ಬೆಂಗಳೂರು; ಆರ್ಥಿಕ ಸಮಸ್ಯೆ, ವೇತನ ಹೆಚ್ಚಳ ಮಾಡದಿದ್ದಕ್ಕೆ ಕಂಪನಿಯಲ್ಲೇ ಉದ್ಯೋಗಿ ಆತ್ಮಹತ್ಯೆ
ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಶಾಂತಕುಮಾರ್ಗೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲೂ ವೇತನ ಹೆಚ್ಚಳ ಮಾಡಿರಲಿಲ್ಲ. ಇದರಿಂದ ನೊಂದು ಇಂತಹ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಮೂಲತಃ ಹಿರಿಯೂರಿನವರಾದ ಶಾಂತಕುಮಾರ್ ಐಟಿಐ ಮುಗಿಸಿ ಹಲವು ವರ್ಷದಿಂದ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಬೆಂಗಳೂರು: ಆರ್ಥಿಕ ಸಮಸ್ಯೆ ಹಾಗೂ ವೇತನ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಚಿಕ್ಕಜಾಲ ಬಳಿ ಇರುವ ಎಂವಿ ಸೋಲಾರ್ ಕಂಪನಿಯಲ್ಲಿ ನಡೆದಿದೆ. ಡೆತ್ನೋಟ್ ಬರೆದಿಟ್ಟು ಶಾಂತಕುಮಾರ್ ನೇಣಿಗೆ ಶರಣಾಗಿದ್ದಾರೆ. ಕಂಪನಿಯಲ್ಲಿ ಯಾರು ಇಲ್ಲದ ಸಮಯ ನೋಡಿ ಶಾಂತಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಶಾಂತಕುಮಾರ್ಗೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲೂ ವೇತನ ಹೆಚ್ಚಳ ಮಾಡಿರಲಿಲ್ಲ. ಇದರಿಂದ ನೊಂದು ಇಂತಹ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಮೂಲತಃ ಹಿರಿಯೂರಿನವರಾದ ಶಾಂತಕುಮಾರ್ ಐಟಿಐ ಮುಗಿಸಿ ಹಲವು ವರ್ಷದಿಂದ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಆರ್ಥಿಕವಾಗಿ ಬಹುತೇಕ ಸಮಸ್ಯೆಗಳನ್ನು ಎದುರಿಸಿ ಕುಗ್ಗಿದ್ದರು. ಅಲ್ಲದೇ ಕಂಪನಿಯಿಂದ ಕಳೆದ ನಾಲ್ಕು ವರ್ಷದಿಂದ ವೇತನ ಹೆಚ್ಚಳ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡೆತ್ ನೋಟ್ ಬರೆದು ಆತಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಮಾರ್ಚ್ 09ರ ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಜಾಲ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಹಾಗೂ ಮೃತ ದೇಹವನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಶಾಂತಕುಮಾರ್ ಸಹದ್ಯೋಗಿಗಳ ಬಳಿ ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕಲಾಗುತ್ತಿದೆ.
ಇನ್ನು ಡಳಿತ ಮಂಡಳಿ ಕಿರುಕುಳದಿಂದ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕಂಪನಿ ಆಡಳಿತ ಮಂಡಳಿ ವಿರುದ್ಧ ಕಾರ್ಮಿಕರು ಆಕ್ರೋಶ ಹೊರ ಹಾಕಿದ್ದಾರೆ. ಕಿರುಕುಳದಿಂದ ಮನನೊಂದು ಶಾಂತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ: ಹಣಕಾಸು ಕಂಪನಿಯ ಉದ್ಯೋಗಿ ವಿರುದ್ಧ FIR ರದ್ದು
Published On - 7:46 am, Wed, 10 March 21