ಕೋಲಾರ ಜಿಲ್ಲೆಯಲ್ಲಿ ಮತ್ತೆ ಕಾಣಿಸಿಕೊಂಡ ಗಜಪಡೆ, ರೈತರಲ್ಲಿ ಆತಂಕ
ಕೋಲಾರ: ಕೆಜಿಎಫ್ ತಾಲೂಕಿನ ಬಳುವನಹಳ್ಳಿ ಬಳಿ ಮತ್ತೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿವೆ. ಗಡಿ ಗ್ರಾಮಗಳಲ್ಲಿ ಸುಮಾರು 7 ಕಾಡಾನೆಗಳು ಕಾಣಿಸಿಕೊಂಡಿವೆ. ಗ್ರಾಮದ ತೋಟಗಳಲ್ಲಿ 10ಕ್ಕೂ ಹೆಚ್ಚು ಎಕರೆ ಆಲೂಗಡ್ಡೆ, ಟೊಮೆಟೊ ಸೇರಿದಂತೆ ವಿವಿಧ ರೀತಿಯ ಬೆಳೆಗಳನ್ನು ಹಾಳು ಮಾಡಿವೆ. ರೈತರ ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿಯಾಗಿದೆ. ಹೀಗಾಗಿ ಸುತ್ತಮುತ್ತ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಇನ್ನು ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋಲಾರ: ಕೆಜಿಎಫ್ ತಾಲೂಕಿನ ಬಳುವನಹಳ್ಳಿ ಬಳಿ ಮತ್ತೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿವೆ. ಗಡಿ ಗ್ರಾಮಗಳಲ್ಲಿ ಸುಮಾರು 7 ಕಾಡಾನೆಗಳು ಕಾಣಿಸಿಕೊಂಡಿವೆ.
ಗ್ರಾಮದ ತೋಟಗಳಲ್ಲಿ 10ಕ್ಕೂ ಹೆಚ್ಚು ಎಕರೆ ಆಲೂಗಡ್ಡೆ, ಟೊಮೆಟೊ ಸೇರಿದಂತೆ ವಿವಿಧ ರೀತಿಯ ಬೆಳೆಗಳನ್ನು ಹಾಳು ಮಾಡಿವೆ. ರೈತರ ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿಯಾಗಿದೆ. ಹೀಗಾಗಿ ಸುತ್ತಮುತ್ತ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಇನ್ನು ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published On - 10:12 am, Sat, 7 December 19