Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

ಕೊರೊನಾಗೆ ಸಂಬಂಧಿಸಿದ ಇತರ ಯಾವುದೇ ಅಗತ್ಯ ಮಾಹಿತಿ ಅಥವಾ ಸೇವೆಗಳ ಕುರಿತು ತಿಳಿಯಲು ಬಿಬಿಎಂಪಿ ವ್ಯಾಪ್ತಿಯ ನಾಗರಿಕರು 1912 ಕ್ಕೆ ಮತ್ತು ರಾಜ್ಯದ ಇತರ ಭಾಗಗಳ ನಾಗರಿಕರು 14410ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ
ಆ್ಯಂಬುಲೆನ್ಸ್​ಗಳು
Follow us
guruganesh bhat
|

Updated on:Apr 23, 2021 | 4:46 PM

ಬೆಂಗಳೂರು: ಕೊರೊನಾ ಸೊಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಸೋಂಕು ತಗುಲಿದ್ದು ಖಚಿತವಾದರೆ ಮೊದಲು ಏನು ಮಾಡಬೇಕು? ಆಸ್ಪತ್ರೆಗಳನ್ನು ಹೇಗೆ ಸಂಪರ್ಕಿಸಬೇಕು? ಅಥವಾ ಆ್ಯಂಬುಲೆನ್ಸ್​ಗಳನ್ನು ಮನೆ ಬಾಗಿಲಿಗೆ ತರಿಸಿಕೊಳ್ಳಲು ಏನು ಮಾಡಬೇಕು ಎಂಬ ಪ್ರಶ್ನೆಗಳು ಹಲವರಲ್ಲಿವೆ. ಬೆಂಗಳೂರು ವ್ಯಾಪ್ತಿಯ ನಾಗರಿಕರ ಇಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.  ಬೆಂಗಳೂರು ವ್ಯಾಪ್ತಿಯಲ್ಲಿ ತುರ್ತು ಆ್ಯಂಬುಲೆನ್ಸ್ ಅಗತ್ಯ ಬಿದ್ದಲ್ಲಿ ಸಾರ್ವಜನಿಕರು 1912 ಮತ್ತು 108ಕ್ಕೆ ಕರೆ ಮಾಡಬಹುದು. ಈ ಮೂಲಕ ಯಾವುದೇ ಗಾಬರಿಗೂ ಒಳಗಾಗದೇ ಆ್ಯಂಬುಲೆನ್ಸ್ ಸೇವೆಯನ್ನು ಪಡೆಯಬಹುದು.

ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸುವ ರೆಮ್​ಡೆಸಿವಿರ್ ಔಷಧ ಪಡೆಯಲು 7019861430 ಕ್ಕೆ ಕರೆ ಮಾಡಬಹುದು. ಆಸ್ಪತ್ರೆಗಳಲ್ಲಿ ಬೆಡ್ ದೊರೆಯದಿದ್ದಲ್ಲಿ ಸಹಾಯವಾಣಿ ಸಂಖ್ಯೆ 1912ಕ್ಕೆ ಕರೆ ಮಾಡಬಹುದು. ರೋಗಿಗಳಿಗೆ ಅಥವಾ ಸೋಂಕಿತರಿಗೆ ಆಕ್ಸಿಜನ್​ಗಾಗಿ 1912 ಅಥವಾ 108ಕ್ಕೆ ಕರೆ ಮಾಡುವ ಮೂಲಕ ಸೌಲಭ್ಯ ದೊರಕಿಸಿಕೊಳ್ಳಬಹುದು.

ಕೊರೊನಾಗೆ ಸಂಬಂಧಿಸಿದ ಇತರ ಯಾವುದೇ ಅಗತ್ಯ ಮಾಹಿತಿ ಅಥವಾ ಸೇವೆಗಳ ಕುರಿತು ತಿಳಿಯಲು ಬಿಬಿಎಂಪಿ ವ್ಯಾಪ್ತಿಯ ನಾಗರಿಕರು 1912 ಕ್ಕೆ ಮತ್ತು ರಾಜ್ಯದ ಇತರ ಭಾಗಗಳ ನಾಗರಿಕರು 14410 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಸರ್ಕಾರ ನಿಗದಿಪಡಿಸಿರುವ ಶುಲ್ಕ ಆದೇಶಗಳನ್ನು ಪಾಲಿಸಿ: ಫನಾ ಕೊವಿಡ್ ವಿರುದ್ಧದ ಹೋರಾಟದಲ್ಲಿ ಸರ್ಕಾರ ಜತೆ ಕೈಜೋಡಿಸಿ, ಸಕ್ರಿಯವಾಗಿ ಪಾಲ್ಗೊಳ್ಳಿ. ಕೊರೊನಾ ಸೋಂಕಿತರಿಂದ ಹೆಚ್ಚುವರಿ ಶುಲ್ಕವನ್ನ ಪಡೆಯಬೇಡಿ. ಸರ್ಕಾರದ ಆದೇಶಗಳನ್ನು ಪಾಲಿಸಿ ಎಂದು ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಗಳಿಗೆ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂ ಅಸೋಸಿಯೇಶನ್(ಫನಾ) ಪತ್ರ ಬರೆದಿದೆ.

ಸೋಂಕಿತರಿಗೆ ಬೆಡ್‌ ಹಂಚಿಕೆಯಲ್ಲಿ ಪಾರದರ್ಶಕತೆ ಇರಲಿ. ಸರ್ಕಾರಕ್ಕೆ ಕೊವಿಡ್ ಬೆಡ್ ಕಾಯ್ದಿರಿಸುವ ಬಗ್ಗೆ ಗಮನ ಕೊಡಿ. ಪೋರ್ಟಲ್‌ನಲ್ಲಿ ಬೆಡ್ ವಿವರಗಳನ್ನ ನೀಡುವತ್ತ ಗಮನ ಕೊಡಿ. ಸಣ್ಣಪುಟ್ಟ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ಕೆಟ್ಟ ಹೆಸರು ಬರುವುದು ಬೇಡ. ಒಟ್ಟಾಗಿ ಕೊವಿಡ್ ವಿರುದ್ಧ ಹೋರಾಡಿ, ಜಯ ಸಾಧಿಸೋಣ ಎಂದು ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಗಳಿಗೆ ಫನಾ ಪತ್ರ ಬರೆದಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತರ ಚಿಕಿತ್ಸೆಗೆ ಹೊಸ ಔಷಧ ಬಳಸಲು ಅನುಮತಿ ನೀಡಿದ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Emergency health services contact number in Bengaluru and Karnataka for Covid 19 treatment)

Published On - 4:46 pm, Fri, 23 April 21

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್