ಲಾಲ್ಬಾಗ್ ಮಾದರಿಯಲ್ಲಿ ಕಬ್ಬನ್ ಪಾರ್ಕ್ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಬೆಂಗಳೂರಿನ ಕಬ್ಬನ್ ಪಾರ್ಕ್‌ಗೆ ಪ್ರವೇಶ ಶುಲ್ಕ ವಿಧಿಸುವ ಬಗ್ಗೆ ತೋಟಗಾರಿಕೆ ಇಲಾಖೆ ಚಿಂತನೆ ನಡೆಸಿದೆ. ಲಾಲ್ ಬಾಗ್ ಮಾದರಿಯಲ್ಲಿ ಪಾರ್ಕ್ ನಿರ್ವಹಣೆ, ಹೆಚ್ಚುತ್ತಿರುವ ಜನಸಂಖ್ಯೆ, ಭದ್ರತೆ ಮತ್ತು ಸ್ವಚ್ಛತಾ ವೆಚ್ಚಗಳನ್ನು ನಿಭಾಯಿಸಲು ಈ ನಿರ್ಧಾರ ಪರಿಗಣಿಸಲಾಗಿದೆ. ಆದರೆ, ಈ ಪ್ರಸ್ತಾಪಕ್ಕೆ ಬಡ ಮತ್ತು ಮಧ್ಯಮ ವರ್ಗದ ಜನರ ಕಡೆಯಿಂದ ವಿರೋಧ ವ್ಯಕ್ತವಾಗುತ್ತಿದೆ.
ಬೆಂಗಳೂರು, ಸೆಪ್ಟೆಂಬರ್ 21: ಲಾಲ್ ಬಾಗ್ ಮಾದರಿಯಲ್ಲಿ ಕಬ್ಬನ್ ಪಾರ್ಕ್‌ಗೆ ಪ್ರವೇಶ ಶುಲ್ಕ ವಿಧಿಸುವ ಕುರಿತು ತೋಟಗಾರಿಕೆ ಇಲಾಖೆ ಗಂಭೀರ ಚಿಂತನೆ ನಡೆಸಿದೆ. ಕಬ್ಬನ್ ಪಾರ್ಕ್ ಬೆಂಗಳೂರಿನ ಪ್ರಮುಖ ಉದ್ಯಾನವನಗಳಲ್ಲಿ ಒಂದು. ನಿತ್ಯ ಜನರ ದಂಡು ಹೆಚ್ಚುತ್ತಿದ್ದು, ವಾರಾಂತ್ಯದಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಜನಜಂಗುಳಿ ಉಂಟಾಗುತ್ತಿದೆ. 300 ಎಕರೆ ವಿಶಾಲವಾದ ಪಾರ್ಕ್ನ ಸ್ವಚ್ಛತೆ, ಭದ್ರತೆ ಮತ್ತು ನಿರ್ವಹಣಾ ವೆಚ್ಚ ದುಪ್ಪಟ್ಟು ಹಿನ್ನೆಲೆ ತೋಟಗಾರಿಕಾ ಇಲಾಖೆಗೆ ಆರ್ಥಿಕ ಹೊರೆ ಹೆಚ್ಚಾಗಿದೆ. ಹೀಗಾಗಿ ಪ್ರವೇಶ ಶುಲ್ಕ್ ನಿಗದಿ ಮಾಡಿದರೆ ನಿರ್ವಹಣೆ ಸುಲಭ, ಇಲಾಖೆಗೆ ಆದಾಯವೂ ಬರುತ್ತೆ ಎಂಬ ಲೆಕ್ಕಾಚಾರ ಇದೆ. ಸದ್ಯ ಈ ಬಗ್ಗೆ ತೋಟಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳ ಮಟ್ಟದಲ್ಲಿ ಗಂಭೀರ ಚರ್ಚೆ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

