ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಅಂಡಿಪಾಳ್ಯ ಬಳಿಯ ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ತುಳಿದು ಸುಮಾರು 30 ವರ್ಷದ ಕಾಡಾನೆ ಸಾವಿಗೀಡಾಗಿದೆ.
ಚಾಮರಾಜನಗರ ಜಿಲ್ಲೆಯ ಭಾಗ್ಯಮ್ಮ ಎಂಬುವರ ಜಮೀನಿನಲ್ಲಿ ಆನೆ ಮೃತಪಟ್ಟಿದ್ದು, ಜಮೀನಿನಲ್ಲಿ ಅಕ್ರಮವಾಗಿ ಹಾಕಲಾಗಿದ್ದ ವಿದ್ಯುತ್ ತಂತಿಯೇ ಕಾಡಾನೆ ಸಾವಿಗೆ ಕಾರಣ ಎನ್ನುವುದು ತಿಳಿದು ಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು, ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದಾರೆ.
ಕರ್ನಾಟಕ ಗಡಿಭಾಗದ ಅರಣ್ಯ ಪ್ರದೇಶದಲ್ಲಿ ಆನೆಗಳ ಅನುಮಾನಸ್ಪದ ಸಾವು..