ಕೊರೊನಾ ನಿಯಂತ್ರಣಕ್ಕಾಗಿ ನಿಷೇಧಾಜ್ಞೆ ಜಾರಿ ಮಾಡಲು ಸಿದ್ದರಾಮಯ್ಯ ಸಲಹೆ; ಸಭೆಯಲ್ಲಿ ರಾಜ್ಯಪಾಲರ ನೇತೃತ್ವದ ಬಗ್ಗೆ ಅಸಮಾಧಾನ

ಕೊರೊನಾ ನಿಯಂತ್ರಣಕ್ಕಾಗಿ ನಿಷೇಧಾಜ್ಞೆ ಜಾರಿ ಮಾಡಲು ಸಿದ್ದರಾಮಯ್ಯ ಸಲಹೆ; ಸಭೆಯಲ್ಲಿ ರಾಜ್ಯಪಾಲರ ನೇತೃತ್ವದ ಬಗ್ಗೆ ಅಸಮಾಧಾನ
ಮಾಜಿ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಇಂದು ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆದಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು. ಇದು ಸಂವಿಧಾನ ಬಾಹಿರ ಎಂದು ಹೇಳಿದರು.

Lakshmi Hegde

|

Apr 20, 2021 | 7:04 PM

ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಈಗಾಗಲೇ ಲಾಕ್​ಡೌನ್ ಪರ ಒಲವು ತೋರಿದ್ದು, ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಸಹ ಪರೋಕ್ಷವಾಗಿ ಇದಕ್ಕೆ ಬೆಂಬಲ ನೀಡಿದ್ದಾರೆ. ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೆ ತರುವಂತೆ ಸಲಹೆ ನೀಡಿದ್ದಾರೆ.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಮುಂದೂಡಿ. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವಲಸೆ ಹೋಗುವುದನ್ನು ನಿಲ್ಲಿಸಿ. ಇತರ ರಾಜ್ಯಗಳಿಂದ ಬರುವ ವಿಮಾನಗಳಿಗೆ ನಿರ್ಬಂಧ ಹೇರಿ ಮತ್ತು ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯಪಾಲರ ಸಭೆ ಬಗ್ಗೆ ಆಕ್ಷೇಪ ಮುಖ್ಯಮಂತ್ರಿ ಇಂದು ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆದಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು. ಇದು ಸಂವಿಧಾನ ಬಾಹಿರ ಎಂದು ಹೇಳಿದರು. ಹೀಗೆ ರಾಜ್ಯ ಸರ್ಕಾರದ ಆಡಳಿತದಲ್ಲಿ ರಾಜ್ಯಪಾಲರು ಹಸ್ತಕ್ಷೇಪ ಮಾಡುವಂತಿಲ್ಲ. ರಾಷ್ಟ್ರಪತಿ ಆಡಳಿತವಿದ್ದಾಗ ಮಾತ್ರ ಇದು ಸೂಕ್ತ. ಇದು ಸರಿಯಾದ ಕ್ರಮವಲ್ಲ ಎಣದು ಹೇಳಿದರು. ರಾಜ್ಯಪಾಲರು ಭಾಗವಹಿಸಿರುವ ಸಭೆಗೆ ಗೌರವ ಕೊಡಬೇಕು ಎಂಬ ಉದ್ದೇಶದಿಂದ ಅಷ್ಟೇ ನಾನು ಇದರಲ್ಲಿ ಭಾಗವಹಿಸಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಜನರ ಆಕ್ರೋಶ : ಸರ್ಕಾರದವರೇ ಕೊರೊನಾ ರೂಲ್ಸ್ ಫಾಲೋ ಮಾಡಲ್ಲಾ.. ನಮ್ಮ ಮೇಲೆ ಗೂಬೆ ಕೂರಿಸ್ತಾರೆ.!

ಬಿಯರ್​ ಬಾಟಲ್​ ಸಾಗಿಸುತ್ತಿದ್ದ ಲಾರಿ ಪಲ್ಟಿ, ಕೊರೊನಾ ನಡುವೆ ಭಯವಿಲ್ಲದೆ ಬಿಯರ್​ಗಾಗಿ ಮುಗಿಬಿದ್ದ ಜನ .!

Follow us on

Related Stories

Most Read Stories

Click on your DTH Provider to Add TV9 Kannada