AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ.29ರಂದು ಬೆಂಗಳೂರು ಚಲೋ ಕೈಗೊಂಡ ಸಾರಿಗೆ ನೌಕರರಿಗೆ ಶಾಕ್ ಕೊಟ್ಟ KSRTC

ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಜನವರಿ 29 ರಂದು 'ಬೆಂಗಳೂರು ಚಲೋ' ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. ಆದ್ರೆ, ಇದಕ್ಕೆ ಕೆಎಸ್​​ಆರ್​​ಟಿಸಿ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದು, ಬೆಂಗಳೂರು ಚಲೋಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಹಾಗಾದ್ರೆ, ಕೆಎಸ್​ಆರ್​​​ಟಿಸಿ ಎಂಡಿ ಆದೇಶದಲ್ಲೇನಿದೆ ಎನ್ನುವ ವಿವರ ಈ ಕೆಳಗಿನಂತಿದೆ.

ಜ.29ರಂದು ಬೆಂಗಳೂರು ಚಲೋ ಕೈಗೊಂಡ ಸಾರಿಗೆ ನೌಕರರಿಗೆ ಶಾಕ್ ಕೊಟ್ಟ KSRTC
KSRTC
Kiran Surya
| Edited By: |

Updated on:Jan 27, 2026 | 6:47 PM

Share

ಬೆಂಗಳೂರು, (ಜನವರಿ 27): ಕೆಎಸ್‌ಆರ್‌ಟಿಸಿ  (KSRTC) ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು (employees) ಸಮರ ಸಾರಿದ್ದಾರೆ. ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ನಾಡಿದ್ದು ಅಂದರೆ ಜನವರಿ 29ರಂದು ಬೆಂಗಳೂರು ಚಲೋಗೆ (Bengaluru Chalo) ಕರೆ ನೀಡಿದ್ದಾರೆ. ಆದ್ರೆ, ಇದಕ್ಕೆ ಕೆಎಸ್​​ಆರ್​​​ಟಿಸಿ ಶಾಕ್ ಕೊಟ್ಟಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ. ಗುರುವಾರ ಡ್ಯೂಟಿಗೆ ಬಂದಿಲ್ಲ ಅಂದರೆ ‘ನೋ ವರ್ಕ್ ನೋ ಪೇ’ ಎಂದು ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷ ಆದೇಶ ಹೊರಡಿಸಿದ್ದಾರೆ.

‘ನೋ ವರ್ಕ್ ನೋ ಪೇ’ ಆದೇಶ

ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಜನವರಿ 29ರಂದು ಬೆಂಗಳೂರು ಚಲೋ ಕೈಗೊಂಡಿದ್ದಾರೆ. ಆದ್ರೆ, ಇದಕ್ಕೆ ಒಂದು ದಿನ ಮೊದಲೇ ಕೆಎಸ್​​​ಆರ್​​ಟಿಸಿ ಮಹತ್ವದ ಆದೇಶ ಹೊರಡಿಸಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ. ಒಂದು ವೇಳೆ ಗುರುವಾರ ಡ್ಯೂಟಿಗೆ ಬಂದಿಲ್ಲ ಅಂದರೆ ‘ನೋ ವರ್ಕ್ ನೋ ಪೇ’ ಎನ್ನುವ ಆದೇಶವನ್ನು ಜಾರಿ ಮಾಡಿದೆ.

ಇದನ್ನೂ ಓದಿ: ಮಂಗಳೂರು-ಕಾಸರಗೋಡು ಪ್ರಯಾಣಿಕರಿಗೆ ಬಿಗ್​​ ಶಾಕ್​ ನೀಡಿದ ಕರ್ನಾಟಕ-ಕೇರಳ ಸರ್ಕಾರ!

ಅಧಿಕಾರಿಗಳಿಗೆ ಖಡಕ್ ಸೂಚನೆ

01-01-2020ರಿಂದ 28-02-2023ರ ವರೆಗಿನ 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಹಾಗೂ 01.01.2024 ರಿಂದ ನಾಲ್ಕು ವರ್ಷಗಳ ವೇತನ ಒಪ್ಪಂದಕ್ಕೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿಯು ಜನವರಿ 29ರ ಗುರುವಾರ ಬೆಂಗಳೂರು ಚಲೋಗೆ ಕರೆ ನೀಡಿದೆ. ಈ ಹಿನ್ನೆಲೆ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕೈಗೊಳ್ಳುವಂತೆ ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಿನಾಂಕ.29.01.2026 ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದು. ಕೆಲಸಕ್ಕೆ ಗೈರು ಹಾಜರಾಗುವ ನೌಕರರ ವಿರುದ್ಧ ‘ನೋ ವರ್ಕ್ ನೋ ಪೇ’ ಜಾರಿ ಮಾಡಬೇಕು. ಅನಿವಾರ್ಯ ಸಂದರ್ಭದಲ್ಲಿ ಅವಶ್ಯವಿದ್ದಲ್ಲಿ ನೌಕರರ ವಾರದ ರಜೆಯನ್ನು ರದ್ದುಗೊಳಿಸಿ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜ.29ರಂದು ಬಸ್ ಸಂಚಾರ ಇರುತ್ತಾ ಇಲ್ಲಾ?

ಇದರೊಂದಿಗೆ ಕೆಎಸ್​​​ಆರ್​​ಟಿಸಿ ತನ್ನ ನೌಕರರ ಪ್ರತಿಭಟನೆಗೆ ಬ್ರೇಕ್ ಹಾಕಲು ಮುಂದಾಗಿದೆ. ಹೀಗಾಗಿ ಬೆಂಗಳೂರು ಚಲೋ, ಸಾರಿಗೆ ನೌಕರರ ಮುಂದಿನ ನಡೆ ಮೇಲೆ ನಿಂತಿದೆ.  ಒಂದು ವೇಳೆ ಈ ಆದೇಶಕ್ಕೆ ಹೆದರಿ ಪ್ರತಿಭಟನೆಯಿಂದ ಹಿಂದೆ ಸರಿದರೆ ಎಂದಿನಂತೆ ಬಸ್ ಸಂಚಾರ ಇರಲಿದೆ. ಇನ್ನು ಆದೇಶಕ್ಕೆ ಡೋಟ್​ ಕೇರ್ ಎಂದು ಬೆಂಗಳೂರು ಚಲೋಗೆ ತೆರಳಿದರೆ ಕೆಎಸ್​​ಆರ್​​​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವುದು ಗ್ಯಾರಂಟಿ. ಹೀಗಾಗಿ ಪ್ರಯಾಣಿಕರು ಜನವರಿ 29ರಂದು ಬಸ್ ಪ್ರಯಾಣ ಕೈಬಿಡುವುದು ಒಳಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Tue, 27 January 26

Follow Us
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!
ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ!
ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ!
120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ
120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ
ಅಮೆರಿಕದ ಪನಾಮ ಸೇತುವೆ ಮೇಲೆ ಮೂರು ಇಂಧನ ಟ್ಯಾಂಕರ್​ಗಳ ಸ್ಫೋಟ
ಅಮೆರಿಕದ ಪನಾಮ ಸೇತುವೆ ಮೇಲೆ ಮೂರು ಇಂಧನ ಟ್ಯಾಂಕರ್​ಗಳ ಸ್ಫೋಟ
ಇದು ಪಾಕ್ ಲೀಗ್​​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?
ಇದು ಪಾಕ್ ಲೀಗ್​​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?
ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಐಟಿ ಬಾಬಾ
ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಐಟಿ ಬಾಬಾ