ಮುರುಡೇಶ್ವರದಲ್ಲಿ ತಲೆ ಎತ್ತಿದ ಶಿವ ಪ್ರತಿಮೆ ಕರ್ತೃ, ಖ್ಯಾತ ಉದ್ಯಮಿ ಆರ್.ಎನ್. ಶೆಟ್ಟಿ ನಿಧನ

ಮುರುಡೇಶ್ವರದ ಸಮುದ್ರ ತೀರದಲ್ಲಿ 123 ಅಡಿ ಎತ್ತರದ ಶಿವ ಪ್ರತಿಮೆ ಸ್ಥಾಪನೆಗೆ ಕಾರಣರಾಗಿರುವ ದೇಶ ವಿದೇಶಗಳಲ್ಲಿ ಖ್ಯಾತಿ ಗಳಿಸಿದ್ದ ಹಿರಿಯ ಉದ್ಯಮಿ, ಶಿಕ್ಷಣ ತಜ್ಞ ಆರ್​ಎನ್ ಶೆಟ್ಟಿ(92) ಗುರುವಾರ ನಿಧನರಾಗಿದ್ದಾರೆ. ಇಂದು (ಗುರುವಾರ) ನಸುಕಿನ ಜಾವ 3.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಮುರುಡೇಶ್ವರದಲ್ಲಿ ತಲೆ ಎತ್ತಿದ ಶಿವ ಪ್ರತಿಮೆ ಕರ್ತೃ, ಖ್ಯಾತ ಉದ್ಯಮಿ ಆರ್.ಎನ್. ಶೆಟ್ಟಿ ನಿಧನ
ಹಿರಿಯ ಉದ್ಯಮಿ, ಶಿಕ್ಷಣ ತಜ್ಞ ಆರ್​ಎನ್ ಶೆಟ್ಟಿ
Follow us
ಆಯೇಷಾ ಬಾನು
|

Updated on:Dec 17, 2020 | 9:04 AM

ಬೆಂಗಳೂರು: ಮುರುಡೇಶ್ವರದ ಸಮುದ್ರ ತೀರದಲ್ಲಿ 123 ಅಡಿ ಎತ್ತರದ ಶಿವ ಪ್ರತಿಮೆ ಸ್ಥಾಪನೆಗೆ ಕಾರಣರಾಗಿರುವ ದೇಶ ವಿದೇಶಗಳಲ್ಲಿ ಖ್ಯಾತಿ ಗಳಿಸಿದ್ದ ಹಿರಿಯ ಉದ್ಯಮಿ, ಶಿಕ್ಷಣ ತಜ್ಞ ಆರ್​ಎನ್ ಶೆಟ್ಟಿ(92) ಗುರುವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ R.N.ಶೆಟ್ಟಿ ಇಂದು (ಗುರುವಾರ) ನಸುಕಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ರಾಮ ನಾಗಪ್ಪ ಶೆಟ್ಟಿ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಕೃಷಿ ಕುಟುಂಬದಲ್ಲಿ ಜನಿಸಿದ್ದರು. ಮುರುಡೇಶ್ವರ ದೇವಸ್ಥಾನದ ಆನುವಂಶಿಕ ಆಡಳಿತಾಧಿಕಾರಿಯಾಗಿ ಈ ಸ್ಥಳವನ್ನು ಪ್ರೇಕ್ಷಣೀಯ ಕ್ಷೇತ್ರವನ್ನಾಗಿ ಪರಿವರ್ತಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ವಿಶೇಷ ಅಂದ್ರೆ ಮುರುಡೇಶ್ವರದ ಸಮುದ್ರ ತೀರದಲ್ಲಿ 123 ಅಡಿ ಎತ್ತರದ ಶಿವನ ಪ್ರತಿಮೆಯನ್ನು ಸ್ಥಾಪಿಸಿದ್ದರು.

ಆರ್ ಎನ್ ಶೆಟ್ಟಿ ಅವರು ಉದ್ಯಮಿಯಾಗಿ ಬಹುದೊಡ್ಡ ಹೆಸರು ಮಾಡಿದ್ದರು. 1967ರಲ್ಲಿ ಪಾಲುದಾರ ಕಂಪೆನಿಯಾದ ಆರ್ ಎನ್ ಶೆಟ್ಟಿ ಆಂಡ್ ಕಂಪನಿ ಆರಂಭಿಸಿ ಆ ಕಂಪನಿ ಮೂಲಕ ಅನೇಕ ಸೇತುವೆ, ಅಣೆಕಟ್ಟುಗಳು, ಕಟ್ಟಡಗಳ ನಿರ್ಮಾಣ ಕಾರ್ಯ ಸೇರಿದಂತೆ ಲೋಕೋಪಕಾರಿ ಕಾರ್ಯಗಳನ್ನು ಮಾಡಿದ್ದರು.

ಮುರುಡೇಶ್ವರದಲ್ಲಿ ಸ್ಕೂಬಾ ಡೈವಿಂಗ್​: ಸಮುದ್ರದಾಳದ ಜಲಸಾಹಸಕ್ಕೆ ಪ್ರವಾಸಿಗರು ಫಿದಾ!

Published On - 8:17 am, Thu, 17 December 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ