆ ಅರಣ್ಯ ಇಲಾಖೆಗೆ ಆದೇಶ ನೀಡುವಂತೆ ಮನವಿ ಮಾಡಲಾಗಿತ್ತು.

ಒಕ್ಕಲೆಬ್ಬಿಸದಂತೆ ಸಚಿವರಿಗೆ ರೈತರಿಂದ ಮನವಿ

ಒಕ್ಕಲೆಬ್ಬಿಸದಂತೆ ಸಚಿವ ಈಶ್ವರ್ ಖಂಡ್ರೆಗೆ ರೈತರು ಮನವಿ ಮಾಡಿದ್ದಾರೆ. ಜಿಲ್ಲೆಯ ಬಿಆರ್​ಪಿಯಲ್ಲಿರುವ ಕುವೆಂಪು ವಿವಿ ಆವರಣದಲ್ಲಿ ರೈತರಿಂದ ಮನವಿ ಮಾಡಲಾಗಿದೆ. ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದ್ದು, ಸಾಗುವಳಿ ಪಡೆದು ಖಾತೆ, ಪಹಣಿ ಇರುವ ರೈತರ ಜಮೀನನ್ನು ಒಕ್ಕಲೆಬ್ಬಿಸುತ್ತಿರುವುದು ತಕ್ಷಣವೇ ನಿಲ್ಲಿಸುವಂತೆ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:39 pm, Fri, 4 October 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ