AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ, ಬೀದರ್ ನಗರಗಳನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಪಣ: ಈಶ್ವರ ಖಂಡ್ರೆ ಘೋಷಣೆ

ಜೂ.5ರಂದು ಘೋಷಿಸಿದಂತೆ, ಈ ವರ್ಷ ಐದು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ, ಪಟ್ಟಣ ಮಾಡುವ ಸಂಕಲ್ಪ ಮಾಡಿದ್ದು, ಇದರಲ್ಲಿ ಕಲ್ಯಾಣ ಕರ್ನಾಟಕದ ಎರಡು ನಗರಗಳೂ ಸೇರಿವೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಕಲಬುರಗಿ, ಬೀದರ್ ನಗರಗಳನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಪಣ: ಈಶ್ವರ ಖಂಡ್ರೆ ಘೋಷಣೆ
ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ
Rakesh Nayak Manchi
|

Updated on: Jul 09, 2023 | 8:37 PM

Share

ಕಲಬುರಗಿ: ವಿಶ್ವ ಪರಿಸರ ದಿನದಂದು ಐದು ನಗರ ಅಥವಾ ಪಟ್ಟಣವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡುವುದಾಗಿ ಘೋಷಿಸಿದ್ದ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಇಂದು ಆ ಐದು ನಗರಗಳ ಪೈಕಿ ಎರಡು ನಗರಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅವರು, ಕಲ್ಯಾಣ ಕರ್ನಾಟಕದ ಕಲಬುರಗಿ (Kalaburagi) ಮತ್ತು ಬೀದರ್ (Bidar) ನಗರಗಳನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರಗಳಾಗಿ ಮಾಡಲಾಗುವುದು ಎಂದು ಘೋಷಿಸಿದರು.

ನಾನಕ್ ಝೀರಾ, ಬಂದೇ ನವಾಜ್ ದರ್ಗಾ, ಝರಣಿ ನರಸಿಂಹ ದೇವಾಲಯ, ಸಂತ ಪಾಲರ ಮೆಥಾಡಿಸ್ಟ್ ಚರ್ಚ್ ಇರುವ ಸರ್ವ ಜನಾಂಗದ ಶಾಂತಿಯ ತೋಟವಾದ ಬೀದರ್ ನಗರ, ಐತಿಹಾಸಿಕ ನಗರಿ ಕಲಬುರಗಿಯನ್ನು ಪ್ರಥಮ ಹಂತದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲಾಗುವುದು. ಹಂತ ಹಂತವಾಗಿ ಉಳಿದ ನಗರಗಳನ್ನೂ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲಾಗುವುದು ಎಂದರು.

ಏಕ ಬಳಕೆ ಪ್ಲಾಸ್ಟಿಕ್ ನೀರಲ್ಲಿ ಕರಗುವುದಿಲ್ಲ. ಮಣ್ಣಲ್ಲಿ ಮಣ್ಣಾಗುವುದಿಲ್ಲ. ಜೈವಿಕವಾಗಿ ವಿಘಟನೆಯೂ ಆಗುವುದಿಲ್ಲ. ಬದಲಾಗಿ ಭೂಮಿಗೆ ಸೇರಿ ವಿಷವಾಗುತ್ತಿದೆ. ಕಸದ ರಾಶಿಯಾಗಿ ದೊಡ್ಡ ಸಮಸ್ಯೆ ತರುತ್ತಿದೆ. ಏಕ ಬಳಕೆ ಪ್ಲಾಸ್ಟಿಕ್​ನಲ್ಲಿ ಮನೆಯ ಕಸ ಎಲ್ಲ ಗಂಟು ಕಟ್ಟಿ ಜನ ಹೊರಗೆ ಎಸೆಯುತ್ತಿದ್ದಾರೆ. ಇದರಿಂದ ಮಳೆ ನೀರು ಚರಂಡಿಗಳು ಕಟ್ಟಿಕೊಂಡು ರಸ್ತೆಯಲ್ಲಿ ಪ್ರವಾಹ ಸ್ಥಿತಿ ಉಂಟಾಗುತ್ತದೆ. ಪ್ಲಾಸ್ಟಿಕ್ ಕವರ್​ಗಳಲ್ಲಿ ಉಳಿದ ಅನ್ನ, ಕತ್ತರಿಸಿದ ತರಕಾರಿ ತುಂಬಿ ಎಸೆಯುವ ಕಾರಣ, ಅದನ್ನು ತಿನ್ನುವ ದನಕರುಗಳ ಹೊಟ್ಟೆಗೆ ಪ್ಲಾಸ್ಟಿಕ್ ಸೇರಿ ಸಾವಿಗೀಡಾಗುತ್ತಿವೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಲಬುರಗಿ-ಬೀದರ್​ ಪ್ಯಾಸೆಂಜರ್ ರೈಲಿನ ಮೇಲೆ ಕಲ್ಲು ತೂರಾಟ; ಓರ್ವ ಮಹಿಳೆಗೆ ಗಾಯ

ಪ್ಲಾಸ್ಟಿಕ್ ಕಸದ ರಾಶಿಗೆ ಬೆಂಕಿ ಹಚ್ಚುವ ದುರಭ್ಯಾಸವೂ ಕೆಲವರಿಗಿದೆ. ಇದರಿಂದ ವಿಷಕಾರಿ ಹೊಗೆ ಪರಿಸರ ಸೇರಿ ಆಸ್ತಮಾ, ಉಸಿರಾಟದ ಸಮಸ್ಯೆ ಉಂಟಾಗುತ್ತಿದೆ. ಈ ತೀವ್ರತೆ ಅರಿತು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಕಲ್ಪನೆಯನ್ನು ಸಾಕಾರ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಖಂಡ್ರೆ ಹೇಳಿದರು.

ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರಗಳಲ್ಲಿ ಪ್ಲಾಸ್ಟಿಕ್ ಉತ್ಪಾದನೆ, ಬಳಕೆ, ಮಾರಾಟ, ದಾಸ್ತಾನು ಆಗದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾಡಳಿತದ ಸಹಕಾರದೊಂದಿಗೆ ಏಕ ಬಳಕೆ ಪ್ಲಾಸ್ಟಿಕ್​ಗೆ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು.

ಹಸಿರು ವಲಯ ಕ್ರಾಂತಿಗೆ ಒತ್ತು:

ಪ್ರಸಕ್ತ ವರ್ಷ 5 ಕೋಟಿ ಸಸಿ ನೆಟ್ಟು ಪೋಷಿಸುವ ಮೂಲಕ ರಾಜ್ಯದಲ್ಲಿ ಹಸಿರು ವಲಯ ಕ್ರಾಂತಿ ಮಾಡಲು ನಿರ್ಧರಿಸಿರುವ ಅರಣ್ಯ ಇಲಾಖೆ, ಜುಲೈ 1 ರಿಂದ ಆರಂಭವಾದ ವನಮಹೋತ್ಸವದ ಪ್ರಥಮ 6 ದಿನಗಳಲ್ಲಿ 68 ಲಕ್ಷ ಸಸಿಗಳನ್ನು ನೆಟ್ಟಿದೆ ಎಂದು ಖಂಡ್ರೆ ತಿಳಿಸಿದರು.

ವನಮಹೋತ್ಸವದ ಸಂದರ್ಭದಲ್ಲಿ ನೆಟ್ಟಿರುವ ಎಲ್ಲ ಸಸಿಗಳೂ ಬೇರೂರಿ ಬೆಳೆದು ಹೆಮ್ಮರವಾಗುವುದನ್ನು ಖಾತ್ರಿಪಡಿಸಿಕೊಳ್ಳುವ ದೊಡ್ಡ ಸವಾಲು ಇದ್ದು, ಜಿಯೋ ಟ್ಯಾಗ್, ಆಡಿಟ್ ಮೂಲಕ ಇದನ್ನು ವ್ಯವಸ್ಥಿತವಾಗಿ ನಿಭಾಯಿಸಲಾಗುವುದು. ವರ್ಷವಿಡೀ ಗಿಡ ನೆಡುವ ಅಭಿಯಾನ ಮುಂದುವರಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ ವಿಜಯನಗರ ಹೊರತು ಪಡಿಸಿ ಉಳಿದ 5 ಜಿಲ್ಲೆಗಳಲ್ಲಿ ಅರಣ್ಯ ವ್ಯಾಪ್ತಿ ಶೇ.10ಕ್ಕಿ ಕಡಿಮೆ ಇದೆ. ಇಲ್ಲಿ ಹಸಿರು ವಲಯ ವ್ಯಾಪ್ತಿ ಹೆಚ್ಚಿಸಲು ಹೆಚ್ಚಿನ ಒತ್ತು ನೀಡಲಾಗಿದೆ. ಎತ್ತರದ ಗಿಡಗಳನ್ನು ಹಚ್ಚಿ, ಹಸಿರೀಕರಣ ಹೆಚ್ಚಿಸಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!