ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ; ಬಂಡೀಪುರ ಅರಣ್ಯ ಮೊಳೆಯೂರು ವಲಯದಲ್ಲಿ ಘಟನೆ

ಬೀಟ್​ನಲ್ಲಿದ್ದ ಸಿಬ್ಬಂದಿಗಳಿಗೆ ಆನೆ ಒದ್ದಾಟ‌ ಕಾಣಿಸಿತ್ತು. ನಂತರ ಜೆಸಿಬಿ ತರಿಸಿ ಅರಣ್ಯ ಸಿಬ್ಬಂದಿಗಳು ಆನೆಯ ರಕ್ಷಣೆ‌ ಮಾಡಿದರು.

ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ; ಬಂಡೀಪುರ ಅರಣ್ಯ ಮೊಳೆಯೂರು ವಲಯದಲ್ಲಿ ಘಟನೆ
ಕಾಡಾನೆ ರಕ್ಷಣೆ
Follow us
TV9 Web
| Updated By: ganapathi bhat

Updated on:Aug 23, 2021 | 12:30 PM

ಮೈಸೂರು: ಇಲ್ಲಿನ ಬಂಡೀಪುರ ಅರಣ್ಯದ ಮೊಳೆಯೂರು ವಲಯ ಮೀನಕಟ್ಟೆಯಲ್ಲಿ ಕೆಸರಿನಲ್ಲಿ ಸಿಲುಕಿದ್ದ ಕಾಡಾನೆಯನ್ನು ರಕ್ಷಿಸಲಾಗಿದೆ. ನೀರು ಕುಡಿಯಲು ಬಂದಿದ್ದ ವೇಳೆ ಆನೆ ಕೆಸರಿನಲ್ಲಿ ಸಿಲುಕಿತ್ತು. ಬೀಟ್​ನಲ್ಲಿದ್ದ ಸಿಬ್ಬಂದಿಗಳಿಗೆ ಆನೆ ಒದ್ದಾಟ‌ ಕಾಣಿಸಿತ್ತು. ನಂತರ ಜೆಸಿಬಿ ತರಿಸಿ ಅರಣ್ಯ ಸಿಬ್ಬಂದಿಗಳು ಆನೆಯ ರಕ್ಷಣೆ‌ ಮಾಡಿದರು. ಕೆಸರಿನಲ್ಲಿ ಸಿಲುಕಿದ್ದ ಕಾಡಾನೆಯನ್ನು ಜೆಸಿಬಿ ಸಹಾಯದಿಂದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಕುಶನನ್ನು ಮರಳಿ ಕಾಡಿಗೆ ಬಿಡಲು ಆದೇಶ ಅರಣ್ಯ ಇಲಾಖೆ ಸೆರೆ ಹಿಡಿದಿದ್ದ ದುಬಾರೆ ಅರಣ್ಯ ಪ್ರದೇಶದ ಆನೆ ಕುಶನನ್ನು ಮರಳಿ ಕಾಡಿಗೆ ಬಿಡಲು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಆದೇಶಿಸಿದ್ದರು. ಇಂದು ಈ ಸಂಬಂಧ ಸಚಿವ ಅರವಿಂದ ಲಿಂಬಾವಳಿ ತಮ್ಮ ಕಚೇರಿಯಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಕಳೆದ ಒಂದು ವರ್ಷದಿಂದ ದುಬಾರೆ ಶಿಬಿರದಿಂದ ತಪ್ಪಿಸಿಕೊಂಡ ಆನೆ ಕುಶನನ್ನು ಸೆರೆ ಹಿಡಿದು ತರಲಾಗಿತ್ತು, ಆದರೆ ಕುಶ ಆನೆಯನ್ನು ಸೆರೆ ಹಿಡಿದು ಇಲಾಖೆಯಿಂದ ಹಿಂಸೆ ನೀಡಲಾಗುತ್ತಿದೆ ಎಂದು ಪ್ರಾಣಿಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಅರವಿಂದ ಲಿಂಬಾವಳಿ ಇಂದು ಸಭೆ ನಡೆಸಿ ಮಾಹಿತಿ ಪಡೆದಿದ್ದರು. ಅಧಿಕಾರಿಗಳು ಕುಶ ಆನೆಗೆ ಯಾವುದೇ ತರಹದ ಹಿಂಸೆ ನೀಡಿಲ್ಲ‌. ಕುಶ ಆನೆ ಆರೋಗ್ಯವಾಗಿದೆ ಎಂದು ಮಾಹಿತಿ ನೀಡಿದ್ದರು.

ಅಂತಿಮವಾಗಿ ಸಚಿವರು ಕುಶ ಆನೆಗೆ ರೋಡಿಯೋ ಕಾಲರ್ ಅಳವಡಿಸಿ, ಬಿಡುಗಡೆ ಮಾಡಲು ಬಿಡುಗಡೆಗೆ ಸೂಕ್ತ ಸ್ಥಳ ನಿಗದಿ ಪಡಿಸಿದ ಮೇಲೆ, ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬಿಡುಗಡೆ ಮಾಡಲು ಆದೇಶಿಸಿದ್ದರು.

ಇದೇ ಸಂದರ್ಭದಲ್ಲಿ ದುಬಾರೆ ಸಮೀಪ ಪ್ರಜ್ಞಾ ಚೌಟ ಎನ್ನುವವರು ಆನೆಗಳನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡು ಪೋಷಿಸುತ್ತಿರುವ ಬಗ್ಗೆ ಸ್ಥಳೀಯರಿಂದ ವ್ಯಕ್ತವಾಗಿರುವ ಆಕ್ಷೇಪಣೆಗಳ ಬಗ್ಗೆ ಚರ್ಚೆ ನಡೆಸಲಾಗಿತ್ತು. ಅವರ ಸುಪರ್ದಿಯಲ್ಲಿರುವ ಆನೆಗಳನ್ನು ಇಲಾಖೆಯ ವಶಕ್ಕೆ ಪಡೆಯುವ ಬಗ್ಗೆ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿದ್ದರು.

ಸಭೆಯಲ್ಲಿ ಸಂಜಯ್ ಮೋಹನ್. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಅರಣ್ಯ ಪಡೆ ಮುಖ್ಯಸ್ಥರು ಮತ್ತು ವಿಜಯಕುಮಾರ್ ಗೋಗಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ,) ಹಾಗೂ ವನ್ಯಜೀವಿ ಪರಿಪಾಲಕರು ಭಾಗವಹಿಸಿದ್ದರು.

ಇದನ್ನೂ ಓದಿ: ದೈತ್ಯಾಕಾರದ ಆನೆ ಕ್ರಿಕೆಟ್​ ಆಡುವುದನ್ನು ನೋಡಿದರೆ ನೀವೂ ಆಶ್ಚರ್ಯಪಡ್ತೀರಾ; ಇಲ್ಲಿದೆ ವಿಡಿಯೋ

Published On - 4:54 pm, Sun, 16 May 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ