ತಮಿಳುನಾಡು: ಅನುಮಾನಸ್ಪದ ರೀತಿಯಲ್ಲಿ ಕಾಡಾನೆ ಸಾವನ್ನಪ್ಪಿರುವ ಘಟನೆ ಕರ್ನಾಟಕ ಗಡಿಭಾಗದ ತಮಿಳುನಾಡಿನ ಉಡೆದುರ್ಗಂ ಅರಣ್ಯ ಪ್ರದೇಶದ ಕವಿಪುರಂ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗೆ ಕರ್ನಾಟಕ ಹಾಗೂ ತಮಿಳುನಾಡು ಗಡಿ ಭಾಗದಲ್ಲಿರುವ ಅರಣ್ಯ ಪ್ರದೇಶದಲ್ಲಿ ಆನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಿರುವುದು ದಿನದಿಂದ ದಿನಕ್ಕೆ ಏರುತ್ತಲೆ ಇದೆ. ಆದರೆ ಈ ಬಗ್ಗೆ ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ದೀರ್ಘ ಮೌನವಹಿಸಿರುವುದು ವನ್ಯಜೀವಿ ಪ್ರಿಯರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಅರಣ್ಯಾಧಿಕಾರಿಗಳು ಆನೆಗಳ ಸಾವಿನ ಬಗ್ಗೆ ಆದಷ್ಟು ಬೇಗ ತನಿಖೆ ಕೈಗೊಳ್ಳಬೇಕೆಂದು ಸಾರ್ವಜನಿಕರು […]
Ad
Follow us on
ತಮಿಳುನಾಡು: ಅನುಮಾನಸ್ಪದ ರೀತಿಯಲ್ಲಿ ಕಾಡಾನೆ ಸಾವನ್ನಪ್ಪಿರುವ ಘಟನೆ ಕರ್ನಾಟಕ ಗಡಿಭಾಗದ ತಮಿಳುನಾಡಿನ ಉಡೆದುರ್ಗಂ ಅರಣ್ಯ ಪ್ರದೇಶದ ಕವಿಪುರಂ ಗ್ರಾಮದಲ್ಲಿ ನಡೆದಿದೆ.
ಇತ್ತೀಚೆಗೆ ಕರ್ನಾಟಕ ಹಾಗೂ ತಮಿಳುನಾಡು ಗಡಿ ಭಾಗದಲ್ಲಿರುವ ಅರಣ್ಯ ಪ್ರದೇಶದಲ್ಲಿ ಆನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಿರುವುದು ದಿನದಿಂದ ದಿನಕ್ಕೆ ಏರುತ್ತಲೆ ಇದೆ. ಆದರೆ ಈ ಬಗ್ಗೆ ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ದೀರ್ಘ ಮೌನವಹಿಸಿರುವುದು ವನ್ಯಜೀವಿ ಪ್ರಿಯರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಹೀಗಾಗಿ ಅರಣ್ಯಾಧಿಕಾರಿಗಳು ಆನೆಗಳ ಸಾವಿನ ಬಗ್ಗೆ ಆದಷ್ಟು ಬೇಗ ತನಿಖೆ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇನ್ನು ಘಟನೆ ಸ್ಥಳಕ್ಕೆ ರಾಯಕೋಟೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಆನೆಗಳ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.